ಆಕರ್ಷಕ ಪ್ರವಾಸಿ ತಾಣವಾಗುತ್ತಿರುವ ಕೆಂಪೇಗೌಡರ ಪ್ರತಿಮೆ
ರಾತ್ರಿ ವೇಳೆ ಬೆಳಕಿನ ಅಲಂಕಾರಕ್ಕೂ ವ್ಯವಸ್ಥೆ: ಸಚಿವ ಅಶ್ವತ್ಥನಾರಾಯಣ ಸಭೆ
Team Udayavani, Nov 14, 2022, 4:33 PM IST
ಬೆಂಗಳೂರು: ಉದ್ಘಾಟನೆಯಾದ ಬೆನ್ನಲ್ಲೇ ಆಕರ್ಷಕ ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ವೀಕ್ಷಿಸಲು ಹೆಚ್ಚಿನ ಜನರು ಬರುತ್ತಿದ್ದು ಅವರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ, ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧಿಕಾರಿಗಳು ಮತ್ತು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ್ ದೀಪ್ ಇದ್ದರು.
ಸದ್ಯಕ್ಕೆ 23 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಐಓಸಿ ಪೆಟ್ರೋಲ್ ಬಂಕ್ ಕಡೆಯಿಂದ ಪ್ರವಾಸಿಗರು ಪ್ರತಿಮೆಯನ್ನು ತಲುಪಿ ವೀಕ್ಷಿಸಲು ಅನುಕೂಲ ಮಾಡಿಕೊಡಲು ಸಚಿವರು ಸೂಚಿಸಿದರು.
ಇದರ ಜೊತೆಗೆ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಗರಿಷ್ಠ 80 ವಾಹನಗಳಿಗೆ ಪಾರ್ಕಿಂಗ್ ಅವಕಾಶ ಕಲ್ಪಿಸಲಾಗುವುದು. ಈ ಅನುಕೂಲವು ಒಂದು ವಾರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಪ್ರತಿಮೆ ವೀಕ್ಷಣೆಗೆ ಬರುವ ಪ್ರವಾಸಿಗರ ವಾಹನಗಳು ಗರಿಷ್ಠ ಅರ್ಧ ಗಂಟೆ ನಿಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕಳೆದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಈ ಕಂಚಿನ ಪ್ರತಿಮೆ ಉದ್ಘಾಟಿಸಿದ ನಂತರ ಮಧ್ಯರಾತ್ರಿ ಒಂದು ಗಂಟೆಯಾದರೂ ಸಹಸ್ರಾರು ಆಸಕ್ತರು ತಂಡೋಪತಂಡವಾಗಿ ಆಗಮಿಸುತ್ತಲೇ ಇದ್ದಾರೆ. ಬಂದವರಿಗೆ ನಿರಾಸೆ ಆಗಬಾರದು ಎನ್ನುವುದು ಸರಕಾರದ ಬಯಕೆಯಾಗಿದೆ. ಪ್ರತಿಮೆಯು ಮತ್ತಷ್ಟು ಆಕರ್ಷಕವಾಗಿ ಕಂಗೊಳಿಸುವಂತೆ ಮಾಡಲು ರಾತ್ರಿ ವೇಳೆ ಬೆಳಕಿನ ಅಲಂಕಾರಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.
ಥೀಮ್ ಪಾರ್ಕ್ ಕಾಮಗಾರಿ ಮುಗಿದ ಮೇಲೆ ಪ್ರತಿಮೆ ವೀಕ್ಷಣೆಗೆ ಮತ್ತಷ್ಟು ವ್ಯವಸ್ಥಿತ ಸೌಲಭ್ಯ ಮಾಡಲಾಗುವುದು. ಅಲ್ಲಿಯವರೆಗೆ ಇದು ತಾತ್ಕಾಲಿಕ ವ್ಯವಸ್ಥೆ ಆಗಿರುತ್ತದೆ. ಪ್ರತಿಮೆ ವೀಕ್ಷಣೆ ಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.