ಸಿಗಲಿದೆ ಮೂಲ ಕಾಂಗ್ರೆಸ್ಸಿಗರಿಗೆ ಆನೆ ಬಲ; ಬಣ ರಾಜಕೀಯಕ್ಕೆ ಬ್ರೇಕ್‌ ಸಾಧ್ಯತೆ

ಖರ್ಗೆಗೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರುವ ಸವಾಲು

Team Udayavani, Oct 20, 2022, 6:50 AM IST

ಸಿಗಲಿದೆ ಮೂಲ ಕಾಂಗ್ರೆಸ್ಸಿಗರಿಗೆ ಆನೆ ಬಲ; ಬಣ ರಾಜಕೀಯಕ್ಕೆ ಬ್ರೇಕ್‌ ಸಾಧ್ಯತೆ

ಬೆಂಗಳೂರು: ಕರ್ನಾಟಕದ ರಾಜಕಾರಣದ ಆಳ-ಅಗಲ ಅರಿತಿರುವ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಗಾದಿಗೆ ಏರಿರುವುದು ರಾಜ್ಯದ ಕಾಂಗ್ರೆಸ್ಸಿಗರಿಗೆ ಆನೆಬಲ ಬಂದಂತಾಗಿದೆ.

ಬಣ ರಾಜಕೀಯ ಸಹಿತ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ವಿಷಯ ವನ್ನು ನೇರ ವಾಗಿ ಹೈಕಮಾಂಡ್‌ಗೂ ತಲುಪಿಸ ಬಹುದೆಂಬ “ಧೈರ್ಯ’ವೂ ಸಿಕ್ಕಂತಾಗಿದೆ.

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಖರ್ಗೆ ಅವರು ಈ ಪ್ರಮುಖ ಹುದ್ದೆಗೆ ಏರಿರುವುದು ಹಲವು ಬದಲಾವಣೆಗೂ ಕಾರಣವಾದೀತು.

ಯಾವುದೇ ದೃಷ್ಟಿಕೋನದಿಂದ ನೋಡಿದರೂ ಕರ್ನಾಟಕ ಕಾಂಗ್ರೆಸ್‌ ಪಾಲಿಗೆ ಖರ್ಗೆ ಆಯ್ಕೆ ರಾಜಕೀಯ ವಾಗಿ ಲಾಭವನ್ನೇ ತರಲಿದೆ.

ರಾಜ್ಯದ 224 ವಿಧಾನಸಭೆ ಕ್ಷೇತ್ರ ಹಾಗೂ 28 ಲೋಕಸಭೆ ಕ್ಷೇತ್ರಗಳ ಸಂಗತಿಗೆ ಬಂದರೆ ಪ್ರತಿ ಕ್ಷೇತ್ರದ ಸಮುದಾಯ, ಪ್ರಭಾವ, ಸಾಮರ್ಥ್ಯ ಇವೆಲ್ಲದರ ಬಗ್ಗೆಯೂ ಖರ್ಗೆಗೆ ಸಂಪೂರ್ಣ ಮಾಹಿತಿ ಇದೆ.

ಹೀಗಾಗಿ, ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ತಲುಪಲು ಖರ್ಗೆ ಮಾರ್ಗದರ್ಶನವೂ ಲಭ್ಯವಾಗಲಿದೆ. ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು, ದೇಶದಲ್ಲಿ ಕಾಂಗ್ರೆಸ್‌ಗೆ ಬಲ ತುಂಬುವ ಸವಾಲೂ ಖರ್ಗೆ ಮುಂದಿದೆ.

ಸಮನ್ವಯಕಾರ
ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಷ ನಿಷ್ಠೆ ಪ್ರಶ್ನಾತೀತ. ಪಕ್ಷಕ್ಕೆ ಸಂಕಷ್ಟ ಬಂದಾಗ ಎಂಥ ತ್ಯಾಗಕ್ಕೂ ಸಿದ್ಧರಾಗಿ ಪಕ್ಷ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧರಾದವರು. ಮುಂದಿನ ಚುನಾ ವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿ ಜೆಡಿಎಸ್‌ ನಿರ್ಣಾಯಕ ಪಾತ್ರ ವಹಿಸಿದರೆ ಆಗ ಸಮನ್ವಯಕ್ಕೂ ಖರ್ಗೆ ಪಾತ್ರ ಮಹತ್ವದ್ದಾಗಿರುತ್ತದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಬಿ.ಕೆ.ಹರಿಪ್ರಸಾದ್‌, ಎಂ.ಬಿ.ಪಾಟೀಲ್‌ ಹಾಗೂ ಇತರ ನಾಲ್ವರು ಕಾರ್ಯಾಧ್ಯಕ್ಷರನ್ನು ಚುನಾ ವಣೆಯಲ್ಲಿ ಸಮರ್ಥವಾಗಿ ದುಡಿಸಿ ಕೊಳ್ಳಬಲ್ಲ ಜಾಣ್ಮೆಯೂ ಖರ್ಗೆಗಿದೆ. ಅಪಸ್ವರಕ್ಕೆ ಆಸ್ಪದ ಇಲ್ಲದಂತೆ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯವೂ ಇವರಿಗಿದೆ ಎನ್ನಲಾಗುತ್ತಿದೆ.

ದಲಿತ ಮತಬ್ಯಾಂಕ್‌ ಸೆಳೆಯಲು ಪ್ರಯತ್ನ
ಮಲ್ಲಿಕಾರ್ಜುನ ಖರ್ಗೆ ತನ್ನನ್ನು ದಲಿತ ಸಮುದಾಯದ ನಾಯಕ ಎಂಬು ದಕ್ಕಿಂತ ಕಾಂಗ್ರೆಸ್‌ ನಾಯಕ ಎಂದೇ ಬಿಂಬಿಸಿಕೊಳ್ಳಲು ಇಷ್ಟಪಡುತ್ತಿದ್ದರು. ಅನುಭವ ಮತ್ತು ಹಿರಿತನಕ್ಕೆ ಆದ್ಯತೆ ಅಷ್ಟೆ. ರಾಜ್ಯದ ಮಟ್ಟಿಗೆ ಖರ್ಗೆ ಅವರು ದಲಿತ ಸಮುದಾಯದ ಪ್ರಶ್ನಾತೀತ ನಾಯಕರೂ ಆಗಿದ್ದು, ಎಐಸಿಸಿ ಅಧ್ಯಕ್ಷ ರಾಗಿರುವುದರಿಂದ ಕಾಂಗ್ರೆಸ್‌ನಿಂದ ದೂರವಾಗಿರುವ ದಲಿತ ಮತಬ್ಯಾಂಕನ್ನು ಮತ್ತೆ ಸೆಳೆಯಲು ಗಂಭೀರ ಪ್ರಯತ್ನ ನಡೆಯಲಿದೆ ಎನ್ನಲಾಗುತ್ತಿದೆ.

-ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.