“ಸಿದ್ದರಾಮಯ್ಯನವರೇ, ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್?”: ಮುಂದುವರಿದ ಟ್ವೀಟ್ ವಾರ್
Team Udayavani, Oct 19, 2021, 1:13 PM IST
ಬೆಂಗಳೂರು: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವಿನ ಮಾತಿನ ಸಮರ ಜೋರಾಗುತ್ತಿದೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಟ್ವೀಟ್ ವಾರ್ ಇಂದೂ ಮುಂದುವರಿದಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟೀಕಿಸಿ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ ನೀಡಿದ್ದೆ ಎಂಬ ಸಿದ್ದರಾಮಯ್ಯನವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ, “ಮಾನ್ಯ ಸಿದ್ದರಾಮಯ್ಯ ಅವರೇ, ಯಾರನ್ನು ಓಲೈಸಲು ನೀವು ಈ ಮಾತನ್ನು ಹೇಳಿದ್ದೀರಿ ಎಂದು ರಾಜ್ಯದ ಜನತೆಗೆ ತಿಳಿದಿದೆ. ಚುನಾವಣೆ, ಉಪಚುನಾವಣೆ ಎದುರಾದಾಗಲೆಲ್ಲ ನಿಮ್ಮ ವರಸೆ ಇದೇ ರೀತಿ ಬದಲಾಗುತ್ತದೆ. ಬಹು ಸಂಖ್ಯಾತರ ಮೇಲೆ ದ್ವೇಷ ಕಕ್ಕುವುದು, ಅಲ್ಪಸಂಖ್ಯಾತರನ್ನು ಓಲೈಸುವುದು ನಿಮ್ಮ ಖಯಾಲಿಯಾಗಿ ಬಿಟ್ಟಿದೆ” ಎಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ:ಮತಾಂತರಕ್ಕೆ ಪ್ರಯತ್ನ ಆರೋಪ | ಭೈರಿದೇವರಕೊಪ್ಪ ಚರ್ಚ್‌ನ ಪಾಸ್ಟರ್ ಸೋಮು ಬಂಧನ
ಸಿದ್ದರಾಮಯ್ಯ ಅವರೇ, ಈ ರೀತಿ ಸುತ್ತಿ ಬಳಸಿ ಮಾತನಾಡುವ ಬದಲು, ಬಹುಸಂಖ್ಯಾತರ ತುಳಿದು, ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ್ದೇನೆ. ಹೀಗಾಗಿ ಮುಂದಿನ ಬಾರಿ ಚಾಮರಾಜಪೇಟೆಗೆ ವಲಸೆ ಹೋಗುತ್ತೇನೆ ಎಂದು ನೇರವಾಗಿಯೇ ಹೇಳಬಹುದಲ್ಲವೇ ಎಂದು ಪ್ರಶ್ನಿಸಿದೆ.
ಇದೇ ಖಡ್ಗದ ಮೂಲಕ ರಾಜ್ಯದಲ್ಲಿ ಹಿಂದೂಗಳ ಮಾರಣ ಹೋಮ ನಡೆಸುವುದಕ್ಕೆ ಸಿದ್ದರಾಮಯ್ಯ ಪ್ರೋತ್ಸಾಹ ನೀಡಿದ್ದರು. ಒಂದು ವರ್ಗದ ಓಲೈಕೆಗಾಗಿ ಮಾಡಿದ ಪ್ರಹಸನದಿಂದಾಗಿಯೇ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿಗೆ ಓಡುವಂತಾಗಿತ್ತು. ಆದರೂ, ಸಿದ್ದರಾಮಯ್ಯ ಅವರಿಗೆ ಇನ್ನೂ ಬುದ್ದಿ ಬಂದಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಇದೇ ಖಡ್ಗದ ಮೂಲಕ ರಾಜ್ಯದಲ್ಲಿ ಹಿಂದೂಗಳ ಮಾರಣ ಹೋಮ ನಡೆಸುವುದಕ್ಕೆ @siddaramaiah ಪ್ರೋತ್ಸಾಹ ನೀಡಿದ್ದರು.
ಒಂದು ವರ್ಗದ ಓಲೈಕೆಗಾಗಿ ಮಾಡಿದ ಪ್ರಹಸನದಿಂದಾಗಿಯೇ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿಗೆ ಓಡುವಂತಾಗಿತ್ತು.
ಆದರೂ, ಸಿದ್ದರಾಮಯ್ಯ ಅವರಿಗೆ ಇನ್ನೂ ಬುದ್ದಿ ಬಂದಿಲ್ಲ.
3/4#ಬುರುಡೆರಾಮಯ್ಯ pic.twitter.com/U2yexUTQs3
— BJP Karnataka (@BJP4Karnataka) October 19, 2021
ಬಾದಾಮಿಯಿಂದ ಮತ್ತೆ ವಲಸೆ ಹೋಗಲು ಸಿದ್ದರಾಮಯ್ಯ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಅದಕ್ಕಾಗಿ ಈಗ ಮತ್ತೆ ಓಲೈಕೆ ರಾಜಕಾರಣದ ಹಾದಿ ಹಿಡಿದಿದ್ದಾರೆ. ಈ ಮೂಲಕ ಚಾಮರಾಜಪೇಟೆ ಕ್ಷೇತ್ರಕ್ಕೆ ವಲಸೆಗೆ ಹೋಗಲು ಸಿದ್ಧತೆ ನಡೆಸಿದ್ದು ನಿಜವಲ್ಲವೇ? ಸಿದ್ದರಾಮಯ್ಯನವರೇ, ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.