KEA ಅಕ್ರಮ;ಕಲಬುರಗಿಯಲ್ಲಿ ಸಿಐಡಿ ಉನ್ನತ ಮಟ್ಟದ ತಂಡದಿಂದ ತನಿಖೆ ಶುರು
Team Udayavani, Nov 13, 2023, 6:46 PM IST
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದರಿಂದ ಉನ್ನತ ಮಟ್ಟದ ತಂಡವು ಸೋಮವಾರ ನಗರಕ್ಕಾಗಮಿಸಿ ತನಿಖೆ ಶುರು ಮಾಡಿದೆ.
ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಡಿಎಸ್ಪಿಗಳಾದ ಶಂಕರಗೌಡ ಪಾಟೀಲ್, ತನ್ವೀರ್ ಅವರನ್ನೊಳಗೊಂಡ ತಂಡ ಕಲಬುರಗಿಗೆ ಆಗಮಿಸಿ ತನಿಖಾ ಕಾರ್ಯ ಕೈಗೆತ್ತಿಕೊಂಡಿದೆ.
ಕೆಇಎ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಎಸಗಿರುವ ಸಂಬಂಧ ಕಲಬುರಗಿ, ಅಫಜಲಪುರ, ಯಾದಗಿರಿಯಲ್ಲಿ ಅಕ್ರಮದ ರೂವಾರಿ, ಪಿಎಸ್ಐ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಸೇರಿ ಹಲವರ ವಿರುದ್ಧ ದೂರು ದಾಖಲಾಗಿದೆ. ಈಗಾಲೇ ಆರ್. ಡಿ.ಪಾಟೀಲ್ ಸೇರಿ 20 ಕ್ಕೂ ಅಧಿಕ ಅಭ್ಯರ್ಥಿ ಗಳು ಹಾಗೂ ಸಹಾಯಕರ ಬಂಧನವಾಗಿದೆ.
ಪರೀಕ್ಷೆ ಅಕ್ರಮದ ನಂತರ ಆರ್.ಡಿ.ಪಾಟೀಲ್ ಪರಾರಿಯಾಗಿದ್ದ, ತದನಂತರ ನಗರದಲ್ಲಿದ್ದರೂ ಪೊಲೀಸ್ ರಿಗೆ ಚಳ್ಳೆಹಣ್ಣು ತಿನ್ನಿಸಿದ್ದ. ನಂತರ ಪೊಲೀಸ ರು ಕಾರ್ಯಾಚರಣೆ ನಡೆಸಿ ನೆರೆಯ ಮಹಾರಾಷ್ಟ್ರದ ಲ್ಲಿ ಬಂಧಿಸಿದ್ದರು. ಒಟ್ಟಾರೆ ಈ ಪರೀಕ್ಷೆ ಅಕ್ರಮ ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದು, ಬಿಜೆಪಿ ತೀವ್ರ ವಾಗ್ದಾಳಿ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.