ಕೊಡಗು; ಭಾರೀ ಭೂ ಕುಸಿತದ ಕಾರಣ ಪತ್ತೆ, ಮುನ್ಸೂಚನೆ ಕಡೆಗಣನೆ?
Team Udayavani, Aug 23, 2018, 3:42 PM IST
ಕೊಡಗು/ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಭೂ ವಿಜ್ಞಾನ ಇಲಾಖೆ ನೀಡಿದ್ದ ಮುನ್ಸೂಚನೆಯನ್ನು ಕಡೆಗಣಿಸಿದ್ದರ ಪರಿಣಾಮ ಕೊಡಗಿನಲ್ಲಿ ಮಳೆ, ಪ್ರವಾಹದಿಂದ ಹೆಚ್ಚಿನ ಹಾನಿ ಉಂಟಾಗಲು ಕಾರಣವಾಗಿದೆ ಎಂಬ ಅಂಶ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಕೊಡಗಿನಲ್ಲಿ ವರುಣನ ಆರ್ಭಟವಾಗುವ ಮುನ್ನ ಆಗಸ್ಟ್ 6ರಂದು ಮಧ್ಯಾಹ್ನ ಭೂಕಂಪನ ಸಂಭವಿಸಿದ್ದು, ಇದು ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ಹೊಂದಿತ್ತು. ಅಲ್ಲದೇ ಜುಲೈ 9ರಂದು ಮಧ್ಯಾಹ್ನ 12ಗಂಟೆ 57 ನಿಮಿಷಕ್ಕೆ ಭೂಕಂಪನವಾಗಿತ್ತು. ಈ ಹಿನ್ನೆಲೆಯಲ್ಲಿ ಹವಾಮಾನ ಮತ್ತು ಭೂ ವಿಜ್ಞಾನ ಇಲಾಖೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮುನ್ಸೂಚನೆ ನೀಡಿತ್ತು ಎಂದು ಖಾಸಗಿ ಟಿವಿ ಚಾನೆಲ್ ವರದಿ ತಿಳಿಸಿದೆ.
ಎರಡು ಭೂಕಂಪನಗಳು ಸುಮಾರು 10 ಕಿಲೋ ಮೀಟರ್ ವ್ಯಾಪ್ತಿವರೆಗೆ ಹಬ್ಬಿತ್ತು. ಇದರಿಂದಾಗಿ ಗುಡ್ಡದ ಮಣ್ಣು ಸಡಿಲವಾಗಿ ಭೂ ಕುಸಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ತದನಂತರ ಸುರಿದ ಭಾರೀ ಮಳೆ, ಪ್ರವಾಹಕ್ಕೆ ಗುಡ್ಡ ಕುಸಿತು ಹೆಚ್ಚಿನ ಪ್ರಮಾಣದ ನಷ್ಟ, ಮನೆ ಕುಸಿತಕ್ಕೆ ಕಾರಣವಾಗಿದೆ ಎಂದು ವಿವರಿಸಿರುವ ವರದಿ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಇದ್ದಿದ್ದರೆ ಹಾನಿಯನ್ನು ತಡೆಯಬಹುದಾಗಿತ್ತು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.