ಜ.2ರಿಂದ 31ರವರೆಗೆ ಖಾದಿ ಉತ್ಸವ


Team Udayavani, Jan 1, 2018, 12:20 PM IST

khadi-utsava.jpg

ಬೆಂಗಳೂರು: ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವಜ್ರಮಹೋತ್ಸವದ ಅಂಗವಾಗಿ 2018ರ ಜ. 2ರಿಂದ 31ರವರೆಗೆ ನಗರದ ಸ್ವಾತಂತ್ರ್ಯ ಉದ್ಯಾನದ ಪೀಪಲ್‌ ಪ್ಲಾಜಾನಲ್ಲಿ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಂಡಿದೆ. 

ಒಂದು ತಿಂಗಳು ನಡೆಯುವ ಈ ಉತ್ಸವದಲ್ಲಿ ಜಮ್ಮು-ಕಾಶ್ಮೀರ, ಗುಜರಾತ್‌, ಆಂಧ್ರಪ್ರದೇಶ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ ಖಾದಿ ಉತ್ಪನ್ನಗಳು ಪ್ರದರ್ಶನಗೊಳ್ಳಲಿವೆ. ವಿನೂತನ ವಿನ್ಯಾಸಗಳ ಆಕರ್ಷಕ ಉತ್ಪನ್ನಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಫ್ಯಾಷನ್‌ ಶೋ, ಪ್ರಾತ್ಯಕ್ಷಿಕೆಗಳಿಂದ ಅಕ್ಷರಶಃ ಇದೊಂದು “ಖಾದಿ ಹಬ್ಬ’ ಆಗಲಿದೆ ಎಂದು ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್‌. ರಮೇಶ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

228 ಮಳಿಗೆ: ಉತ್ಸವದಲ್ಲಿ ಸುಮಾರು 228ಕ್ಕೂ ಅಧಿಕ ಮಳಿಗೆಗಳು ಇರಲಿದ್ದು, ಈಗಾಗಲೇ ಈ 203 ಆನ್‌ಲೈನ್‌ ಅರ್ಜಿಗಳು ಬಂದಿವೆ. ಖಾದಿ ಉತ್ಪನ್ನಗಳ ಮೇಲೆ ಶೇ. 35ರಷ್ಟು ಹಾಗೂ ರೇಷ್ಮೆ ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯ್ತಿ ಇರಲಿದೆ.

ಒಂದೂವರೆ ಲಕ್ಷ ಜನರ ಭೇಟಿ ಮತ್ತು 40 ಕೋಟಿ ರೂ. ವಹಿವಾಟು ನಿರೀಕ್ಷಿಸಲಾಗಿದೆ. ಕಳೆದ ವರ್ಷ ನಡೆದ ಉತ್ಸವದಲ್ಲಿ 1.05 ಲಕ್ಷ ಭೇಟಿ ನೀಡಿದ್ದು, 31 ಕೋಟಿ ರೂ. ವಹಿವಾಟು ನಡೆದಿತ್ತು. ಪ್ರವೇಶ ಶುಲ್ಕ 10 ರೂ. ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಜ.2ರಂದು ಸಂಜೆ 4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವೆ ಗೀತಾ ಮಹದೇವಪ್ರಸಾದ್‌ ಮಳಿಗೆಗಳನ್ನು ಉದ್ಘಾಟಿಸುವರು. ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ. ಸದಾನಂದಗೌಡ, ಸಚಿವರಾದ ರಾಮಲಿಂಗಾ ರೆಡ್ಡಿ, ರೋಷನ್‌ ಬೇಗ್‌, ಎಚ್‌.ಎಂ. ರೇವಣ್ಣ, ಎಂ. ಕೃಷ್ಣಪ್ಪ, ಕೃಷ್ಣ ಬೈರೇಗೌಡ, ಸಂಸದ ಎಂ. ವೀರಪ್ಪ ಮೊಯಿಲಿ ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ಡಾ.ಪಾಟೀಲ ಪುಟ್ಟಪ್ಪ (ಪಾಪು), ಡಾ.ಎಚ್‌.ಎಸ್‌. ದೊರೆಸ್ವಾಮಿ ಅವರೂ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. 

ಉತ್ಪನ್ನಗಳ ಮೇಲೆ ಚರಕದ ಗುರುತು: ರಾಜ್ಯದಲ್ಲಿ 147 ಖಾದಿ ಸಂಸ್ಥೆಗಳು ಕೆಲಸ ಮಾಡುತ್ತಿದ್ದು, ಇದರಡಿ 29 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ. ಇದರಲ್ಲಿ ಶೇ. 60ರಷ್ಟು ಮಹಿಳೆಯರಿದ್ದಾರೆ ಎಂದ ಅವರು, ನಿಜವಾದ ಖಾದಿ ಉತ್ಪನ್ನಗಳ ಮೇಲೆ “ಖಾದಿ ಇಂಡಿಯಾ’ದ ಲಾಂಛನ ಚರಕದ ಗುರುತು ಇರುತ್ತದೆ. ಗ್ರಾಹಕರು ಖರೀದಿಸುವಾಗ ಈ ಬಗ್ಗೆ ಪರಿಶೀಲಿಸಿ ದೃಢಪಡಿಸಿಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಮಂಡಳಿ ನಿರ್ದೇಶಕ ಸೋಮಶೇಖರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.