Karnataka Weather; ಮಿತಿ ಮೀರಿದ ತಾಪಮಾನಕ್ಕೆ ಬಸವಳಿದ ರಾಜ್ಯ

ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ "ಉಷ್ಣ ಅಲೆ' ಮುನ್ನೆಚ್ಚರಿಕೆ

Team Udayavani, Apr 3, 2024, 7:15 AM IST

Karnataka Weather; ರಾಜ್ಯದಲ್ಲಿ ಮಿತಿ ಮೀರಿದ ತಾಪಮಾನ: ಆತಂಕ ಸೃಷ್ಟಿ

ಬೆಂಗಳೂರು: ರಾಜ್ಯದಲ್ಲಿ ತಾಪಮಾನದ ಪ್ರಖರತೆಯು ಮಿತಿ ಮೀರಿ ಆತಂಕ ಸೃಷ್ಟಿಯಾಗಿದ್ದು ಏ.6ರ ವರೆಗೆ ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ 5 ಜಿಲ್ಲೆಗಳಿಗೆ “ಉಷ್ಣ ಅಲೆ’ ಮುನ್ನೆಚ್ಚರಿಕೆ ಕೊಡಲಾಗಿದೆ. ಮತ್ತೊಂದೆಡೆ ಏ.6ರಿಂದ 8ರವರೆಗೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಏಪ್ರಿಲ್‌ 6ರ ವರೆಗೆ ಉಷ್ಣ ಅಲೆ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ತಾಪಮಾನ ಮಿತಿ ಮೀರುವ ಹಂತಕ್ಕೆ ತಲುಪಿರುವುದು ಇಲ್ಲಿನ ಜನರಲ್ಲಿ ಆತಂಕ ಹುಟ್ಟಿಸಿದೆ. ಜತೆಗೆ ಏಪ್ರಿಲ್‌ 5ರ ವರೆಗೆ ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಳಗಾವಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿರುವ ಮುನ್ನೆಚ್ಚರಿಕೆ ಕೊಡಲಾಗಿದೆ.

ಇನ್ನು ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾ., ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿ ಇರಲಿವೆ. ಮುಂದಿನ 5 ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ತಾಪಮಾನವು ಇನ್ನೂ 4 ಡಿ.ಸೆ. ಏರಿಕೆಯಾದರೆ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ಡಿ.ಸೆ. ಹೆಚ್ಚುವ ಸಾಧ್ಯತೆಗಳಿವೆ.

ದಕ್ಷಿಣ ತಮಿಳುನಾಡಿನಿಂದ ಆಗ್ನೇಯ ಮಧ್ಯಪ್ರದೇಶದವರೆಗಿನ ಗಾಳಿಯ ಸ್ಥಗಿತವು ಈಗ ದಕ್ಷಿಣ ತಮಿಳುನಾಡಿನಿಂದ ಪೂರ್ವ ವಿದರ್ಭದವರೆಗೆ ಆಂತರಿಕ ಕರ್ನಾಟಕ ಮತ್ತು ಮರಾಠವಾಡದ ಮೂಲಕ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀ ಎತ್ತರದಲ್ಲಿದೆ. ಪರಿಣಾಮ ಏ.5ರ ವರೆಗೆ ರಾಜ್ಯದಲ್ಲಿ ಇದೇ ಮಾದರಿಯ (ಶುಷ್ಕ ಹವಾಮಾನ)ಹವಾಮಾನವು ಚಾಲ್ತಿಯಲ್ಲಿರಲಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ ?
ಏ.6 ರಿಂದ 8ರ ವರೆಗೆ ದ.ಕನ್ನಡ, ಬೀದರ್‌, ಕಲಬುರಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ. ಆದರೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿವೆ. ಏ.7ರಂದು ಚಿಕ್ಕಮಗಳೂರು ಹಾಗೂ 8ರಂದು ಉಡುಪಿ, ಉತ್ತರ ಕನ್ನಡ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಮಂಗಳವಾರ ಎಲ್ಲೆಲ್ಲಿ ಎಷ್ಟೆಷ್ಟು ತಾಪಮಾನ?: ಕಲಬುರಗಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಉಷ್ಣಾಂಶ 41.6 ಡಿ.ಸೆ. ದಾಖಲಾದರೆ, ಬಾಗಲಕೋಟೆ 40.7, ವಿಜಯಪುರ 39.5, ರಾಯಚೂರು 39.6, ಕೊಪ್ಪಳ 39.2, ಗದಗ 38.7, ಮಂಗಳೂರು 35.4, ಬೀದರ್‌ 38, ಬೆಳಗಾವಿ 37.6, ಹಾವೇರಿ 38.4, ಚಿತ್ರದುರ್ಗ 38, ದಾವಣಗೆರೆ 38.5, ಶಿವಮೊಗ್ಗ 37.6, ಮಂಡ್ಯ 37.4 ಡಿ.ಸೆ. ಗರಿಷ್ಠ ಉಷ್ಣಾಂಶ ಮಂಗಳವಾರ ದಾಖಲಾಗಿದೆ.

ಹೀಗೆ ಮುನ್ನೆಚ್ಚರಿಕೆ ವಹಿಸಿ
*ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಿರಿ
*ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲ, ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ
*ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಛತ್ರಿ, ಟೋಪಿ, ಬೂಟು ಅಥವಾ ಚಪ್ಪಲಿ ಬಳಸಿ
*ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆ ತಪ್ಪಿಸಿ
*ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ
*ದೇಹವನ್ನು ನಿರ್ಜಲೀಕರಣಗೊಳಿಸುವ ಮದ್ಯ, ಚಹಾ, ಕಾಫಿ ಮತ್ತು ಕಾಬೊìನೇಟೆಡ್‌ ತಂಪು ಪಾನೀಯಗಳನ್ನು ಸೇವಿಸದಿರಿ
*ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ
*ನಿಮಗೆ ಮೂಛೆì ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ
*ಓಆರ್‌ಎಸ್‌, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ
*ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ
*ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ ಬಳಸಿ, ರಾತ್ರಿಯಲ್ಲಿ ಕಿಟಕಿ ತೆರೆಯಿರಿ
*ಫ್ಯಾನ್‌, ಒ¨ªೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ

 

ಟಾಪ್ ನ್ಯೂಸ್

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.