ಬಿಜೆಪಿ ಅಸ್ತ್ರಕ್ಕೆ ಬೆದರಿದ ಕಾಂಗ್ರೆಸ್‌, ಜೆಡಿಎಸ್‌

Team Udayavani, Oct 14, 2022, 6:40 AM IST

ಬಿಜೆಪಿ ಅಸ್ತ್ರಕ್ಕೆ ಬೆದರಿದ ಕಾಂಗ್ರೆಸ್‌, ಜೆಡಿಎಸ್‌

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಆಡಳಿತಾರೂಢ ಬಿಜೆಪಿ “ಅಸ್ತ್ರ’ದಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಮತಬ್ಯಾಂಕ್‌ ಕೈ ತಪ್ಪುವ ಆತಂಕ ಎದುರಾಗಿದ್ದು, ಪರ್ಯಾಯ ಕಾರ್ಯತಂತ್ರದತ್ತ ಚಿತ್ತ ಹರಿಸಿವೆ.

ಭಾರತ್‌ ಜೋಡೋ ಯಾತ್ರೆಯ ಗುಂಗಿನಲ್ಲಿದ್ದ ಕಾಂಗ್ರೆಸ್‌, ಜನತಾಮಿತ್ರ ಹುಮ್ಮಸ್ಸಿನಲ್ಲಿದ್ದ ಜೆಡಿಎಸ್‌ ಪಕ್ಷಗಳಿಗೆ ಮೀಸಲಾತಿ ವಿಚಾರದಲ್ಲಿ ಬಿಜೆಪಿ ದಿಢೀರ್‌  ಈ ರೀತಿಯ ತೀರ್ಮಾನ ಕೈಗೊಳ್ಳಬಹುದು ಎಂಬ ಅಂದಾಜು ಇರಲಿಲ್ಲ. ಪ್ರಮುಖವಾಗಿ ಕಾಂಗ್ರೆಸ್‌ ಮುಂದಿನ ಚುನಾವಣೆಯಲ್ಲಿ ಮೀಸಲಾತಿ ಪ್ರಮಾಣದ ವಿಚಾರ ಮುಂದಿಟ್ಟೇ ಬಿಜೆಪಿಯನ್ನು ಹಣಿಯುವ ಕಾರ್ಯತಂತ್ರ   ರೂಪಿಸಿತ್ತು.

ಚುನಾವಣೆ ಹೊಸ್ತಿಲಲ್ಲಿ ವಿಪಕ್ಷಗಳಿಗೆ ಟಕ್ಕರ್‌ ನೀಡಲು ಬಿಜೆಪಿ ಪ್ರಬಲ ಅಸ್ತ್ರವನ್ನೇ ಬಳಸಿದ್ದು,  ಇದರ ಬೆನ್ನಲ್ಲೇ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭಿಸಿ ಪ್ರತಿ ಸಮಾವೇಶದಲ್ಲೂ ಇದೇ ವಿಚಾರ ಪ್ರಸ್ತಾವಿಸಿ ಸಮುದಾಯದ ಮತಬುಟ್ಟಿಗೆ ಕೈ ಹಾಕುತ್ತಿದೆ. ಇದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳನ್ನು ಚಿಂತೆಗೀಡು ಮಾಡಿದೆ.

ಈಗ ಆತಂಕಗೊಂಡಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪರ್ಯಾಯ ಕಾರ್ಯತಂತ್ರಕ್ಕೆ ಮುಂದಾಗಿವೆ. ಮೀಸಲಾತಿ ಪ್ರಮಾಣ ಹೆಚ್ಚಿಸಲು ಮೊದಲಿನಿಂದಲೂ ನಮ್ಮ ಸಹಮತ ಮತ್ತು ಬೇಡಿಕೆ ಇದೆ ಎಂದು ಕಾಂಗ್ರೆಸ್‌, ಆಯೋಗ ರಚನೆ ಮಾಡಿದ್ದೇ ನಮ್ಮ ಅವಧಿಯಲ್ಲಿ ಎಂದು ಜೆಡಿಎಸ್‌ ನಮ್ಮದೂ ಪಾತ್ರ ಇದೆ ಎಂದು ಪ್ರತಿಪಾದಿಸಲಾರಂಭಿಸಿದೆ.

