ರಾಜ್ಯ ಬಜೆಟ್ ; ಪ್ರಾಥಮಿಕ, ಉನ್ನತ ಶಿಕ್ಷಣ ವಲಯಕ್ಕೆ ಸಿಕ್ಕಿದ್ದೇನು?
Team Udayavani, Feb 8, 2019, 11:01 AM IST
ಬೆಂಗಳೂರು: 2019-2020ರ ರಾಜ್ಯ ಅಯವ್ಯಯ ಮಂಡನೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಲಯದಲ್ಲಿ ಕಲಿಕೆಯ ಗುಣಮಟ್ಟ ಉತ್ತಮ ಪಡಿಸುವ ಗುರಿಯೊಂದಿಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
1)ಶಾಲೆಗಳ ಮೂಲಭೂತ ಸೌಕರ್ಯ ಆಧುನೀಕರಣಕ್ಕೆ ಕ್ರಮದ ಹಿನ್ನೆಲೆಯಲ್ಲಿ 1500 ಹೊಸ ಶಾಲಾ ಕೊಠಡಿ ನಿರ್ಮಾಣ, 5000 ಶಾಲಾ ಕೊಠಡಿ ಉನ್ನತೀಕರಣ, 1000 ಶಾಲೆಗಳಿಗೆ ಕಲಿಕಾ ಉಪಕರಣ ವಿತರಣೆ ಹಾಗೂ ಶಾಲಾ ಕಟ್ಟಡಗಳ ನಿರ್ವಹಣೆಗೆ ಒಬ್ಬ ಎಸ್ಟೇಟ್ ಅಧಿಕಾರಿ ನೇಮಕ.
2)ಗುರುಚೇತನ ಕಾರ್ಯಕ್ರಮದಡಿ 1 ಲಕ್ಷ ಶಿಕ್ಷಕರಿಗೆ 10 ದಿನಗಳ ತರಬೇತಿ, ಶಾಲಾ ಆಡಳಿತದಲ್ಲಿ ಪಾರದರ್ಶಕತೆ ತರಲು ಆರ್ ಟಿಇ ಕಾಯ್ದೆಯಡಿ ರಚಿಸಲಾಗಿರುವ ಮೇಲುಸ್ತುವಾಗಿ ಸಮಿತಿಗಳಿಗೆ ಹೆಚ್ಚಿನ ಹೊಣೆಗಾರಿಕೆ. ಪ್ರತಿ ಶಿಕ್ಷಣ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆಗಳ ರಿಪೋರ್ಟ್ ಕಾರ್ಡ್ ತಯಾರಿ, ಶಿಕ್ಷಕರ ಪಾಲಕರ ಸಭೆಯಲ್ಲಿ ಚರ್ಚಿಸಿ ಶಾಲೆಗಳ ಗುಣಮಟ್ಟ ಹೆಚ್ಚಳಕ್ಕೆ ಕ್ರಮ.
3) ಕಲಿಕೆಯ ಫಲಿತಾಂಶ ಸುಧಾರಣೆಗೆ ಆದ್ಯತೆ, ಟೀಚರ್-ಮೆಂಟರ್ ಕಾರ್ಯಕ್ರಮದ ಮುಖಾಂತರ ಶಿಕ್ಷಕರಿಗೆ ಅರಿವು ಮೂಡಿಸುವ ಕ್ರಮ, ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಮಕ್ಕಳ ಮೇಲೆ ವೈಯಕ್ತಿಕ ಗಮನ ಹರಿಸಲು ಕ್ರಮ.
4)ಮುಂದಿನ 4 ವರ್ಷದಲ್ಲಿ ಹೋಬಳಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸುವ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸ್ಥಾಪನೆ. ಈ ಶಾಲೆಗಳಿಗೆ ಕೇಂದ್ರೀಯ ವಿದ್ಯಾಲಯ ಮಾದರಿಯ ಪ್ರತ್ಯೇಕ ಸಂಘಟನೆ ಹಾಗೂ ಮಾರ್ಗಸೂಚಿ ನಿಗದಿ.
5) ಸರ್ಕಾರಿ ಶಾಲಾ ಶಿಕ್ಷಕರಿಗೆ ಭಾಷಾ ವಿಷಯಗಳಲ್ಲಿ ನಿರಂತರ ತರಬೇತಿ ನೀಡಲು 2 ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಆಲೂರು ವೆಂಕಟರಾವ್ ಅವರ ಹೆಸರಿನಲ್ಲಿ ಸುಸಜ್ಜಿತ ಭಾಷಾ ಕೌಶಲ್ಯ ತರಬೇತಿ ಕೇಂದ್ರ ಪ್ರಾರಂಭ
6) ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅರಳಿಸಲು ಹಾಗೂ ಆರೋಗ್ಯಕರ ಸ್ಪರ್ಧೆಗೆ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಿ ಸಜ್ಜುಗೊಳಿಸಲು ಸ್ಪರ್ಧಾ ಕಲಿ ಯೋಜನೆ ಪ್ರಾರಂಭ. ರಾಷ್ಟ್ರೀಯ ಪ್ರತಿಭಾನೇಷ್ವಣೆ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಪ್ರತಿ ಶೈಕ್ಷಣಿಕ ಜಿಲ್ಲೆಯ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು 15 ಕೋಟಿ ರೂ. ಅನುದಾನ.
7)ಎಸ್ ಎಸ್ ಎಲ್ ಸಿ ಮೌಲ್ಯ ಮಾಪನ ಕೇಂದ್ರಗಳ ಡಿಜಿಟಲೀಕರಣಕ್ಕೆ 1 ಕೋಟಿ ರೂ. ಅನುದಾನ. ಪದವಿ ಪೂರ್ವ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಆಸಕ್ತಿ ವಿಷಯದಲ್ಲಿ ವೃತ್ತಿ ಶಿಕ್ಷಣದ ತರಬೇತಿ ನೀಡಲು 2 ಕೋಟಿ ರೂ. ಅನುದಾನ.
ಉನ್ನತ ಶಿಕ್ಷಣಕ್ಕೆ ಸಿಕ್ಕಿದ್ದೇನು?
ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಹೊಸ ಪೀಳಿಗೆ ಉನ್ನತ ಶಿಕ್ಷಣ ಕಾರ್ಯಕ್ರಮದ ಮೂಲಕ ಉನ್ನತ ಶಿಕ್ಷಣದಲ್ಲಿ ಹೊಸ ಕಲಿಕೆಯ ವಿಧಾನಗಳ ಅಳವಡಿಕೆ. ಇದಕ್ಕಾಗಿ ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ರಚನೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಡೆಸಲು ಕ್ರಮ.
ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಆಧಾರಿತ ಡಿಜಿಟಲ್ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಆನ್ ಲೈನ್ ಮೂಲಕ ವಿತರಣೆ ಹಾಗೂ ದೃಡೀಕರಣ ವಿಧಾನ ಜಾರಿಗೆ 2 ಕೋಟಿ ರೂ. ಅನುದಾನ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮರುವಿಂಗಡಣೆ ಮಾಡಿ, ಹಾಸನದಲ್ಲಿ ಒಂದು ಹೊಸ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.