ಕಿಸಾನ್ ಸಮ್ಮಾನ್: 4000 ರೂ. ಸಹಾಯಧನ
Team Udayavani, Jul 27, 2019, 5:10 AM IST
ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರದ ವತಿಯಿಂದ ಸಣ್ಣ ಹಿಡುವಳಿದಾರರಿಗೆ ವಾರ್ಷಿಕ 4000 ರೂ.ಸಹಾಯಧನ ಹಾಗೂ ನೇಕಾರರ ಸಾಲ 100 ಕೋಟಿ ರೂ.ಮನ್ನಾ ಮಾಡುವ ನಿರ್ಧಾರ ಕೈಗೊಳ್ಳುವ ಮೂಲಕ ತಾವೂ ರೈತನ ಮಗನಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದಾರೆ.
ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಯಡಿಯೂರಪ್ಪ, ಮೂರನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯದಲ್ಲಿ ತೀವ್ರ ಬರ ತಲೆದೋರಿದ್ದು, ರೈತ ಸಮುದಾಯ ಸಂಕಷ್ಟದಲ್ಲಿದ್ದು, ಅವರಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರವು ಸಣ್ಣ ಹಿಡುವಳಿದಾರರಿಗೆ ವಾರ್ಷಿಕ 6,000 ರೂ. ಸಹಾಯಧನ ನೀಡುತ್ತಿದೆ. ಆ ಯೋಜನೆ ಯಡಿ ರಾಜ್ಯ ಸರ್ಕಾರದ ವತಿಯಿಂದ ತಲಾ 2000 ರೂ.ನಂತೆ 2 ಕಂತಿನಲ್ಲಿ ಒಟ್ಟು 4000 ರೂ. ಸಹಾಯಧನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಪ್ರಕಟಿಸಿದರು.
ರೈತ ಮತ್ತು ನೇಕಾರರು ರಾಜ್ಯದ ಎರಡು ಕಣ್ಣುಗಳಿದ್ದಂತೆ. ರಾಜ್ಯದ ನೇಕಾರರು ಪಡೆದ ಸಾಲದ ಮೊತ್ತ 2019 ಮಾ.30ಕ್ಕೆ ಕೊನೆಗೊಂಡಂತೆ 100 ಕೋಟಿ ರೂ.ಬಾಕಿ ಇದೆ. ನೇಕಾರರ ಸಾಲದ ಮೊತ್ತವನ್ನು ಮನ್ನಾ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಾಡಿನ ರೈತರು, ನೇಕಾರರು, ಮೀನುಗಾರರು, ಕೃಷಿ ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸಲು ವಿಶೇಷ ಗಮನ ನೀಡಲಾಗುವುದು. ರೈತರ ಸಾಲ ಮನ್ನಾ ಸಂಬಂಧ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಸೋಮವಾರ ಅಧಿವೇಶನ: ಸರ್ಕಾರ ರಚನೆಯಾದ ಬೆನ್ನಲ್ಲೇ ವಿಶ್ವಾಸಮತ ಸಾಬೀತುಪಡಿಸಬೇಕಿದ್ದು, ಸೋಮವಾರ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಅಧಿವೇಶನ ಕರೆಯಲಾಗಿದ್ದು, ವಿಶ್ವಾಸಮತ ಸಾಬೀತುಪಡಿಸಿ ಬಳಿಕ ಹಣಕಾಸು ವಿಧೇಯಕಕ್ಕೆ ಅನುಮೋದನೆ ಪಡೆಯಲಾಗುವುದು. ಮಂಗಳವಾರ ವಿಧಾನ ಪರಿಷತ್ ಕಲಾಪ ನಡೆಸಲು ತೀರ್ಮಾನಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಪಾವತಿಗೆ ಜು.30ರಂದೇ ಹಣ ಡ್ರಾ ಮಾಡಬೇಕಾದ ಹಿನ್ನೆಲೆಯಲ್ಲಿ ತ್ವರಿತವಾಗಿ ಹಣಕಾಸು ವಿಧೇಯಕಕ್ಕೆ ಅನುಮತಿ ಪಡೆಯಬೇಕಿದೆ ಎಂದು ಹೇಳಿದರು.
ಜನತೆ, ಪ್ರಧಾನಿ, ಶಾಗೆ ಅಭಿನಂದನೆ: ‘ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಿದ ರಾಜ್ಯದ ಆರೂವರೆ ಕೋಟಿ ಜನರಿಗೆ ಶುಭ ಕೋರುತ್ತೇನೆ. ನನಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದು ರಾಜ್ಯದ ಜನತೆಗೆ ಸಂದ ಗೌರವವೆಂದು ಭಾವಿಸುತ್ತೇನೆ. ನಾನು ಮುಖ್ಯಮಂತ್ರಿಯಾಗಲು ರಾಜ್ಯದ ಜನತೆ, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರ ಆಶೀರ್ವಾದ ಹಾಗೂ ಲಕ್ಷಾಂತರ ಕಾರ್ಯಕರ್ತರ ಶ್ರಮವಿದೆ’ ಎಂದರು.
ವರ್ಗಾವಣೆ ಪ್ರಸ್ತಾಪ ತಡೆಗೆ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.