12ರಂದು ಕಿರಣ್‌ಕುಮಾರ್‌ಗೆ “ಬಸವಶ್ರೀ’ ಪ್ರಶಸ್ತಿ ಪ್ರದಾನ
Team Udayavani, May 9, 2019, 3:02 AM IST
ಬೆಂಗಳೂರು: ಬಸವ ವೇದಿಕೆ ಈ ವರ್ಷದ “ಬಸವಶ್ರೀ’ ಪ್ರಶಸ್ತಿಯನ್ನು ಇಸ್ರೋದ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್‌ಕುಮಾರ್ ಹಾಗೂ “ವಚನ ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ಕವಿ ಜರಗನಹಳ್ಳಿ ಶಿವಶಂಕರ್ ಮತ್ತು ಸಾಹಿತಿ ಡಾ.ನಾ.ಮೊಗಸಾಲೆ ಅವರಿಗೆ ಘೋಷಿಸಿದೆ. ಮೇ12ರ ಬೆಳಗ್ಗೆ 10.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ “ಬಸವ ಜಯಂತಿ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಸವ ವೇದಿಕೆ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಬಸವಾದಿ ಶರಣರ ವಿಚಾರಧಾರೆಗೆ ಅನುಗುಣವಾಗಿ ಸಾಮಾಜಿಕ ಸೇವೆ ಸಲ್ಲಿಸಿರುವ ಸಾಧಕರಿಗೆ “ಬಸವಶ್ರೀ’ ಹಾಗೂ ವಚನ ಸಾಹಿತ್ಯದಲ್ಲಿ ಸಾಕಷ್ಟು ಕೃತಿ ಮಾಡಿರುವವರಿಗೆ “ವಚನ ಸಾಹಿತ್ಯಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಗದ್ಗುರು ತೋಂಟದಾರ್ಯ ಮಠದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಪಾವಗಡ ಶ್ರೀರಾಮಕೃಷ್ಣ ಸೇವಾಶ್ರಮದ ಜಪಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಮೂಡಬಿದರೆ ಆಳ್ವಾಸ್ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಬಸವ ಜ್ಯೋತಿ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ರಂಗಕರ್ಮಿ ಬಿ.ಜಯಶ್ರೀ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ್ ವಚನ ಸಾಹಿತ್ಯಶ್ರೀ ಪ್ರಶಸ್ತಿಯನ್ನು ಪುರಸ್ಕೃತರಿಗೆ ನೀಡಿ ಗೌರವಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.