ಕೇರಳ ಮಾದರಿಯಲ್ಲಿ ಆಕ್ಷೇಪ ಸಲ್ಲಿಕೆ: ಇಂದು ನಿರ್ಧಾರ
Team Udayavani, Mar 22, 2017, 3:50 AM IST
ಬೆಂಗಳೂರು: ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕಸ್ತೂರಿರಂಗನ್ ವರದಿಗೆ ಕೇರಳ ಮಾದರಿಯಲ್ಲಿ ಆಕ್ಷೇಪ ಸಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲು ಬುಧವಾರ ಪಶ್ಚಿಮಘಟ್ಟ ಭಾಗದ ಶಾಸಕರೊಂದಿಗೆ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸರಕಾರ ಹೇಳಿದೆ.
ವಿಧಾನಸಭೆಯಲ್ಲಿ ಕಸ್ತೂರಿರಂಗನ್ ವರದಿ ಕುರಿತಂತೆ ನಿಯಮ 69ರಡಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಮಂಡಿಸಿದ್ದ ಪ್ರಸ್ತಾವಕ್ಕೆ ಸರಕಾರದ ಪರವಾಗಿ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಬುಧವಾರ ಸಚಿವ ಸಂಪುಟ ಉಪಸಮಿತಿ ಸದಸ್ಯರು ಹಾಗೂ ಪಶ್ಚಿಮಘಟ್ಟ ಭಾಗದ ಶಾಸಕರ ಸಭೆ ಕರೆಯಲಾಗುವುದು. ಸಭೆಗೆ ಅಧಿಕಾರಿಗಳನ್ನೂ ಆಹ್ವಾನಿಸಲಾಗುವುದು. ಈ ಸಭೆಯಲ್ಲಿ ಯಾವ ರೀತಿ ಆಕ್ಷೇಪಣೆ ಸಲ್ಲಿಸಬೇಕು ಎಂಬ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಲ್ಲದೆ ಕಸ್ತೂರಿರಂಗನ್ ವರದಿ ಕುರಿತಂತೆ ಕೇಂದ್ರ ಸರಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ನಿಗದಿತ ಅವಧಿಯೊಳಗೆ (ಎ. 27) ಆಕ್ಷೇಪಣೆ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಅನಿ ವಾರ್ಯವಾದರೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ದು ಕಾಲಾವಕಾಶ ವಿಸ್ತರಿಸುವಂತೆ ಮನವಿ ಮಾಡಿಕೊಳ್ಳಲು ಸರಕಾರ ಸಿದ್ಧವಿದೆ ಎಂದು ಹೇಳಿದರು.
ಕೇಂದ್ರ ಸೂಚಿಸಿದರೂ ಕೇರಳ ಮಾದರಿ ಅನುಸರಿಸಿಲ್ಲ ಏಕೆ?
ಕಸ್ತೂರಿರಂಗನ್ ವರದಿ ಜಾರಿ ಕುರಿತ ಕೇಂದ್ರದ ಕರಡು ಅಧಿಸೂಚನೆಗೆ ಆಕ್ಷೇಪ ಸಲ್ಲಿಸುವಲ್ಲಿ ಸರಕಾರ ಎಡವಿದೆ ಎಂದು ಆರೋಪಿಸಿದ ಬಿಜೆಪಿ ಶಾಸಕರಾದ ಕೆ.ಜಿ. ಬೋಪಯ್ಯ, ಡಿ.ಎನ್. ಜೀವರಾಜ್, ಅಪ್ಪಚ್ಚು ರಂಜನ್, ಸುನೀಲ್‌ಕುಮಾರ್, ಎಸ್. ಅಂಗಾರ, ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಬಿ.ಬಿ. ನಿಂಗಯ್ಯ ಮತ್ತು ಎಚ್.ಕೆ.ಕುಮಾರಸ್ವಾಮಿ, ಕೇರಳ ಮಾದರಿಯಲ್ಲಿ ಆಕ್ಷೇಪ ಸಲ್ಲಿಸುವಂತೆ ಕೇಂದ್ರ ಸರಕಾರ ಸೂಚಿಸಿದರೂ ಅದನ್ನು ಏಕೆ ಪಾಲಿಸಿಲ್ಲ ಎಂದು ಪ್ರಶ್ನಿಸಿದರು.
