ಕರ್ನಾಟಕ ಟಾರ್ಗೆಟ್ 150; ನೀಲನಕ್ಷೆ ಸಲ್ಲಿಸಿ: ಅಮಿತ್ ಶಾ
Team Udayavani, Apr 2, 2022, 7:00 AM IST
ಮುಂದಿನ ಬಾರಿ ರಾಜ್ಯದಲ್ಲಿ ಸರಳ ಬಹುಮತಕ್ಕೆ ನಾವು ತೃಪ್ತರಾಗುವುದಿಲ್ಲ, ನಮ್ಮದು 150 ಸ್ಥಾನ ಗೆಲ್ಲುವುದೇ ಗುರಿ ಎಂದು ಬಿಜೆಪಿ ಶುಕ್ರವಾರ ನಗರದಲ್ಲಿ ಘೋಷಿಸಿ ವಿಧಾನಸಭೆ ಚುನಾವಣೆಯ ರಣಕಹಳೆ ಮೊಳಗಿಸಿವೆ.
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲ್ಲಬೇಕು ಮತ್ತು ಅಧಿಕಾರ ಉಳಿಸಿ ಕೊಳ್ಳಬೇಕು. ಅದಕ್ಕಾಗಿ ಎ.16ರ ಒಳಗಾಗಿ ಸೂಕ್ತ ಕಾರ್ಯ ಯೋಜನೆ ಸಿದ್ಧಪಡಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಜರಗಿದ ಕೋರ್ ಕಮಿಟಿ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. ಸದ್ಯ 120 ಶಾಸಕರಿದ್ದು, ಮುಂದಿನ ಚುನಾ ವಣೆಯಲ್ಲಿ ಅದು 150ಕ್ಕೇರಬೇಕು. ಅದಕ್ಕೆ ಬೇಕಾಗಿರುವ ನೀಲನಕ್ಷೆಯನ್ನು ಸಿದ್ಧಪಡಿಸಿ ಬೆಂಗ ಳೂರಿಗೆ ಆಗಮಿಸುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಸಲ್ಲಿಸಬೇಕು ಎಂದರು.
ಕೊರತೆ ಆಗಬಾರದು
ಈ ಹಿಂದಿನ ಎರಡು ಬಾರಿಯಂತೆ ಬಹು ಮತದ ಕೊರತೆ ಆಗ ಬಾರದು. ಟಾರ್ಗೆಟ್ 150 ಕೇವಲ ಬಾಯಿಮಾತಾಗ ಬಾರದು. ಹಳೆ ಮೈಸೂರು ಭಾಗ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಭಾಗಗಳಲ್ಲಿ ಪಕ್ಷ ಹೊಂದಿರುವ ನ್ಯೂನತೆಗಳನ್ನು ಪತ್ತೆಹಚ್ಚಿ ಅದನ್ನು ಸರಿ ಪಡಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ಶಾಸಕರು ಇಲ್ಲದಿರುವ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಬೇಕಾದ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದವರೇ ಗೆಲ್ಲುವ ಅಭ್ಯರ್ಥಿಗಳಿದ್ದರೆ ಅಂಥ ಕ್ಷೇತ್ರಗಳಿಗೆ ಬೇರೆ ಪಕ್ಷಗಳಿಂದ ಕರೆದುಕೊಂಡು ಬರಬಾರದು. ಬಿಜೆಪಿಯಲ್ಲಿ ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳಿಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬರುವವರನ್ನು ಸೇರಿಸಲೂ ಸೂಚಿಸಿದ್ದಾರೆ ಎನ್ನಲಾಗಿದೆ.
ಅವಧಿ ಪೂರ್ವ ಚುನಾವಣೆ ಇಲ್ಲ
ಡಿಸೆಂಬರ್‌ನಲ್ಲೇ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆದಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ ಅವಧಿಪೂರ್ವ ಚುನಾವಣೆ ನಡೆಸದಿರಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟ ಚರ್ಚೆಯಿಲ್ಲ
ಬಹು ನಿರೀಕ್ಷಿತ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾವವಾಗಿಲ್ಲ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಅಮಿತ್ ಶಾ ಅವರು ಮುಖ್ಯಮಂತ್ರಿಗೆ ಪ್ರತ್ಯೇಕವಾಗಿ ಸೂಚನೆ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲಿ ಇರುವ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಕುರಿತು ರಾಜ್ಯದ ನಾಯಕರೇ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.