Karnataka: ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ 558 ಕೋಟಿ ರೂ.: ಕೃಷ್ಣ ಬೈರೇಗೌಡ
Team Udayavani, Jul 22, 2023, 6:10 AM IST
ವಿಧಾನಸಭೆ: ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಬಿತ್ತನೆ ಗುರಿಯಿತ್ತು. ಈವರೆಗೆ 36.27 ಲಕ್ಷ ಹೆಕ್ಟೇರ್ ಮಾತ್ರ ಬಿತ್ತನೆಯಾಗಿದೆ. 64,188 ಹೆಕ್ಟೇರ್ ತೋಟಗಾರಿಕಾ ಬೆಳೆ ಬಿತ್ತನೆಯಾಗಿದ್ದು, ನಿರೀಕ್ಷಿತ ಗುರಿಗಿಂತ ಶೇ.23ರಷ್ಟು ಮಾತ್ರ ಬಿತ್ತನೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ವಿಧಾನಸಭೆಯಲ್ಲಿ ಮುಂಗಾರು ಕೊರತೆ ಸಂಬಂಧ ಚರ್ಚೆಯಲ್ಲಿ ಮಾತನಾಡಿ, ಕಳೆದ ಬಾರಿ ಇದೇ ವೇಳೆಗೆ 73,218 ಹೆಕ್ಟೇರ್ ತೋಟಗಾರಿಕಾ ಬೆಳೆ ಬಿತ್ತನೆಯಾಗಿತ್ತು. ರಾಜ್ಯದಲ್ಲಿ 1.15 ಕೋಟಿ ದನಕರುಗಳು ಹಾಗೂ 1.55 ಕೋಟಿ ಕುರಿ, ಮೇಕೆಗಳಿದ್ದು, 1.55 ಕೋಟಿ ಟನ್ ಮೇವು ಲಭ್ಯವಿದೆ. 29 ವಾರಗಳ ಬಳಕೆಗೆ ಸಾಕಾಗುತ್ತದೆ. 13 ವಾರಗಳಿಗಿಂತ ಕಡಿಮೆ ಮೇವು ಹೊಂದಿರುವ ಯಾವುದೇ ಜಿಲ್ಲೆ ಇಲ್ಲ. ಮೇವು ಕೊರತೆ ಆಗದಂತೆ ರೈತರಿಗೆ ಮೇವಿನ ಬೀಜ ವಿತರಿಸಿ, ಮೇವು ಬೆಳೆಯಲು ಪ್ರೋತ್ಸಾಹಿಸಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿ ಪಿ.ಡಿ. ಖಾತೆಯಲ್ಲಿ 558.38 ಕೋಟಿ ರೂ. ಅನುದಾನ ಲಭ್ಯವಿದ್ದು, ಅನುದಾನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮೇಲ್ಮನೆಯಲ್ಲೂ ಸಿಎಂ ಭರವಸೆ
ವಿಧಾನ ಪರಿಷತ್ತು: ರಾಜ್ಯದಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಕುಡಿಯುವ ನೀರಿಗೆ ಹಣಕಾಸಿನ ಕೊರತೆ ಇಲ್ಲ. ಎಷ್ಟೇ ಖರ್ಚಾದರೂ ಕೊಳವೆಬಾವಿ, ಟ್ಯಾಂಕರ್‌ಗಳಿಂದ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲಾಗುವುದು. ಯಾವುದೇ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಮರಿತಿಬ್ಬೇಗೌಡ, ರಾಜ್ಯದಲ್ಲಿ ಮಳೆ ಕೊರತೆ ಇದೆ. ಬರದಛಾಯೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗಮನಸೆಳೆದರು. ಆಗ ಮುಖ್ಯಮಂತ್ರಿ ಈ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
MUST WATCH
ಹೊಸ ಸೇರ್ಪಡೆ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.