ಬಜೆಟ್; ಗ್ರಾಮೀಣಾಭಿವೃದ್ದಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳು ಎಷ್ಟು?
Team Udayavani, Feb 8, 2019, 12:17 PM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿದ್ದ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಗೆ ಘೋಷಿಸಿರುವ ಅನುದಾನದ ವಿವರ ಇಲ್ಲಿದೆ.
1)2019ನ್ನು ಜಲವರ್ಷ ಎಂದು ಘೋಷಣೆ. ಜಲಾಮೃತ ಯೋಜನೆಯಡಿ 20,000 ಜಲಸಂರಕ್ಷಣಾ ಕಾಮಗಾರಿಗಳನ್ನು ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಕಾಮಗಾರಿಗಳಡಿ ನಿರ್ವಹಿಸಲು 500 ಕೋಟಿ ರೂ. ಅನುದಾನ.
2)ರಾಯಚೂರು, ವಿಜಯಪುರ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ 4000 ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಮೊದಲ ಹಂತದ ಯೋಜನೆ ಪ್ರಾರಂಭಿಸಲು ಕ್ರಮ. ನರೇಗಾ ಯೋಜನೆಯಡಿ 12 ಕೋಟಿ ಮಾನವ ದಿನಗಳ ಸೃಜನೆಯ ಗುರಿ.
3)ಸುಭದ್ರ ಶಾಲೆ ಯೋಜನೆಯಡಿ ರಾಜ್ಯದ 6825 ಗ್ರಾಮೀಣ ಶಾಲೆಗಳಿಗೆ ನರೇಗಾ ಯೋಜನೆಯಡಿ 90 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಪೌಂಡ್ ತಡೆಗೋಡೆಗಳ ನಿರ್ಮಾಣ. 1000 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿಗಾಗಿ ಒಣ ಮತ್ತು ಹಸಿ ತ್ಯಾಜ್ಯವನ್ನು ವಿಂಗಡಿಸಿ ಒಣ ಕಸಿ ಮರುಬಳಕೆ ಹಾಗೂ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಸ್ವಚ್ಛಮೇವ ಜಯತೆ ಆಂದೋಲನ.
4) ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳ ಡಿಜಿಟಲೀಕರಣ; ತೆರಿಗೆ ವ್ಯಾಪ್ತಿಯ ಹೊರಗೆ ಉಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಸೇರ್ಪಡೆಗೆ ಕ್ರಮ. ಪ್ರತಿ ಜಿಲ್ಲಾ ಪಂಚಾಯತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಗರಿಷ್ಠ 8 ಕೋಟಿ ರೂ.ಗಳಿಗೆ ಹೆಚ್ಚಳ. ಇದಕ್ಕಾಗಿ 172 ಕೋಟಿ ರೂ. ಅನುದಾನ.
5) ಪ್ರತಿ ತಾಲೂಕು ಪಂಚಾಯತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಗರಿಷ್ಠ 2 ಕೋಟಿ ರೂ.ಗಳವರೆಗೆ ಹೆಚ್ಚಳ. ಇದಕ್ಕಾಗಿ 372 ಕೋಟಿ ರೂ.ಅನುದಾನ. ಮಹಾತ್ಮ ಗಾಂಧೀಜಿಯವರು 150ನೇ ಜಯಂತಿ ಅಂಗವಾಗಿ ಗ್ರಾಮ ಪಂಚಾಯತಿಗಳ ಆಡಳಿತದಲ್ಲಿ ಪಾರದರ್ಶಕತೆ ಬಿಂಬಿಸಲು ಮತ್ತು ಸಾರ್ವಜನಿಕರ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಅಯವ್ಯಯ ಕಿರು ಪುಸ್ತಕ ಪ್ರಕಟಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.