ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು: ಸಿಎಂ ಬೊಮ್ಮಾಯಿ

Team Udayavani, Sep 26, 2022, 12:49 PM IST

ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು: ಸಿಎಂ ಬೊಮ್ಮಾಯಿ

ಮೈಸೂರು: ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ 2022ರ ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ರಂಗಗಳಲ್ಲಿ ಕಟ್ಟುವ ಕೆಲಸ ಮಾಡಬೇಕಿದೆ. ನಮ್ಮಲ್ಲಿರುವ ಬಡ ಜನರ ಬದುಕನ್ನು ಎತ್ತರಕ್ಕೆ ಕೊಂಡೊಯ್ಯಬೇಕಿದೆ. ಸರ್ವರಿಗೂ ಲೇಸನ್ನು ಬಯಸುವ ಕಲ್ಯಾಣದ ಚಿಂತನೆಯ ಅವಶ್ಯಕತೆ ಇದೆ. ಅಂಥ ಸದ್ಭುದ್ಧಿ ನೀಡಿ, ಕನ್ನಡ ನಾಡನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿ ಎಂದರು.

ಈ ಬಾರಿ ದಸರಾ ಹಲವಾರು ವಿಶೇಷತೆಗಳಿಂದ ಕೂಡಿವೆ. ಕಳೆದ 2 ವರ್ಷಗಳಿಗಿಂತ ಅರ್ಥಪೂರ್ಣವಾಗಿ, ಗತವೈಭವವನ್ನು ನೆನೆಪಿಸುವ ರೀತಿಯಲ್ಲಿ ಅದ್ದೂರಿಯಾಗಿ ನಾವೆಲ್ಲರೂ ಒಟ್ಟಾಗಿ ಆಚರಣೆ ಮಾಡುತ್ತಿದ್ದೇವೆ. ದಸರಾ ನಾಡ ಹಬ್ಬ. ನಮ್ಮ ನಾಡಿನ ದುಡಿಯುವ ವರ್ಗದ ಕಾರ್ಮಿಕರು, ರೈತರು, ಸಾಮಾನ್ಯ ಜನರು ಮನೆ, ಮನೆಯಲ್ಲಿ ದಸರಾ ಆಚರಿಸಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದು ನಾಡಿನ ಅಭಿವೃದ್ಧಿ, ಸಮೃದ್ಧಿ, ಸುಭಿಕ್ಷೆಯಿಂದ ಇಡಲು ನಾವು ಪ್ರಾರ್ಥಿಸಬೇಕು. ಸದಾ ಕಾಲ ಆ ದೇವಿ ನಮ್ಮ ಪ್ರಾರ್ಥನೆಗೆ ಓಗೊಟ್ಟು ಕಾಲಕಾಲಕ್ಕೆ ಮಳೆ, ಬೆಳೆ ಕೊಟ್ಟು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಶಕ್ತಿಯ ಆಶೀರ್ವಾದ ನೀಡುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಚಾಮುಂಡಿ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ತಾಯಿಯ ಶಕ್ತಿ ಪೀಠ ಇಡೀ ನಾಡಿಗೆ ಶಕ್ತಿ ನೀಡುತ್ತಿದೆ. ಅದರ ಫಲವಾಗಿ ಮೈಸೂರು ಮಹಾರಾಜರ ಕಾಲದಿಂದ ಈ ದೇವಿಯ ಪೂಜೆಯನ್ನು ಪ್ರಜಾಪ್ರಭುತ್ವ ಬಂದ ನಂತರವೂ ಮುಂದುವರೆಸಲಾಗುತ್ತಿರುವುದು ಒಂದು ವೈಶಿಷ್ಟ್ಯ ಎಂದರು.

ಇದನ್ನೂ ಓದಿ:RSS, BJP ಕಚೇರಿ, ಮನೆ ಮೇಲೆ ದಾಳಿ: ತಮಿಳುನಾಡು ಪೊಲೀಸರಿಂದ ಪಿಎಫ್ ಐ ಕಾರ್ಯಕರ್ತರ ಬಂಧನ

ಗತಕಾಲದ ವೈಭವದ ಜೊತೆಗೆ ಪ್ರಸ್ತುತ ಕಾಲದ ಕನ್ನಡ ನಾಡಿನ ಶ್ರೇಯೋಭಿವೃದ್ಧಿ ಅಷ್ಟೇ ಮುಖ್ಯ. ಇಂದಿನ ಹತ್ತು ಹಲವಾರು ನೈಸರ್ಗಿಕ ಸವಾಲುಗಳನ್ನು, ನಾವು ಸಮರ್ಥವಾಗಿ ಎದುರಿಸಿ ಜನಕಲ್ಯಾಣದ ಕಡೆ ದಾಪುಗಾಲು ಹಾಕುತ್ತಿದ್ದೇವೆ ಎಂದು ತಿಳಿಸಿದರು.

ನಾಡ ದೇವಿ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2022ರ ದಸರಾ ಮಹೋತ್ಸವದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು   ಕಾರ್ಯಕ್ರಮ ನೆರವೇರಿಸಿರುವುದು ಸಂತೋಷದ ಹಾಗೂ ಅತ್ಯಂತ ಅಪರೂಪದ ಘಟನೆ. ಇತ್ತೀಚಿನ ದಿನಗಳಲ್ಲಿ ರಾಷ್ಟಪತಿ ಯೊಬ್ಬರು ದಸರಾ ಉದ್ಘಾಟನೆ ಮಾಡಿರುವ ಉದಾಹರಣೆ ಇಲ್ಲ. ಅವರಿಗೆ ಆಹ್ವಾನ ನೀಡಿದ ಕೂಡಲೇ ಒಪ್ಪಿಗೆ ಸೂಚಿಸಿ, ರಾಷ್ಟಪತಿಯಾದ ನಂತರ ಭೇಟಿ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ ಎಂದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

SOMANNA-2

Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.