ವಿಷಪ್ರಸಾದ ಸೇವನೆ; ಮತ್ತೊಬ್ಬಳ ಸಾವು, ಸಾವಿನ ಸಂಖ್ಯೆ 15ಕ್ಕೆ ಏರಿಕೆ
Team Udayavani, Dec 18, 2018, 1:23 PM IST
ಮೈಸೂರು: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ ಗುತ್ ಮಾರಮ್ಮ ದೇವಾಲಯದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದುಂಡಮ್ಮ(50) ಮಂಗಳವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿದಂತಾಗಿದೆ.
ಮಲೆಮಹದೇಶ್ವರ ಬೆಟ್ಟ ನಿವಾಸಿ ದುಂಡಮ್ಮ ಅವರು ವಿಷಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.
ವಿಷಾಹಾರ ಸೇವಿಸಿದ ಪ್ರಕರಣದಲ್ಲಿ 20ಕ್ಕೂ ಅಧಿಕ ಮಂದಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥಗೊಂಡ 80ಕ್ಕೂ ಅಧಿಕ ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕೃತ್ಯಕ್ಕೆ ಕಾರಣವಾದ ಕೆಲವು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.