Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?
Team Udayavani, Oct 15, 2024, 6:45 AM IST
ಬೆಂಗಳೂರು: ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಮಂಜೂರಾಗಿದ್ದ 5 ಎಕರೆ ಭೂಮಿಯನ್ನು ಸರಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆ ಇತರರಿಗೆ ಆದರ್ಶರಾಗಿದ್ದಾರೆ. ಅದೇ ರೀತಿ ಈಗ ಬಿಜೆಪಿ ಮತ್ತು ಆರೆಸ್ಸೆಸ್ ನವರು ತಮಗೆ ಹಂಚಿಕೆಯಾಗಿರುವ ಭೂಮಿಯನ್ನು ಸರಕಾರಕ್ಕೆ ಹಿಂದಿರುಗಿಸುವರೇ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.
ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಶಿಕ್ಷಣ ಸಂಸ್ಥೆ ಸ್ಥಾಪಿಸು ವುದಾಗಿ ಗೃಹ ಮಂಡಳಿಯಿಂದ ಸಿಎ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೊಟೇಲ್ ನಡೆಸುತ್ತಿದ್ದಾರೆ. ಈಗ ನಾರಾಯಣ ಸ್ವಾಮಿ ಅವರೂ ಜಮೀನನ್ನು ವಾಪಸ್ ಮಾಡಿ ಆದರ್ಶರಾಗುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಆರೆಸ್ಸೆಸ್‌ನವರಿಗೆ ಸವಾಲು
ಬಿಜೆಪಿ ಸರಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾನಿಲಯಕ್ಕೆ ದೇವನಹಳ್ಳಿ ಬಳಿ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರಕಾರದ ಬೊಕ್ಕಸಕ್ಕೆ 137 ಕೋಟಿ ರೂ. ನಷ್ಟವಾಗಿದೆ. ಈಗ ಆ ಜಮೀನನ್ನು ಆರೆಸ್ಸೆಸ್‌ನವರು ವಾಪಸ್ ಮಾಡುವ ಮೂಲಕ ಆದರ್ಶ ತೋರಿಸಲಿ ಎಂದು ಸವಾಲೆಸಿದ್ದಾರೆ.
ಬಿಜೆಪಿ, ಸಂಘ ಪರಿವಾರದವರು ವಿವಿಧೆಡೆಯ ಗೋಮಾಳಗಳನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.