ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿಗೆ?
Team Udayavani, Mar 1, 2023, 7:49 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ದಾವಣಗೆರೆಗೆ ಆಗಮಿಸುತ್ತಿರುವ ಸಂದರ್ಭದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಶಾಕ್ ನೀಡಲು ಮುಂದಾಗಿದ್ದು, ನಿವೃತ್ತ ಐಪಿಎಸ್ ಅಧಿಕಾರಿ, ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ.
ಯಾವುದೇ ಸ್ಥಾನಮಾನ ನಿರೀಕ್ಷೆ ಇಲ್ಲದೆ ಪಕ್ಷ ಸೇರ್ಪಡೆಗೆ ಭಾಸ್ಕರ್ ರಾವ್ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದ್ದು, ಬುಧವಾರ ಬೆಳಗ್ಗೆಯೇ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಪೃಥ್ವಿ ರೆಡ್ಡಿ ಆಪ್ ರಾಜ್ಯಾಧ್ಯಕ್ಷರಾಗಿ ಮುಂದುವರಿದ ಬಳಿಕ ಪಕ್ಷದ ಚಟುವಟಿಕೆಗಳಿಂದ ತುಸು ದೂರವಾಗಿದ್ದ ಭಾಸ್ಕರ್ ರಾವ್, ಚುನಾವಣ ಹೊಸ್ತಿಲಲ್ಲಿ ಬಿಜೆಪಿ ಸೇರುತ್ತಿದ್ದಾರೆ.
ಅಣ್ಣಾಮಲೈ ಮಹತ್ವದ ಪಾತ್ರ
ರಾಜ್ಯ ಚುನಾವಣ ಸಹ ಉಸ್ತುವಾರಿ, ನಿವೃತ್ತ ಐಪಿಎಸ್ ಕೆ. ಅಣ್ಣಾಮಲೈ ಅವರು ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ ಹಿಂದೆ ಮಹತ್ವದ ಪಾತ್ರ ವಹಿಸಿದ್ದಾರೆಂದು ಹೇಳಲಾಗಿದೆ.
ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅಣ್ಣಾಮಲೈ ಜತೆ ಭಾಸ್ಕರ್ ರಾವ್ ಚರ್ಚೆ ನಡೆಸಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಂಘ-ಪರಿವಾರದ ಹಿರಿಯರನ್ನು ಈ ಹಿಂದೆಯೇ ಅವರು ಭೇಟಿ ಮಾಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.