ತಾರಾ ಹೋಟೆಲ್‌: 3 ಕೋಟಿ ರೂ. ಷೇರು ಬಂಡವಾಳ

Team Udayavani, Jul 6, 2018, 6:00 AM IST

u-36.jpg

ತಾರಾ ಹೋಟೆಲ್‌ಗ‌ಳನ್ನು ನಿರ್ಮಿಸಲು ಮುಂದಾಗುವ ಖಾಸಗಿ ಕಂಪೆನಿಗಳಿಗೆ 3 ಕೋಟಿ ರೂ. ಷೇರು ಬಂಡವಾಳದ ಆಹ್ವಾನ ನೀಡಿರುವ ಸರ್ಕಾರವು ಪ್ರವಾಸೋದ್ಯಮದ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದೊಂದಿಗೆ ಮುನ್ನಡೆಯುವು ದಾಗಿ ಪ್ರಕಟಿಸಿದೆ.

ಕನಿಷ್ಠ 500 ಕೊಠಡಿಯ ತ್ರಿ ತಾರಾ ಹೋಟೆಲ್‌ ನಿರ್ಮಾಣಕ್ಕೆ ಷೇರು ಬಂಡವಾಳ ನೀಡುವುದಾಗಿ ಹೇಳಿರುವ ಸರ್ಕಾರ, ಸರ್ವಿಸ್‌ ಅಪಾರ್ಟ್‌ಮೆಂಟ್‌ ಗಳನ್ನು ನಿರ್ಮಿಸುವ ಸಂಸ್ಥೆಗಳಿಗೆ “ಟರ್ಮ್ ಸೀಟ್‌’ ಆಧಾರದ ಮೇಲೆ ಶೇ.30ರಷ್ಟು ಷೇರು ಬಂಡವಾಳ ನೀಡುವುದಾಗಿ ಹೇಳಿದೆ. ಜತೆಗೆ ಅಮ್ಯೂಸ್‌
ಮೆಂಟ್‌ ಪಾರ್ಕ್‌, ಜಲಕ್ರೀಡೆ ರೀತಿಯ ಸೌಲಭ್ಯ ಅಭಿವೃದಿಟಛಿಪಡಿಸುವ ಖಾಸಗಿ ಕಂಪೆನಿಗಳಲ್ಲಿ ಶೇ.30ರಷ್ಟು ಷೇರು ಬಂಡವಾಳ ಹೂಡಿಕೆಯ ಭರವಸೆ ನೀಡಿದೆ.

ಉದ್ಯಮಗಳಲ್ಲಿ ಹೂಡಿಕೆಗೆ ಈ ಸಾಲಿನಲ್ಲಿ 80 ಕೋಟಿ ರೂ. ಕಾಯ್ದಿರಿಸಿದೆ. ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿ ಸಂಸ್ಥೆಗಳಿಗೆ ಸರ್ಕಾರದಿಂದ ಅಗತ್ಯ ಉತ್ತೇಜನ ನೀಡಿ, 4 ವರ್ಷದ ನಂತರ ಸರ್ಕಾರದ ಹೂಡಿಕೆ ಹಣವನ್ನು ಹಿಂತೆಗೆದುಕೊಂಡು ಮತ್ತೆ ಸರ್ಕಾರಕ್ಕೆ ಜಮಾ ಮಾಡುವುದಾಗಿ ಹೇಳಿದೆ. ಈ ಪ್ರದೇಶದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೂಡಿಕೆ ಮಾಡುವ ಉದ್ದಿಮೆದಾರರು ಸ್ಥಳೀಯ ಕಾನೂನು ಹಾಗೂ ಪ್ರಾಧಿಕಾರಗಳ ಅನುಮೋದನೆ ಪಡೆಯುವುದು ಅವಶ್ಯಕ. ರಾಜ್ಯ ಸರ್ಕಾರ ಈಗಾಗಲೇ ಮಾಹಿತಿ ತಂತ್ರಜ್ಞಾನ ಉದ್ದಿಮೆ ಬಂಡವಾಳ ನಿಧಿ (ಕೆಐಟಿವಿಇಎನ್‌)ಮ್ಯಾನೇಜರ್‌ ಗಳನ್ನು ಹೂಡಿಕೆಗೆ ನೆರವು ನೀಡಲು ನೇಮಕಾತಿ ಮಾಡಿರುವುದರಿಂದ ಅವುಗಳನ್ನು ಹೂಡಿಕೆದಾರರು ಉಪಯೋಗಿಸಿಕೊಳ್ಳಬಹುದು. ಕೆಎಸ್‌ಟಿಡಿಸಿ ಸಂಸ್ಥೆಗೆ ಹೋಟೆಲ್‌ ಸೌಲಭ್ಯ ಕಲ್ಪಿಸಲು 80 ಕೋಟಿ ರೂ. ನೀಡಲು ಚಿಂತಿಸಿರುವುದಾಗಿ ತಿಳಿಸಿದೆ. ಪ್ರಸಕ್ತ
ಸಾಲಿನಿಂದ ಬೇಲೂರು, ಹಂಪಿ ಮತ್ತು ವಿಜಯಪುರದಲ್ಲಿ ವಿವಿಧ ಭಾಷೆಗಳಲ್ಲಿ ಪ್ರವಾಸಿ ಮಾರ್ಗದರ್ಶಿಗಳಾಗಿ ಕೆಲಸ ಮಾಡಲು ಆಸಕ್ತ ಯುವಕ-ಯುವತಿಯರಿಗೆ ತರಬೇತಿ ನೀಡಲು ಕೌಶಲ್ಯ ಅಭಿವೃದಿಟಛಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗುವುದು. ಎರಡು ವರ್ಷದ ಡಿಪ್ಲೊಮಾ ತರಬೇತಿ ನೀಡಲು ಈ ಮೂರು ಸ್ಥಳಗಳಲ್ಲಿ ಮುಂದೆ ಬರುವ ಖಾಸಗಿ ತರಬೇತಿ ಸಂಸ್ಥೆಗೆ ತಲಾ 60 ಲಕ್ಷ ರೂ. ಷೇರು ಬಂಡವಾಳದ ರೂಪದಲ್ಲಿ ನೀಡಲಾಗುತ್ತದೆ.

