Cauvery ನೀರು ಬಿಡಲು ಸಾಧ್ಯವಿಲ್ಲ; ಸಿಡಬ್ಲ್ಯುಆರ್‌ಸಿ ಮೊರೆ: ಸಿಎಂ ಸಿದ್ದರಾಮಯ್ಯ
ವಿಶೇಷ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ
Team Udayavani, Sep 13, 2023, 8:08 PM IST
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಅಸಮರ್ಥತೆ ವ್ಯಕ್ತಪಡಿಸಿ ರಾಜ್ಯ ಮತ್ತೊಮ್ಮೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದೆ ಮನವಿ ಸಲ್ಲಿಸಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಸಿಡಬ್ಲ್ಯುಆರ್‌ಸಿ ಶಿಫಾರಸಿನ ಮೇರೆಗೆ ಇಂದು ‘ವಿಶೇಷ ತುರ್ತು ಸಭೆ’ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನೀರು ಬಿಡುವ ಕುರಿತು ಸರಕಾರ ತನ್ನ ಕಾನೂನು ತಂಡದೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಮತ್ತು ನೆಲದ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದರು.
”ಅವರು ಏನು ಮಾಡುತ್ತಾರೆ ಎಂಬುದನ್ನು ನೋಡೋಣ, ಅದರ ಆಧಾರದ ಮೇಲೆ ನಾವು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ ಮತ್ತು ನೆಲದ ವಾಸ್ತವ ಸ್ಥಿತಿಯನ್ನು ನ್ಯಾಯಾಲಯಕ್ಕೆ ತಿಳಿಸಲು ಪ್ರಯತ್ನಿಸುತ್ತೇವೆ” ಎಂದರು.
”ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ನಾವು ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ. ಈ ವರೆಗೆ 99 ಟಿಎಂಸಿ ನೀರು ಕೊಡಬೇಕಾಗಿತ್ತು. 37.7 ಟಿಎಂಸಿ ನೀರು ಬಿಡಲಾಗಿದೆ. ಈಗಲೂ ನೀರು ಬಿಡಲಾಗದೆ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು. ಆದರೆ ಈಗ ನಾಲ್ಕೂ ಜಲಾಶಯಗಳಿಂದ ಲಭ್ಯವಿರುವುದು 53 ಟಿಎಂಸಿ ನೀರು ಮಾತ್ರ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ.ಇದರಲ್ಲಿ ನಾವು 33 ಟಿಎಂಸಿ ಕುಡಿಯುವ ನೀರಿಗೆ ಹಾಗೂ 3 ಟಿಎಂಸಿ ಕೈಗಾರಿಕೆಗಳಿಗೆ ಒದಗಿಸಬೇಕಾಗುತ್ತದೆ. ಬೆಳೆಗಳಿಗೆ ಸಾಕಾಗುವುದಿಲ್ಲ” ಎಂದು ಸಿಎಂ ಹೇಳಿದ್ದಾರೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸಿಡಬ್ಲ್ಯೂಆರ್‌ಸಿ ಮಂಗಳವಾರ ಶಿಫಾರಸು ಮಾಡಿತ್ತು.
”ದಿನಕ್ಕೆ 5 ಸಾವಿರ ಕ್ಯೂಸೆಕ್ ಬಿಡಬೇಕೋ ಬೇಡವೋ ಎಂಬ ಬಗ್ಗೆ ಕಾನೂನು ತಂಡದೊಂದಿಗೆ ಸಮಾಲೋಚನೆ ನಡೆಸುತ್ತೇವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದು, ಈ ಕುರಿತು ಕಾನೂನು ತಂಡದೊಂದಿಗೆ ಚರ್ಚಿಸಲು ಮತ್ತು ಅರ್ಜಿ ಸಲ್ಲಿಸುವ ಬಗ್ಗೆಯೂ ಚರ್ಚಿಸಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಸಿಎಂ ಹೇಳಿದ್ದಾರೆ.
ಶಿವಕುಮಾರ್ ಹೊರತುಪಡಿಸಿ ಜಲಸಂಪನ್ಮೂಲ ಸಚಿವ, ಕಾವೇರಿ ಕೊಳ್ಳದ ಸಚಿವರು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರಿಗೆ ತುರ್ತು ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿತ್ತು.
ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ,ಎಚ್.ಡಿ. ಕುಮಾರಸ್ವಾಮಿ ಪೂರ್ವ ನಿಗದಿತ ಕಾರ್ಯಕ್ರಮಗಳ ಕಾರಣದಿಂದ ಸಭೆಗೆ ಹಾಜರಾಗಲಿಲ್ಲ. ಸಂಸದರಾದ ಬಿಜೆಪಿಯ ಪ್ರತಾಪ್ ಸಿಂಹ, ಪಿ.ಸಿ. ಮೋಹನ್, ಶಿವಕುಮಾರ್ ಉದಾಸಿ, ಸುಮಲತಾ ಅಂಬರೀಶ್ ಭಾಗವಹಿಸಿದ್ದರು.
”ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.18 ರಿಂದ ಸಂಸತ್ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು.ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ” ಎಂದು ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.