ಆರ್‌ಟಿಇ ಜಾರಿಗೆ ಕೇರಳ ಮಾದರಿ ಅಧ್ಯಯನ
Team Udayavani, Jun 7, 2017, 12:13 PM IST
ವಿಧಾನ ಪರಿಷತ್ತು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈವರೆಗೆ 1.05 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲಾಗಿದ್ದು, ಬಾಕಿ ಉಳಿದ 24,000 ಸೀಟುಗಳನ್ನು ಮೂರನೇ ಸುತ್ತಿನಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಹಂಚಿಕೆಗೆ ಸೂಚಿಸಲಾಗಿದೆ. ಹಾಗೆಯೇ ಕೇರಳದಲ್ಲಿ ಆರ್‌ಟಿಇ ಜಾರಿ ಬಗ್ಗೆ ಅಧ್ಯಯನ ನಡೆಸಿ ವರದಿ ಪಡೆಯಲಾಗುವುದು ಎಂದು ಸಚಿವ ತನ್ವೀರ್ ಸೇs… ಹೇಳಿದರು.
ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ವಿಷಯ ಕುರಿತು ಸದನದಲ್ಲಿ ಮಂಗಳವಾರ 3 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಯಿತು. ಸುದೀರ್ಘ ಉತ್ತರ ನೀಡಿದ ಸಚಿವ ತನ್ವೀರ್ ಸೇs…, “ಆರ್‌ಟಿಇ ಅಡಿ ಅನುದಾನರಹಿತ ಶಾಲೆ ಗಳಲ್ಲಿ ಮಾತ್ರವಲ್ಲದೆ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲೂ ಪ್ರವೇಶಕ್ಕೆ ಅವಕಾಶವಿದೆ. ತಮ್ಮ ಮಕ್ಕಳ ಕಲಿಕೆಗೆ ಅಗತ್ಯವಾದ ಶಾಲೆ ಆಯ್ಕೆ ಪೋಷಕರ ವಿವೇಚನೆಗೆ ಸೇರಿದ್ದಾಗಿದೆ. ಹಾಗಾಗಿ ಆರ್‌ಟಿಇ ಎಂದರೆ ಕೇವಲ ಅನುದಾನರಹಿತ ಶಾಲೆಗಳಲ್ಲಷ್ಟೇ ಪ್ರವೇಶ ಎಂಬಂತಿಲ್ಲ. ಪೋಷಕರು ತಾವು
ಬಯ ಸಿದ ಶಾಲೆಗಳಿಗೆ ಮಕ್ಕಳ ಪ್ರವೇಶ ಬಯಸಿ ಅರ್ಜಿ ಸಲ್ಲಿಸುತ್ತಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲೇ ಮೊದಲ ಸ್ಥಾನ: ಆರ್‌ಟಿಇ ಕಾಯ್ದೆ ಜಾರಿಗೆ 2014-15ರಲ್ಲಿ 160 ಕೋಟಿ ರೂ., 2015-16ನೇ ಸಾಲಿಗೆ 220 ಕೋಟಿ ರೂ. ಹಾಗೂ 2016-17ನೇ ಸಾಲಿಗೆ 226 ಕೋಟಿ ರೂ. ಅನುದಾನವಷ್ಟೇ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿದೆ. ಕೇಂದ್ರದಿಂದ ಆರ್‌ಟಿಇ ಜಾರಿಗೆ ನಿರೀಕ್ಷಿತ ಅನುದಾನ ಸಿಗದಿದ್ದರೂ ಪರಿಣಾಮಕಾರಿಯಾಗಿ ಜಾರಿಗೊಳಿಸಿರುವ 7 ರಾಜ್ಯಗಳ ಪೈಕಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ದೆಹಲಿ ಇತರೆ ರಾಜ್ಯಗಳಿವೆ ಎಂದು ತನ್ವೀರ್ ಸೇs…ಮಾಹಿತಿ ನೀಡಿದರು.
ಆರ್‌ಎಂಎಸ್‌ಎ ಅಭಿಯಾನದಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ ಹಂಚಿಕೆ ಅನುಪಾತ ಶೇ.40:
ಶೇ.60 ಇರಬೇಕು. ಆದರೆ ಕೇಂದ್ರ ಸರ್ಕಾರ ಶೇ.30ರಷ್ಟು ಅನುದಾನವನ್ನಷ್ಟೇ ನೀಡುತ್ತಿದೆ. ಸರ್ವ ಶಿಕ್ಷಾ ಅಭಿಯಾನದಡಿ ಎಲ್ಲ ರಾಜ್ಯಗಳಿಗೆ ಕೇಂದ್ರ ಹಂಚಿಕೆ ಮಾಡಲು ಒಟ್ಟು 45,000 ಕೋಟಿ ರೂ. ಅಗತ್ಯವಿದೆ. ಆದರೆ ಕೇಂದ್ರ ಸರ್ಕಾರವು ಕೇವಲ 23,500 ಕೋಟಿ ರೂ. ಕಾಯ್ದಿರಿ ಸಿದೆ ಎಂದು ಹೇಳಿದರು.
ಗುಣಮಟ್ಟ ಹೆಚ್ಚಿಸಲು ಕ್ರಮ: ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ, ಕಲಿಕಾ ಗುಣಮಟ್ಟ ಹೆಚ್ಚಿಸಲು ಸರ್ಕಾರ
ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಕೇವಲ ಒಬ್ಬ ವಿದ್ಯಾರ್ಥಿಗಳಿರುವ 129 ಶಾಲೆಗಳನ್ನು ಮುಚ್ಚದೆ ಶಿಕ್ಷಕರನ್ನು ನಿಯೋಜಿಸಿ ನಡೆಸಲಾಗುತ್ತಿದೆ. ಈಗಾಗಲೇ 10,400 ಶಿಕ್ಷಕರಿಗೆ ಇಂಗ್ಲಿಷ್ ಕಲಿಕಾ ತರಬೇತಿ ನೀಡಲಾಗಿದ್ದು, ಮಕ್ಕಳಿಗೆ ಬೋಧಿಸಲು
ಸಜ್ಜುಗೊಳಿಸಲಾಗಿದೆ. ಹಾಗೆಯೇ 3,600 ಕ್ಲಸ್ಟರ್‌ಗಳಿಗೆ ತಲಾ ಒಬ್ಬ ಮಾಸ್ಟರ್ ಟ್ರೈನರ್‌ರನ್ನು ನಿಯೋಜಿಸಲಾಗಿದೆ. ಶಾಲಾ ಕಟ್ಟಡಗಳ ದುರಸ್ತಿ, ಅಭಿವೃದ್ಧಿಗೆ ಖಾಸಗಿ ಕಂಪನಿಗಳ “ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ’ಯಡಿ ನೆರವು ಪಡೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.