ರಾಜ್ಯದಲ್ಲಿ ತೆಲಂಗಾಣ ಮಾದರಿ ಸಂಚಾರ ನಿಯಮ ಜಾರಿ?
Team Udayavani, Aug 1, 2018, 6:00 AM IST
ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ, ಈ ನಿಟ್ಟಿನಲ್ಲಿ ತೆಲಂಗಾಣ ಮಾದರಿ ಸಂಚಾರ ನಿಯಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಹಾಗೊಂದು ವೇಳೆ ತೆಲಂಗಾಣ ಮಾದರಿ
ಜಾರಿಯಾದರೆ, ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಸುವವರ ಮೇಲೆ ಗರಿಷ್ಠ ಮಟ್ಟದ “ದಂಡ ಪ್ರಯೋಗ’ ನಡೆಯಲಿದೆ. ಅದರಲ್ಲೂ ಕೆಲವು ನಿರ್ದಿಷ್ಟ ನಿಯಮಗಳಲ್ಲಿ ದಂಡದ ಮೊತ್ತ ದುಪ್ಪಟ್ಟಿನಿಂದ ಹತ್ತುಪಟ್ಟುವರೆಗೂ ಹೆಚ್ಚಳ ಆಗಲಿದೆ. ಈ ಸಂಬಂಧ ಪೊಲೀಸ್ ಇಲಾಖೆ ಸಾರಿಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.
ರಾಜ್ಯದಲ್ಲಿ ಪ್ರಸ್ತುತ ಸಂಚಾರ ನಿಯಮಗಳಿದ್ದರೂ ಉಲ್ಲಂಘನೆ ಪ್ರಮಾಣ ಹೆಚ್ಚುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಂತಹ ಮಹಾನಗರಗಳಲ್ಲಿ ಸಿಗ್ನಲ್ ಜಂಪಿಂಗ್, ನಿಷೇಧಿತ ಪ್ರದೇಶದಲ್ಲಿ ವಾಹನಗಳ ನಿಲುಗಡೆ, ಅರ್ಹತಾ ಪ್ರಮಾಣ ಪತ್ರಗಳಿಲ್ಲದೆ ವಾಹನ ಚಾಲನೆ ಸೇರಿದಂತೆ ನಿರ್ದಿಷ್ಟ
ನಿಯಮಗಳ ಉಲ್ಲಂಘನೆ ಪ್ರಮಾಣ ತಲೆನೋವಾಗಿದೆ. ಈ ಹಿನ್ನೆಲೆಯಲ್ಲಿ ಗರಿಷ್ಠ ಮಟ್ಟದ ದಂಡ ಪ್ರಯೋಗ ಮಾಡಿ, ಉಲ್ಲಂಘನೆಗಳಿಗೆ ಕಡಿವಾಣ ಹಾಕುವುದು ಇದರ ಮುಖ್ಯಉದ್ದೇಶ. ಗರಿಷ್ಠ ಪ್ರಮಾಣದ ದಂಡ ವಿಧಿಸಿದರೆ, ಸಾಧ್ಯವಾದಷ್ಟು ನಿಯಮ ಉಲ್ಲಂಘನೆ ಪ್ರಕರಣಗಳು ಕಡಿಮೆ ಆಗಲಿವೆ. ಇದು ತೆಲಂಗಾಣದಲ್ಲಿ ಫಲ ನೀಡಿದೆ ಎಂಬುದು ಅಧಿಕಾರಿಗಳ ವಾದ. ಈ ಬಗ್ಗೆ ಸ್ವತಃ ಪೊಲೀಸ್ ಮಹಾನಿರ್ದೇಶಕರು ಈ ಪ್ರಸ್ತಾವವನ್ನು ಸರ್ಕಾರದ
ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತಾವನೆ ಬಂದಿದೆ -ಸಾರಿಗೆ ಇಲಾಖೆ: ಸಂಚಾರ ನಿಯಮಗಳನ್ನು ಉಲ್ಲಂಘನೆಗೆ ಸಂಬಂಧಿಸಿದಂತೆ ಕೇಂದ್ರವು ಸಾರಿಗೆ ನಿಯಮಗಳನ್ನು ಪರಿಷ್ಕರಣೆ
ಮಾಡುತ್ತಿದೆ. ಆದರೆ ಅದಕ್ಕೂ ಮುನ್ನ ತೆಲಂಗಾಣದಂತೆ ನಮ್ಮಲ್ಲೂ ಗರಿಷ್ಠ ದಂಡದ ನಿಯಮಗಳನ್ನು ತರುವ ಬಗ್ಗೆ ಚಿಂತನೆ ನಡೆದಿದೆ. ಒಟ್ಟಾರೆ ಉದ್ದೇಶ ಕಠಿಣ ನಿಯಮಗಳನ್ನು ಜಾರಿಗೊಳಿಸುವುದಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜು “ಉದಯವಾಣಿ’ಗೆ ಸ್ಪಷ್ಟಪಡಿಸಿದರು. ಈ ಪ್ರಸ್ತಾವನೆಯ ಪ್ರತಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು, ಪರಿಶೀಲನೆಗಾಗಿ ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದೆ. ಅದರ ಒಂದು ಪ್ರತಿಯನ್ನು ಗೃಹ ಇಲಾಖೆಗೆ ರವಾನಿಸಿದೆ ಎಂದೂ ಅವರು ಮಾಹಿತಿ ನೀಡಿದರು.
