ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ
Team Udayavani, Apr 18, 2021, 10:02 AM IST
ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ (73 ವ) ಅವರು ಇಂದು ಬೆಳಗ್ಗೆ ನಿಧನರಾದರು.
ಮುಂಜಾನೆ ಎಂ.ಎ.ಹೆಗಡೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು.
ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿಸಿ ಜಬಿನ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದರು. ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರು ಆನಂತರ ಸಂಸ್ಕೃತ ಉಪನ್ಯಾಸಕರಾಗಿಯೂ ಸಹ ಸೇವೆ ಸಲ್ಲಿಸಿದ್ದ ಹೆಗಡೆ ಅವರು ಯಕ್ಷಗಾನದ ಬಗ್ಗೆ ವಿಶೇಷ ಒಲವು ಹೊಂದಿದ್ದರು.
ಇದನ್ನೂ ಓದಿ:ಯಡಿಯೂರಪ್ಪ ಆರೋಗ್ಯ ಸ್ಥಿರ: ಆಸ್ಪತ್ರೆಯಲ್ಲಿ ಪುಸ್ತಕ ಓದುತ್ತಿದ್ದಾರೆ ಸಿಎಂ ಬಿಎಸ್ ವೈ
ಸ್ವತಃ ಪಾತ್ರಧಾರಿಯು ಆಗಿದ್ದ ಎಂ.ಎ. ಹೆಗಡೆಯವರು 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಸೀತ ವಿಯೋಗ, ತ್ರಿಶಂಕು ಚರಿತೆ, ರಾಜಾ ಕಂದಾಮ ಮುಂತಾದ ಜನಪ್ರಿಯ ಪ್ರಸಂಗಗಳನ್ನು ರಚಿಸಿದ್ದಾರೆ. ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ಅವರು ರಚಿಸಿದ್ದಾರೆ.
ಸಚಿವ ಲಿಂಬಾವಳಿ ಸಂತಾಪ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ. ಹೆಗಡೆ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.