ಬರ ಪರಿಶೀಲನೆ ಸಭೆಯಲ್ಲಿ ಖೂಬಾ-ಖಾಶೆಂಪೂರ ಕಿತ್ತಾಟ
Team Udayavani, Jun 4, 2019, 3:00 AM IST
ಬೀದರ: ಜಿಪಂ ಸಭಾಂಗಣದಲ್ಲಿ ನಡೆದ ಬರ ಪರಿಶೀಲನೆ ಸಭೆಯಲ್ಲಿ ಕುಡಿಯುವ ನೀರಿನ ವಿಷಯಕ್ಕೆ ಸಂಬಂ ಧಿಸಿದಂತೆ ಚರ್ಚೆ ನಡೆಯುತ್ತಿರುವ ಮಧ್ಯೆ ಮಾತನಾಡಿದ ಸಂಸದ ಭವಂತ ಖೂಬಾ ಆತುರದಲ್ಲಿ “ನಾಲಾಯಕ್ ಸರ್ಕಾರ’ ಎಂಬ ಪದ ಬಳಸಿದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಕೆಲ ಹೊತ್ತು ವಾಗ್ವಾದ ಕೂಡ ನಡೆಯಿತು. ಸಭೆಯಲ್ಲಿ ಬೀದರ ನಗರದ ವಿವಿಧೆಡೆ ಟ್ಯಾಂಕರ್ ನೀರು ಪೂರೈಕೆ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಂಸದ ಖೂಬಾ, ನಗರದಲ್ಲಿ ಸ್ಥಳೀಯ ಶಾಸಕ ಹಾಗೂ ಸಚಿವರಾದ ರಹೀಂ ಖಾನ್ ಉಚಿತ ನೀರು ಎಂದು ಟ್ಯಾಂಕರ್ ಮೇಲೆ ಬರೆಸಿ ವಿವಿಧ ವಾರ್ಡ್ಗಳಲ್ಲಿ ನೀರು ಪೂರೈಕೆ ಮಾಡುತ್ತಿದ್ದಾರೆ.
ಹಾಗಾದರೆ ಸರ್ಕಾರ ಏನು ಮಾಡುತ್ತಿದೆ. ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ “ನಾಲಾಯಕ್ ಸರ್ಕಾರ’ ಎಂಬ ಪದ ಬಳಸಿದರು. ಇದರಿಂದ ಕ್ರುದ್ಧರಾದ ಬಂಡೆಪ್ಪ ಖಾಶೆಂಪೂರ್ ಮಧ್ಯೆ ಪ್ರವೇಶಿಸಿ, ಸಂಸದರು ಮಾತಾಡುವಾಗ ಪದಗಳ ಮೇಲೆ ಹಿಡಿತ ಸಾಧಿಸಬೇಕು.
ರಾಜ್ಯದಲ್ಲಿ ನಾಲಾಯಕ್ ಸರ್ಕಾರ ಇದೆ ಎಂದು ಹೇಗೆ ಆರೋಪಿಸುತ್ತಿದ್ದೀರಿ ಎಂದು ಕಿಡಿ ಕಾರಿದರು. ನಂತರ ಸಂಸದರು ಮಾತನಾಡಿ, ನಾನು ಸರ್ಕಾರಕ್ಕೆ ನಾಲಾಯಕ್ ಅಂದಿಲ್ಲ. ಬದಲಿಗೆ ಅಧಿ ಕಾರಿಗಳಿಗೆ ಆ ಪದ ಬಳಸಿದ್ದೇನೆ ಎಂದು ಸಮರ್ಥನೆ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.