ಹೆಚ್ಚುವರಿ ಸೌಲಭ್ಯ
ಚಾಮರಾಜನಗರ ಜಿಲ್ಲೆಯ ಭರಚುಕ್ಕಿ ಜಲಪಾತ ಮತ್ತು ಮಂಡ್ಯ ಜಿಲ್ಲೆಯ ಗಗನಚುಕ್ಕಿ ಜಲಪಾತಗಳು ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ಇಲ್ಲಿ ಪ್ರವಾಸಿಗರ ಅನುಕೂಲಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಲು 5 ಕೋಟಿ ರೂ. ಮೀಸಲಿಡಲಾಗಿದೆ. ರಾಮನಗರ ಜಿಲ್ಲೆಯಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಸದೃಢಗೊಳಿಸಲು ರಾಮನಗರದ ಬಳಿ ಆರ್ಟ್ಸ್ ಅಂಡ್‌ ಕ್ರಾಫ್ಟ್ ವಿಲೇಜ್‌ ಮತ್ತು ಕಣ್ವ ಜಲಾಶಯದ ಪ್ರದೇಶದಲ್ಲಿ ಚಿಲ್ಡ್ರನ್‌ ವರ್ಲ್ಡ್ ಯೋಜನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಉದ್ದೇಶಿಸಿದೆ.

“ಹಸಿರು ಕರ್ನಾಟಕ’
ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ಕಾಡು ಕಲ್ಪನೆಯೊಂದಿಗೆ “ಹಸಿರು ಕರ್ನಾಟಕ’ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ಅರಣ್ಯ ಪ್ರಮಾಣ ಒಂದಿಷ್ಟು ಚೇತರಿಕೆಯಾಗುತ್ತಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಾಮಾಜಿಕ ಅರಣ್ಯ ಬೆಳವಣಿಗೆಗೆ ಹೆಚ್ಚು ಒತ್ತು ನೀಡಲು ನಿರ್ಧರಿಸಿದ್ದೇನೆ. ರಾಜ್ಯದಲ್ಲಿರುವ ಸಣ್ಣ-ಪುಟ್ಟ ಬೆಟ್ಟ ಗುಡ್ಡಗಳು, ಗೋಮಾಳ ಮತ್ತು ಕೆರೆಗಳ ಸುತ್ತಲಿನ ಸರ್ಕಾರಿ ಜಮೀನುಗಳಲ್ಲಿ ಆಯಾ ಪ್ರದೇಶಕ್ಕೆ ಸೂಕ್ತವಾದ ಮರ-ಗಿಡಗಳನ್ನು ವ್ಯಾಪಕವಾಗಿ ಬೆಳಸಲು “ಹಸಿರು ಕರ್ನಾಟಕ’ ಯೋಜನೆಯನ್ನು ಆಂದೋಲನದ ಮಾದರಿ ಅನುಷ್ಠಾನಗೊಳಿಸಲಾಗುವುದು.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಬೃಹತ್‌ ಪ್ರಮಾಣದಲ್ಲಿ ಬೀಜ ಸಹಿತ ಮಣ್ಣಿನ ಉಂಡೆಗಳ ಬಿತ್ತನೆ ಹಾಗೂ ಸಸಿಗಳನ್ನು ನೆಡಲು ಅನುಕೂಲವಾಗುವಂತೆ ಸರ್ಕಾರ ಮತ್ತು ಸಂಘ-ಸಂಸ್ಥೆಗಳು ಹಮ್ಮಿಕೊಳ್ಳುವ ಯೋಜನೆಗೆ ನೆರವು ನೀಡಲು 10 ಕೋಟಿ ರೂ. ಅನುದಾನ ಒದಗಿಸಲಾಗಿದೆ.
 
ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.