KSOU; ದೇಶದಲ್ಲೇ 64 ಕೋರ್ಸ್‍ಗಳ ಪದವಿ ನೀಡುವ ಏಕೈಕ ವಿವಿ

ಯುಜಿಸಿ ಮಾನ್ಯತೆ...ಡಿ.ಕೆ.ಶಿವಕುಮಾರ್, ಉಮಾಶ್ರೀ, ಸಿ.ಟಿ.ರವಿ ಅವರಿಗೆ ಉನ್ನತ ಶಿಕ್ಷಣ

Team Udayavani, Feb 8, 2024, 5:15 PM IST

1-sadsad

ವಿಜಯಪುರ : ವೈವಿಧ್ಯಮ 64 ಕೋರ್ಸ್‍ಗಳನ್ನು ಹೊಂದಿರುವ ದೇಶದ ಏಕೈಕ ವಿಶ್ವವಿದ್ಯಾಲಯ ಎನಿಸಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಉನ್ನತ ಶಿಕ್ಷಣದಿಂದ ವಂಚಿತರಿಗೆ ನಮ್ಮ ವಿಶ್ವವಿದ್ಯಾಲಯ ಅವರ ಉನ್ನತ ಶಿಕ್ಷಣದ ಕನಸು ನನಸು ಮಾಡುವಲ್ಲಿ ಸೂಕ್ತ ಆಯ್ಕೆಯಾಗಿದೆ ಎಂದು ಕುಲಪತಿ ಪ್ರೊ.ಶರಣಪ್ಪ ಹಲಸೆ ಹೇಳಿದರು.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಸಾಧನೆ, ಕೋರ್ಸ್‍ಗಳು, ಪ್ರವೇಶದ ಅವಕಾಶಗಳ ಕುರಿತು ವಿವರಿಸಿದ ಅವರು, ರಾಜ್ಯದಲ್ಲಿ ದೂರ ಶಿಕ್ಷಣ ನೀಡುತ್ತಿರುವ ಏಕೈಕ ವಿಶ್ವವಿದ್ಯಾಲಯ ನಮ್ಮದು ಮಾತ್ರ. ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ನೀಡುವ ಶೈಕ್ಷಣಿಕ ಕ್ರಮಗಳ ಪದವಿಗೆ ದೂರ ಶಿಕ್ಷಣದ ಮೂಲಕ ಪಡೆಯುವ ನಮ್ಮ ಪದಿವಿಗಳೂ ಸಮಾನವಾಗಿವೆ ಎಂದರು.

ನಮ್ಮ ವಿಶ್ವವಿದ್ಯಾಲಯದಲ್ಲಿ 10 ವಿಷಯಗಳ ಆನ್‍ಲೈನ್ ಕೋರ್ಸ್‍ಗಳೂ ಇದ್ದು, ರಾಜ್ಯದಲ್ಲಿ 34 ಪ್ರಾದೇಶಿಕ ಕೇಂದ್ರ. 131 ಪ್ರಾದೇಶಿಕ ಕಲಿಕಾ ಕೇಂದ್ರಗಳನಗನು ಹೊಂದಿದೆ. ಮೈಸೂರು ಭಾಗದಲ್ಲಿ ನಮ್ಮ ವಿಶ್ವವಿದ್ಯಾಲಯ ಹೆಚ್ಚು ಪ್ರಗತಿ ಸಾಧಿಸಿದ್ದು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ವಿಸ್ತರಿಸಲು ವಿಶೇಷ ಆದ್ಯತೆ ನೀಡುತ್ತಿದ್ದೇವೆ ಎಂದರು.

ಕೆಲಸದಲ್ಲಿರುವವರು, ಬಡತನ, ಗ್ರಾಮೀಣ ಭಾಗದ ಉನ್ನತ ಶಿಕ್ಷಣ ಅವಕಾಶ ವಂಚಿತರು, ಇತರೆ ಕಾರಣಕ್ಕೆ ಉನ್ನತ ಶಿಕ್ಷಣದಿಂದ ವಂಚಿತರಿಗೆ ನಮ್ಮ ವಿಶ್ವವಿದ್ಯಾಲಯದ ಮೊದಲ ಆಯ್ಕೆಯಾಗಿದೆ. ಯುಜಿಸಿ ಎ+ ಮಾನ್ಯತೆ ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕಡಿಮೆ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಅವಕಾಶವಿದೆ ಎಂದರು.

