ರಾಜ್ಯದ ಜನರನ್ನು ಕಾಡುತ್ತಿದೆ ಮೂತ್ರಪಿಂಡ ಸಮಸ್ಯೆ
ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಸಿಕ 4,250 ರೋಗಿಗಳಿಗೆ ಡಯಾಲಿಸಿಸ್
Team Udayavani, Mar 10, 2022, 11:45 AM IST
ಬೆಂಗಳೂರು: ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಾಗಿದ್ದು, ಇದೀಗ 30-60ವರ್ಷ ದೊಳಗಿನ 10ರಿಂದ 15ಲಕ್ಷ ಮಂದಿ ಮೂತ್ರಪಿಂಡ ಸಮಸ್ಯೆಗೆ ತುತ್ತಾಗುತ್ತಿದ್ದಾರೆ.
ಮನುಷ್ಯನ ದೇಹದಿಂದ ವಿಷಕಾರಿ ವಸ್ತುಗಳನ್ನು ಹೊರಹಾಕುವುದರಿಂದ ಹಿಡಿದು, ದೇಹ ದಲ್ಲಿನ ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ನಿಯಂತ್ರಿಸುವುದು ಸೇರಿದಂತೆ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಮೂತ್ರಪಿಂಡಗಳು ಪ್ರಮುಖ ಪಾತ್ರವಹಿಸುತ್ತವೆ. ಇವುಗಳ ಬಗ್ಗೆ ಎಚ್ಚರಿಕೆವಹಿಸದಿದ್ದರೆ ಜೀವಕ್ಕೆ ಕುತ್ತು ಬರಲಿದೆ. ಇದು ವಿಶ್ವದ ಜನಸಂಖ್ಯೆಯ ಸರಿಸುಮಾರು ಶೇ.10 ವಯಸ್ಕರ ಮೇಲೆಪರಿಣಾಮ ಬೀರುತ್ತಿದೆ. ಭಾರತದಲ್ಲಿ ಪ್ರತಿ ವರ್ಷ 2,00,000 ಮಂದಿ ಮೂತ್ರಪಿಂಡ ವೈಫಲ್ಯದಿಂದ ಮರಣ ಹೊಂದುತ್ತಿರುವ ಆತಂಕ ಮೂಡಿಸಿದೆ.
ಅಧಿಕ ರಕ್ತದೊತ್ತಡ ಹಾಗೂ ನಿರಂತರವಾಗಿ ನೋವು ನಿವಾರಕ ಔಷಧ ಸೇವಿಸುತ್ತಿರುವಲ್ಲಿ ಮೂತ್ರಪಿಂಡದ ಸಮಸ್ಯೆಹೆಚ್ಚಾಗಿ ಕಂಡು ಬರುತ್ತಿದೆ. ರಾಜ್ಯದಲ್ಲಿಯುವಕರು ಮೂತ್ರ ಪಿಂಡ ಸಮಸ್ಯೆಯಿಂದ ಒಳಗಾಗುತ್ತಿದ್ದಾರೆ. ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಸ್ಥಾಪಿಸಲಾದ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟಾರೆ 4,250 ಮಂದಿ ಪ್ರತಿ ತಿಂಗಳು ಡಯಾಲಿಸಿಸ್‌ಗೆ ಒಳಗಾಗುತ್ತಿದ್ದಾರೆ. 2007ರಿಂದ 2022ರ ವರೆಗೆ ಒಟ್ಟು 920 ಮಂದಿಗೆ ಹೊಸ ಮೂತ್ರಪಿಂಡ ಕಸಿ ಮಾಡಲಾಗಿದೆ. ಪ್ರಸ್ತಕ ಸಾಲಿನಲ್ಲಿ 14ಮಂದಿಕಿಡ್ನಿ ಕಸಿ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆ ಹೊರತಾಗಿಯೂ ಲಕ್ಷಾಂತರ ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದಾರೆ.
ಮೂತ್ರಪಿಂಡಗಳನ್ನು ರಕ್ಷಣೆಗೆ ಪ್ರತಿಯೊಬ್ಬರೂ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡ ಬೇಕು. ನಿತ್ಯ ನಿಗದಿತ ಪ್ರಮಾಣದ ನೀರಿನ ಸೇವೆ ಪ್ರಮಾಣ ಹೆಚ್ಚಿಸಿಕೊಳ್ಳಬೇಕು. ಆರೋಗ್ಯಕರ ತೂಕ, ಅತಿಯಾದ ಮದ್ಯಪಾನ ಹಾಗೂ ಧೂಮಪಾನ ತ್ಯಜಿಸಬೇಕು. ರಕ್ತದೊತ್ತಡವನ್ನು ಪರೀಕ್ಷಿಸುವಿದರ ಜತೆಗೆಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಿತ್ಯ ವ್ಯಾಯಾಮದ ಹಾಗೂ ನಿಯಮಿತ ದೇಹದ ತಪಾಸಣೆ ಮಾಡಿಸಬೇಕು.
ಲಕ್ಷಣಗಳು :
- ಕಡಿಮೆಯಾದ ಮೂತ್ರದ ಉತ್ಪಾದನೆ
- ದ್ರವದ ಧಾರಣದಿಂದಾಗಿಪಾದಗಳಲ್ಲಿ ಊತ
- ಆಯಾಸ, ದೌರ್ಬಲ್ಯ
- ಉಸಿರಾಟದ ತೊಂದರೆ
- ವಾಕರಿಕೆ, ವಾಂತಿ
- ಅನಾರೋಗ್ಯದಿಂದ ಬಳಲುತ್ತಿರುವುದು.
ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಮೂತ್ರಪಿಂಡವೈಫಲ್ಯದ ಅನುವಂಶಿಕ ಹಿನ್ನೆಲೆಹೊಂದಿರುವವರಲ್ಲಿ ಮೂತ್ರಪಿಂಡ ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿವೆ. ಈ ನಿಟ್ಟಿನಲ್ಲಿ ನಿತ್ಯಆರೋಗ್ಯದ ಬಗ್ಗೆ ಗಮನ ಹರಿಸುವುದರ ಜತೆಗೆ ವಾರ್ಷಿಕ ತಪಾಸಣೆಗೆ ಒಳಗಾಗಬೇಕು. –ಡಾ. ವಿದ್ಯಾಶಂಕರ್ ಪಿ, ಆಸ್ಟರ್ ಸಿಎಂಐ ಆಸ್ಪತ್ರೆಯ ನೆಫ್ರಾಲಜಿ ತಜ್ಞ
–ತೃಪ್ತಿ ಕುಮ್ರಗೋಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.