ಕೇರಳ ಸರಕಾರ ಆಕ್ಷೇಪ ಸಲ್ಲಿಸುವ ಮೊದಲು ಗ್ರಾಮಸಭೆ ಗಳನ್ನು ನಡೆಸಿ ಅಲ್ಲಿನ ಅಭಿಪ್ರಾಯ ಸಂಗ್ರಹಿಸಿತ್ತು. ಅಲ್ಲಿನ ಸಂಸದರು, ಶಾಸಕರು, ತಜ್ಞರು ಮತ್ತು ಕಸ್ತೂರಿರಂಗನ್ ವರದಿ ಪರವಾಗಿರುವ ಪರಿಸರವಾದಿಗಳಿಂದಲೂ ಮಾಹಿತಿ ಪಡೆದಿತ್ತು. ಜತೆಗೆ ಸ್ಥಳೀಯವಾಗಿ ಸರ್ವೇ ನಡೆಸಿ ನೈಸರ್ಗಿಕ ಅರಣ್ಯ ಮತ್ತು ಸಾಂಸ್ಕೃತಿಕ ಅರಣ್ಯ ಎಂಬುದಾಗಿ ವಿಂಗಡಿಸಿ ವರದಿ ಸಿದ್ಧಪಡಿಸಿತ್ತು. ಈ ವರದಿಯನ್ನು ಆಕ್ಷೇಪಣೆಯೊಂದಿಗೆ ಸೇರಿಸಿ ಕಸ್ತೂರಿರಂಗನ್ ವರದಿಯಿಂದ ತಮ್ಮ ರಾಜ್ಯವನ್ನು ಏಕೆ ಹೊರಗಿಡಬೇಕು ಎಂಬುದನ್ನು ಸಮರ್ಥವಾಗಿ ವಿವರಿಸಿತ್ತು ಎಂದು ಹೇಳಿದರು.
ಈ ಆಕ್ಷೇಪಣೆಯನ್ನು ಅಂಗೀಕರಿಸಿದ್ದ ಕೇಂದ್ರ ಸರಕಾರ ಕಸ್ತೂರಿರಂಗನ್ ವರದಿಯಿಂದ ಕೇರಳವನ್ನು ಕೈಬಿಟ್ಟಿತ್ತು. ಅಲ್ಲದೆ, ಇದೇ ಮಾದರಿಯಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೂ ಸೂಚಿಸಿತ್ತು. ಇನ್ನೊಂದೆಡೆ ಪಶ್ಚಿಮ ಘಟ್ಟ ಭಾಗದ ಶಾಸಕರೂ ಗ್ರಾಮಸಭೆಗಳನ್ನು ನಡೆಸಿ ಮತ್ತು ಸ್ಥಳೀಯವಾಗಿ ಸರ್ವೇ ಮಾಡಿ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದರು. ಆದರೂ ರಾಜ್ಯ ಸರಕಾರ ಅದನ್ನು ಪರಿಗಣಿಸದೆ ಉಪಗ್ರಹ ಸರ್ವೇ ಆಧರಿಸಿ ಮತ್ತು ಮಂತ್ರಿಗಳ ವರದಿಯನ್ವಯ ಆಕ್ಷೇಪಣೆ ಸಲ್ಲಿಸಿದ್ದೇ ರಾಜ್ಯದ ಆಕ್ಷೇಪಣೆಯನ್ನು ಕೇಂದ್ರ ಸರಕಾರ ಪರಿಗಣಿಸಲಿಲ್ಲ ಎಂದು ಆರೋಪಿಸಿದರು.
ಕೇರಳ ಸರಕಾರ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಲ್ಲಿನ ಮುಖ್ಯಮಂತ್ರಿಗಳು ಹಲವು ಬಾರಿ ಪ್ರಧಾನಿ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಕೇರಳವನ್ನು ಕಸ್ತೂರಿರಂಗನ್ ವರದಿಯಿಂದ ಕೈಬಿಡುವಂತೆ ಕೋರಿದ್ದರು. ಆದರೆ, ನಮ್ಮ ಮುಖ್ಯಮಂತ್ರಿಗಳು ಪ್ರತಿಯೊಂದಕ್ಕೂ ಕೇಂದ್ರ ಸರಕಾರ ಮತ್ತು ಪ್ರಧಾನಿಯವರನ್ನು ದೂರುತ್ತಾ ಕಾಲ ಕಳೆದರೇ ಹೊರತು ಯಾವತ್ತೂ ರಾಜ್ಯದ ಪರವಾಗಿ ಪ್ರಧಾನಿ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿ ಮಾಡುವ ಪ್ರಯತ್ನ ಮಾಡಲಿಲ್ಲ ಎಂದರು.
ಒಂದು ವೇಳೆ ಈ ಬಾರಿಯೂ ರಾಜ್ಯ ಸರಕಾರ ಆಕ್ಷೇಪ ಸಲ್ಲಿಸುವಲ್ಲಿ ಎಡವಿದರೆ ಕಸ್ತೂರಿರಂಗನ್ ವರದಿ ಕುರಿತು ಅಂತಿಮ ಅಧಿಸೂಚನೆ ಹೊರಡಿಸಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಕೇಂದ್ರ ಸರಕಾರ ಇದೆ. ಒಂದು ವೇಳೆ ಅಂತಿಮ ಅಧಿಸೂಚನೆ ಹೊರಡಿಸಿದರೆ ಕಸ್ತೂರಿರಂಗನ್ ವರದಿಯಂತೆ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯಾಗುವುದರ ಜತೆಗೆ ಅದರ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತಿಲ್ಲ. ಪಶ್ಚಿಮಘಟ್ಟದ ಅನೇಕ ಹಳ್ಳಿಗಳ ಜತೆಗೆ ಕೆಲವು ಪಟ್ಟಣಗಳೂ ಈ ವ್ಯಾಪ್ತಿಗೆ ಬಂದು ಅಭಿವೃದ್ಧಿ ಕುಂಠಿತವಾಗಲಿದೆ. ಜನರು ತಮ್ಮ ಮನೆ, ಆಸ್ತಿ ಕಳೆದುಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.