ಇದಲ್ಲದೇ ಬೇರೆ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಭೌತಿಕ ಪ್ರವೇಶದೊಂದಿಗೆ ನೇರ ತರಗತಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕೂಡ ನಮ್ಮ ವಿಶ್ವವಿದ್ಯಾಲಯದಲ್ಲಿ ಬೇರೊಂದು ಕೋರ್ಸ್‍ನಲ್ಲಿ ದೂರ ಶಿಕ್ಷಣದಲ್ಲಿ ಪ್ರವೇಶ ಪಡೆದು, ಏಕ ಕಾಲಕ್ಕೆ ಎರಡೂ ಕೋರ್ಸ್ ಮಾಡಲು ಅವಕಾಶವಿದೆ. ಇದರು ನಮ್ಮ ವಿಶ್ವವಿದ್ಯಾಲಯದ ಹಿರಿಮೆ ಎಂದರು.

ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಹಾಗೂ ಆನ್‍ಲೈನ್ ಮೂಲಕವೇ ವಿಶ್ವವಿದ್ಯಾಲಯದ ಎಲ್ಲ ಶುಲ್ಕಗಳನ್ನು ಭರಿಸಬೇಕಿದೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಜನವರಿ ಹಾಗೂ ಜುಲೈ ಹೀಗೆ ವಾರ್ಷಿಕ ಎರಡು ಬಾರಿ ಪ್ರವೇಶ ಕಲ್ಪಿಸಲಾಗುತ್ತದೆ. 2023-34ನೇ ಸಾಲಿನ ಮೊಲದ ಹಂತದ ಜನವರಿ ಆವೃತ್ತಿಯ ಪ್ರವೇಶಕ್ಕೆ ಮಾರ್ಚ್ 31 ಕೊನೆ ದಿನ. ವಿವಿಧ ವಿಷಯಗಳ ಸಂಯೋಜನೆ ಹೊಂದಿರುವ ಪದವಿಗಳ ಸ್ನಾತಕ-ಸ್ನಾತಕೋತ್ತರ, ಸಂಶೋಧನಾ ಪಿಎಚ್‍ಡಿ ಮಾತ್ರವಲ್ಲದೇ ವಿವಿಧ ವಿಷಯಗಳ ಸರ್ಟಿಫಿಕೇಟ್ ಕೋರ್ಸ್‍ಗಳನ್ನೂ ನೀಡಲಾಗುತ್ತದೆ ಎಂದರು.

ನಮ್ಮ ವಿಶ್ವವಿದ್ಯಾಲಯದಿಂದಲೇ ಈಗಾಗಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಸಚಿವೆ ಉಮಾಶ್ರೀ, ಸಿ.ಟಿ.ರವಿ ಅವರಂಥ ನಾಯಕರೂ ಸ್ನಾತಕೋತ್ತರ, ಸಂಶೋಧನಾ ಮಹಾಪ್ರಬಂಧ ಮಂಡಿಸುವ ಮೂಲಕ ಪಿಎಚ್‍ಡಿ ಪದವಿಗಳನ್ನೂ ಪಡೆದಿದ್ದಾರೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರುವ ಹಲವರು ಕೇಂದ್ರ-ರಾಜ್ಯ ಸರ್ಕಾರಗಳ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿ, ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ನಮ್ಮ ವಿಶ್ವವಿದ್ಯಾಲಯದಲ್ಲಿ ಇಲ್ಲದ ಕೋಸ್‍ಗಳಲ್ಲೂ ಅಧ್ಯಯನ ಮಾಡಲು ಪ್ರತಿಷ್ಠಿತಿ ಇತರೆ ವಿಶ್ವವಿದ್ಯಾಲಯಗಳೊಂದಿಗೆ ಶೈಕ್ಷಣಿಕ ಒಪ್ಪಂದ ಮಾಡಿಕೊಳ್ಳಲೂ ಯೋಜಿಸಿದ್ದೇವೆ. ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ವಿಭಾಗವಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಡಿಜಿಟಲ್ ಮೌಲ್ಯಮಾಪನದ ಮೂಲಕ ಗುಣಮಟ್ಟದ ಮೌಲ್ಯಮಾಪನ, ಶೀಘ್ರ ಫಲಿತಾಂಶ ಪ್ರಕಟಣೆಗೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಾರಾಂಗ, ರೇಡಿಯೋ ಸೌಲಭ್ಯವೂ ಇದೆ ಎಂದು ವಿವರಿಸಿದರು.

ವಿಜಯಪುರ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಡಿ.ಎಸ್.ಮೈತ್ರಿ, ಧಾರವಾಡ ಪ್ರಾದೇಶಿಕ ಕೇಂದ್ರದ ನಿರ್ದೇಶಕ ರಾಘವೇಂದ್ರ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.