ಖರ್ಗೆಗೆ ದೇವರಾಜು ಅರಸು ಪ್ರಶಸ್ತಿ ಪ್ರದಾನ
Team Udayavani, Aug 21, 2017, 12:11 PM IST
ಬೆಂಗಳೂರು: “ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಇದರ ನೆಪದಲ್ಲಿ ರಾಜ್ಯಗಳ ಹಕ್ಕು ಕಸಿಯುವ ಕೆಲಸ ಮಾಡುವುದು ಅಥವಾ ರಾಜ್ಯದ ಸ್ವಾಯತ್ತತೆಗೆ ಕೇಂದ್ರ ಸರ್ಕಾರ ಕೈ ಹಾಕುವುದನ್ನು ನೋಡುತ್ತಾ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ’ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭಾನುವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 102ನೇ ಜನ್ಮದಿನಾಚರಣೆ ಹಾಗೂ 2017ನೇ ಸಾಲಿನ ರಾಜ್ಯಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಅರಸು ಪ್ರಶಸ್ತಿ ಪ್ರದಾನ ಮಾಡಿ ಸಿದ್ದರಾಮಯ್ಯ ಮಾತನಾಡಿದರು. “ಈಚೆಗೆ ರಾಜ್ಯಕ್ಕೆ ಭೇಟಿ ಕೊಟ್ಟಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವುದನ್ನು ರಾಜ್ಯ ಸರ್ಕಾರ ವಿರೋಧಿಸಿದೆ ಎಂದು ಪಾಠ ಹೇಳಿ ಹೋಗಿದ್ದಾರೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಕೇಂದ್ರ ಸರ್ಕಾರದ ತೀರ್ಮಾನ ಒಕ್ಕೂಟ ವ್ಯವಸ್ಥೆಯಲ್ಲಿ 1992ರಲ್ಲಿನ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಇರಬೇಕು. ರಾಜ್ಯದ ಸ್ವಾಯತ್ತತೆಗೆ ಧಕ್ಕೆ ಬರಬಾರದು ಎಂಬ ಅಂಶದಲ್ಲಿ ನಾವು ಕೇಂದ್ರ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿದ್ದೇವೆ ‘ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಸಚಿವರಾದ ಕೆ.ಜೆ.ಜಾರ್ಜ್, ರೋಷನ್‌ಬೇಗ್, ವಿಧಾನಪರಿಷತ್ ಸದಸ್ಯ ಎಚ್. ಎಂ.ರೇವಣ್ಣ, ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಹುಚ್ಚಪ್ಪ, ಸಾಹಿತಿ ಡಾ. ಹಂಪಾ ನಾಗರಾಜಯ್ಯ ಮತ್ತಿತರರು ಇದ್ದರು.
ಜನ ನಮ್ಮ ಜೊತೆ ಇದ್ದಾಗ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ದೇಶಕ್ಕೆ ಕಾಂಗ್ರೆಸ್ ಕೊಡುಗೆ ದೊಡ್ಡದು. ಇಂದಿರಾಗಾಂಧಿಯವರು ಹತ್ತಂಶ, ಇಪ್ಪತ್ತಂಶದ ಕಾರ್ಯಕ್ರಮ ಗಳನ್ನು ಕೊಟ್ಟರು. ದೇವರಾಜ ಅರಸು ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಇಂದು ಸಿದ್ದರಾಮಯ್ಯ ಸಹ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಪಕ್ಷವನ್ನು ಬಲಪಡಿಸುವ ವಿಚಾರದಲ್ಲಿ ಇಲ್ಲಿಯವರೆಗೆ ನಾನು ಯಾವತ್ತೂ ಹಿಂದೇಟು ಹಾಕಿಲ್ಲ, ಮುಂದೆಯೂ ಹಾಕಲ್ಲ.
ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.