ಜತೆಗೆ, ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯಕ್ಕೆ ತಮ್ಮ ಅಧಿಕಾರಾವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿಯೇ ಸಮಾವೇಶ ಆಯೋಜಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಭಾರತ್‌ ಜೋಡೋ ಬಳಿಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರ ಎರಡು ಪ್ರತ್ಯೇಕ ತಂಡಗಳು ರಾಜ್ಯ ಪ್ರವಾಸ ಮಾಡಲಿದ್ದು, ಆ ಸಂದರ್ಭದಲ್ಲಿ ಎಸ್‌ಸಿ-ಎಸ್‌ಟಿ ಸಮುದಾಯದ ಸಮಾವೇಶ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಅದೇ ರೀತಿ ಪಂಚರತ್ನ ಸಮಾವೇಶದ ನಡುವೆಯೇ ಹಿಂದುಳಿದ, ದಲಿತ, ಅಲ್ಪಸಂಖ್ಯಾಕ,  ಮಹಿಳಾ ಸಮಾವೇಶ ನಡೆಸಲು ತೀರ್ಮಾನಿಸಿದೆ.

ಬಿಜೆಪಿಗೂ ಭಯ :

ಈ ಮಧ್ಯೆ, ಎಸ್‌ಸಿ-ಎಸ್‌ಟಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ತೀರ್ಮಾನದ ಬೆನ್ನಲ್ಲೇ ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ಒಕ್ಕಲಿಗ ಸಮುದಾಯವು ಪ್ರವರ್ಗ ಬದಲಾವಣೆ, ಮೀಸಲಾತಿ ಹೆಚ್ಚಳದ ಬೇಡಿಕೆ ಇಟ್ಟಿರುವುದರಿಂದ ಮೀಸಲಾತಿ ಕಿಚ್ಚು ಬೇರೆ ರೀತಿಯ ಪರಿಣಾಮ ಬೀರಬಹುದಾ ಎಂಬ ಭಯ ಬಿಜೆಪಿಯಲ್ಲೂ ಇದೆ.

ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವುದರಿಂದ ಹಾಗೂ ಪ್ರವರ್ಗ ಬದಲಾವಣೆಯಿಂದ ಸಹಜವಾಗಿ  ಈಗಿರುವ ಮೀಸಲಾತಿ ವ್ಯವಸ್ಥೆಯಲ್ಲಿ ಮಾರ್ಪಾಡು ಆಗಲಿದೆ. ಆಗ ಬೇರೆ ಸಮುದಾಯಗಳು ರಾಜಕೀಯವಾಗಿ ತಿರುಗಿ ಬೀಳಬಹುದು ಎಂಬ ಬಗ್ಗೆಯೂ ಚರ್ಚೆಯಾಗುತ್ತಿದ್ದು ಸೂಕ್ಷ್ಮವಾಗಿ ಹೆಜ್ಜೆ ಇಡುವಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ವರಿಷ್ಠರ ನಿರ್ದೇಶನ:

ಬಿಜೆಪಿ ಸರಕಾರ ಎಸ್‌ಸಿ-ಎಸ್‌ಟಿ ಮೀಸಲು ಪ್ರಮಾಣ ಹೆಚ್ಚಿಸಲು ತೀರ್ಮಾನ ಕೈಗೊಂಡಿರುವುದು, ಒಳ ಮೀಸಲಾತಿ ವಿಚಾರದಲ್ಲಿ ಸಂಪುಟ ಉಪ ಸಮಿತಿ ರಚಿಸಿರುವುದು ಪ್ರಮುಖವಾಗಿ ಪ್ರತಿ ಸಂದರ್ಭದಲ್ಲೂ ಪ್ರಸ್ತಾಪಿಸಬೇಕು. ರಾಜಕೀಯವಾಗಿಯೂ ಬಿಜೆಪಿಗೆ ಇದು ಶಕ್ತಿ ತುಂಬಲಿದ್ದು ಸರಕಾರದ ಕ್ರಮದ ಬಗ್ಗೆ ಹೆಚ್ಚು ಮಾತನಾಡಬೇಕು ಎಂದು ಸಂಪುಟ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳಿಗೆ ಬಿಜೆಪಿ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.