ರಾಜ್ಯದಲ್ಲಿ ಪ್ರತೀ ರವಿವಾರ ಲಾಕ್ ಡೌನ್, ಸರಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ


Team Udayavani, Jun 27, 2020, 7:11 PM IST

ರಾಜ್ಯದಲ್ಲಿ ಪ್ರತೀ ರವಿವಾರ ಲಾಕ್ ಡೌನ್, ಸರಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ

ಬೆಂಗಳೂರು :ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ರಾಜ್ಯ ಸರ್ಕಾರ ಇನ್ಮುಂದೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‌ಡೌನ್‌ಗೆ ತೀರ್ಮಾನಿಸಿದ್ದು, ಜುಲೈ 5 ರಿಂದ ಇದು ಜಾರಿಯಾಗಲಿದೆ. ಜತೆಗೆ, ಸರ್ಕಾರಿ ಕಚೇರಿಗಳಿಗೆ ಶನಿವಾರ ಮತ್ತು ಭಾನುವಾರ ಎರಡೂ ದಿನ ರಜೆ ಇರಲಿದೆ.

ರಾತ್ರಿ ಕರ್ಫ್ಯೂ ಅವಧಿಯೂ ವಿಸ್ತರಣೆ ಮಾಡಲಾಗಿದ್ದು, ಪ್ರಸ್ತುತ ರಾತ್ರಿ 9 ರಿಂದ ಇರುವ ಕರ್ಫ್ಯೂ 8 ಗಂಟೆಗೆ ಪ್ರಾರಂಭವಾಗಲಿದ್ದು ಮುಂಜಾನೆ 5 ಗಂಟೆವರೆಗೂ ಇರಲಿದೆ. ಇದು ಸೋಮವಾರದಿಂದ ಜಾರಿಯಾಗಲಿದೆ.

ಜುಲೈ 10 ರಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆ ಇರುವ ಎರಡನೇ ಹಾಗೂ ನಾಲ್ಕನೇ ಶನಿವಾರದ ಜತೆಗೆ ಉಳಿದ ಎರಡು ಶನಿವಾರಗಳು ರಜೆ ಇರಲಿದೆ. ಹೀಗಾಗಿ, ಸರ್ಕಾರಿ ಕಚೇರಿಗಳಿಗೆ ಶನಿವಾರ ಮತ್ತು ಭಾನುವಾರ ರಜೆ ಇರಲಿದೆ.

ಕರ್ಫ್ಯೂ ಅವಧಿಯಲ್ಲಿ ಆಟೋ, ಬಸ್‌, ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ. ಹೋಟೆಲ್‌, ಮಾಲ್‌, ಅಂಗಡಿ-ಮುಂಗಟ್ಟುಗಳು ಬಂದ್‌ ಆಗಲಿವೆ. ಅಗತ್ಯ ಸೇವೆ ಹೊರತುಪಡಿಸಿ ಇತರೆ ಯಾವುದೇ ಆರ್ಥಿಕ ಚಟುವಟಿಕೆ ಇರುವುದಿಲ್ಲ. ಸಾರ್ವಜನಿಕರ ಓಡಾಟಕ್ಕೂ ಬ್ರೇಕ್‌ ಬೀಳಲಿದ್ದು ಕಟ್ಟು ನಿಟ್ಟಿನ ಜಾರಿಯಾಗಲಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ಸಂಜೆ ನಡೆದ ತುರ್ತು ಸಭೆಯಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್‌ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ವೈದ್ಯರ ಕೊರತೆ ನೀಗಿಸಲು ಕಾರ್ಮಿಕ ಇಲಾಖೆಯಿಂದ ನೆಮಕವಾಗಿರುವ 180 ವೈದ್ಯರನ್ನು ಕೋವಿಡ್‌ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕ್ಷಾರ್ತಿ ತಹಸೀಲ್ದಾರ್‌ಗಳನ್ನು ಕೋವಿಡ್‌ ಆಸ್ಪತ್ರೆ/ಕೇರ್‌ ಸೆಂಟರ್‌ಗಳಿಗೆ ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಲು ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಹಾಗೂ ಬೆಂಗಳೂರು ಕೋವಿಡ್ ಉಸ್ತುವಾರಿ ಸಚಿವ ಆರ್‌.ಅಶೋಕ್‌, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಪಾಲ್ಗೊಂಡಿದ್ದರು.

ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು.

– ಜುಲೈ 5ನೇ ತಾರೀಖಿನಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).

– ಜುಲೈ 10ನೇ ತಾರಿಖಿನಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಛೇರಿಗಳಿಗೆ ರಜೆ ಘೋಷಿಸಲು ತೀರ್ಮಾನಿಸಲಾಯಿತು.

– ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಈಗಾಗಲೇ ಇರುವ ಕಫ್ರ್ಯೂ ಅವಧಿಯ ಬದಲಾಗಿ ರಾತ್ರಿ 8.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಕಫ್ರ್ಯೂ ಅವಧಿಯನ್ನು ಬದಲಾಯಿಸಲು ತೀರ್ಮಾನಿಸಲಾಯಿತು.

– ಬೆಂಗಳೂರಿನಲ್ಲಿರುವ ಬೃಹತ್ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಹೆಚ್ಚಿನ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಲಾಯಿತು.

– ಕೋವಿಡ್-19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಮ್) ತಂತ್ರಾಂಶದ ಮೂಲಕ ಜಾರಿಗೊಳಿಸಲಾಗುವುದು.

– ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯೂಲೆನ್ಸ್ ಸಂಖ್ಯೆಗಳನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‍ನಿಂದ ಮೃತರಾದ ದೇಹಗಳನ್ನು ಸಾಗಿಸಲು ಪ್ರತ್ಯೇಕ ಅಂಬ್ಯೂಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಅಂಬ್ಯೂಲೆನ್ಸ್ ಇರುವ ಸ್ಥಳವನ್ನು ಗುರುತಿಸಲು ಮತ್ತು ಅವುಗಳ ಸರಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್‍ಲೆಸ್ ಸೇವೆಯನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.

– ಕೋವಿಡ್-19 ರ ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲಾ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕೆಗಳ ಜಾಹಿರಾತು ಮುಖಾಂತರ ಸಾರ್ವಜನಿಕರಿಗೆ ಪ್ರಚುರಪಡಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

– ಬಿ.ಬಿ.ಎಂ.ಪಿ ಕೇಂದ್ರ ಕಛೇರಿ ಹಾಗೂ ಆಯುಕ್ತರ ಮೇಲೆ ಇರುವ ಕೆಲಸದ ಹೊರೆಯನ್ನು ಕಡಿಮೆಗೊಳಿಸಲು ಬಿ.ಬಿ.ಎಂ.ಪಿ ಯಲ್ಲಿನ 08 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸಗಳನ್ನು ನೀಡಲು ಮತ್ತು ಅವರ ಜೊತೆಗೆ ಕೆಲಸ ಮಾಡಲು ಕೆ.ಎ.ಎಸ್ ಅಧಿಕಾರಿಗಳನ್ನು ನಿಯೋಜಿಸಲು ತೀರ್ಮಾನಿಸಲಾಯಿತು.

– ಡಾಕ್ಟರ್‌ ಗಳ ಕೊರತೆಯನ್ನು ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಎ.ಎಸ್.ಐ ಡಾಕ್ಟರ್‌ ಗಳನ್ನು ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕ್ಷಾರ್ತಿ ತಹಶೀಲ್ದಾರ್‌ ಗಳನ್ನು ಕೋವಿಡ್ ಆಸ್ಪತ್ರೆಗಳು/ಕೇರ್ ಸೆಂಟರ್‌ ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ಹಾಕಲು ಸೂಚಿಸಲಾಯಿತು.

– ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್‍ಗಳು ಹಾಗೂ ಇನ್ನಿತರೆ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್‌ ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‍ಗಳ ಕೋಚ್‍ನ್ನು ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚಿಸಲಾಯಿತು.

– ಕೋವಿಡ್‍ನಿಂದ ಮೃತರಾದ ದೇಹಗಳ ಅಂತ್ಯಕ್ರಿಯೆಯನ್ನು ಜರುಗಿಸಲು ಪ್ರತ್ಯೇಕ ತಂಡಗಳನ್ನು ರಚಿಸುವುದು ಹಾಗೂ ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಯಿತು.

– ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ಪೈಕಿ ಶೇ.50 ರಷ್ಟನ್ನು ಕೋವಿಡ್ ರೋಗಿಗಳ ಸಲುವಾಗಿ ಮೀಸಲಿಡಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.

– ಆಸ್ಪತ್ರೆಗಳಲ್ಲಿ ಬೆಡ್‍ಗಳು ಪೂರ್ತಿಯಾದ ನಂತರ ರೋಗಿಗಳನ್ನು ಹೋಟೆಲ್‍ಗಳÀ ಕೊಠಡಿಗಳನ್ನು ಚಿಕಿತ್ಸೆಗಾಗಿ ಬಳಸಿಕೊಳ್ಳುವ ಉದ್ದೇಶದಿಂದ ಹೋಟೆಲ್‍ಗಳನ್ನು ಆಸ್ಪತ್ರೆಗಳಿಗೆ ಟೈಯಪ್ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.