ಮಾರ್ಚ್ 15ಕ್ಕೆ ಪರಿಷತ್ ಉಪಚುನಾವಣೆ
ಮಾರ್ಚ್ 18ರೊಳಗೆ ಉಪ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಕೊನೆಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.
Team Udayavani, Feb 19, 2021, 10:43 AM IST
ಬೆಂಗಳೂರು : ವಿಧಾನ ಪರಿಷತ್ತಿನ ಉಪ ಸಭಾಪತಿಯಾಗಿದ್ದ ದಿವಂಗತ ಎಸ್ ಎಲ್ ಧರ್ಮೇಗೌಡ ನಿಧನದಿಂದಾಗಿ ತೆರವಾಗಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಮಾರ್ಚ್ 15 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಉಪ ಚುನಾವಣೆಗೆ ಅಧಿಸೂಚನೆಯನ್ನು ಫೆಬ್ರವರಿ 25ರಂದು ನೀಡಲಾಗುವುದು. ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ ನಾಲ್ಕನೇ ತಾರೀಕು ಕೊನೆಯ ದಿನಾಂಕ ಹಾಗೂ ವಾಪಾಸ್ ಪಡೆಯಲು ಮಾರ್ಚ್ 8 ಕೊನೆಯ ದಿನಾಂಕವೆಂದು ಚುನಾವಣೆ ಆಯೋಗ ಆದೇಶ ಹೊರಡಿಸಿದೆ.
ಓದಿ : ತುಳು ಚಿತ್ರರಂಗ @50: ‘ಎನ್ನ ತಂಗಡಿ’ ಯಿಂದ ‘ಗಮ್ಜಾಲ್’ ವರೆಗೆ ಚಿತ್ರರಂಗ ನಡೆದು ಬಂದ ಪಯಣ
ಉಪ ಚುನಾವಣೆಯು ಮಾರ್ಚ್ 15 ನೇ ತಾರೀಕಿನಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ರ ತನಕ ನಡೆಯಲಿದೆ. ಚುನಾವಣೆಯ ಮತ ಎಣಿಕೆಯೂ ಅದೇ ದಿನ ನಡೆಯಲಿದ್ದು, ಮಾರ್ಚ್ 18ರೊಳಗೆ ಉಪ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಕೊನೆಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.
ಚುನಾವಣೆಯು ಸರ್ಕಾರದ ಕೋವಿಡ್ ಮಾರ್ಗ ಸೂಚಿಯನ್ನು ಅನುಸರಿಸಿ ನಡೆಯಲಿದೆ ಎಂದು ಕೂಡ ತಿಳಿಸಿದೆ.
64 ವರ್ಷದ ಜೆಡಿ ಎಸ್ ಎಮ್ ಎಲ್ ಸಿ ಎಸ್ ಎಲ್ ಧರ್ಮೇಗೌಡ ಡಿಸೆಂಬರ್ 29ರ ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು.
ಕಳೆದ ಡಿಸೆಂಬರ್ 15ರಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಗಲಭೆಗೆ ಸಂಬಂಧಿಸಿದಂತೆ ಧರ್ಮೇಗೌಡರು ಬೇಸರಗೊಂಡಿದ್ದರು ಎಂಬ ಸುದ್ದಿ ಆ ಸಂದರ್ಭದಲ್ಲಿ ಹರಿದಾಡಿತ್ತು.
ವಿಧಾನ ಪರಿಷತ್ತಿನ ಆಗಿನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರ ಸ್ಥಾನದಲ್ಲಿ ಧರ್ಮೇ ಗೌಡರು ಕಾನೂನು ಬಾಹೀರವಾಗಿ ಕೂತಿದ್ದರು ಎಂದು ಆಕ್ಷೇಪಿಸಿ ಕೆಲವು ಕಾಂಗ್ರೆಸ್ ಶಾಸಕರು ಧರ್ಮೇಗೌಡರನ್ನು ಆ ಸ್ಥಾನದಿಂದ ಕೆಳಗಿಳಿಸಿದ್ದರು. ಹಾಗೂ ಇದು ಪ್ರತಾಪ್ ಚಂದ್ರ ಶೆಟ್ಟಿಯವರ ವಿರುದ್ಧ ಅವಿಶ್ವಾಸ ತೋರ್ಪಡಿಸುವುದಕ್ಕೆ ಬಿಜೆಪಿ ಮತ್ತು ಜೆಡಿಎಸ್ ಹೂಡಿದ ಕುತಂತ್ರ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಓದಿ : ಕರಾವಳಿಯಲ್ಲಿ ಹಲವೆಡೆ ಉತ್ತಮ ಮಳೆ: ಒಣಹಾಕಿದ ಅಡಿಕೆ ಒದ್ದೆ, ರೈತರಿಗೆ ನಷ್ಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.