ಈ ಮಧ್ಯೆ ಬೆಂಗಳೂರು ಮಹಾನಗರದಲ್ಲೇ 5 ವರ್ಷಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಏರಿಕೆ ಕ್ರಮದಲ್ಲಿ ಸಾಗಿವೆ. ಪ್ರಸಕ್ತ ಸಾಲಿನಲ್ಲಿ ಜೂನ್ ಅಂತ್ಯಕ್ಕೆ 38.29 ಲಕ್ಷ ಪ್ರಕರಣಗಳಿಂದ 42.83 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ನಗರ ಪೊಲೀಸ್ ಹೆಚ್ಚುವರಿ ಆಯುಕ್ತ (ಸಂಚಾರ) ಆರ್. ಹಿತೇಂದ್ರ ತಿಳಿಸಿದರು. “ಆದರೆ, ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ತೆಲಂಗಾಣ ಮಾದರಿ ನಿಯಮ ಜಾರಿಗೆ ಕುರಿತ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸದ್ಯಕ್ಕೆ ನನಗೆ ಮಾಹಿತಿ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.
ತೆಲಂಗಾಣ ಮಾದರಿ ಹೇಳ್ಳೋದೇನು?
ಈಗಿರುವ ಮೋಟಾರು ವಾಹನ ಕಾಯ್ದೆ-1988ರಡಿ ಸಾರಿಗೆ ನಿಯಮಗಳನ್ನು ಉಲ್ಲಂ ಸುವವರಿಗೆ ವಿಧಿಸಲಾಗುತ್ತಿರುವ ದಂಡದ ಪ್ರಮಾಣ ಕಡಿಮೆ ಇದೆ. ಹಾಗಾಗಿ, ಇದರ ಬಿಸಿ ಅಷ್ಟಾಗಿ ತಟ್ಟುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ ಸೆಕ್ಷನ್ 200ರಡಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ಆದೇಶವು ಅವಿಭಜಿತ ಆಂಧ್ರಪ್ರದೇಶ ಇದ್ದಾಗಲೇ ಅಂದರೆ 2011ರ ಆಗಸ್ಟ್‌ನಲ್ಲೇ ಆಗಿದೆ.
ಒಂದು ವೇಳೆ ಕೇಂದ್ರದ ಪರಿಷ್ಕೃತ ನೀತಿ ಜಾರಿಯಾದರೆ, ರಾಜ್ಯದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ತೆಲಂಗಾಣ ಮಾದರಿಯ ನೀತಿ ಸಹಜವಾಗಿ ರದ್ದಾಗುತ್ತದೆ. ಆದರೆ, ಕಳೆದೆರಡು ವರ್ಷಗಳಿಂದ ಕೇಂದ್ರದ ನೀತಿಯನ್ನು ಎದುರು ನೋಡುತ್ತಿದ್ದೇವೆ. ಅದು ಜಾರಿಗೆ ಬರುವವರೆಗೂ ರಾಜ್ಯದ ಮಟ್ಟಿಗೆ ಹೊಸ ನೀತಿ ತರುವ ಚಿಂತನೆ ನಡೆದಿದೆ.
● ಬಿ. ಬಸವರಾಜು, ಪ್ರಧಾನ ಕಾರ್ಯದರ್ಶಿ, ಸಾರಿಗೆ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.