ಪಂಚರಾಜ್ಯ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಗೆ ರಾಜ್ಯದಲ್ಲೂ ಸೋಲುವ ಭೀತಿ ಎದುರಾಗಿದೆ : ಕೋಟ
Team Udayavani, May 5, 2022, 2:53 PM IST
ಬೆಂಗಳೂರು : ಪಂಚರಾಜ್ಯ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಕರ್ನಾಟಕದಲ್ಲೂ ಸೋಲುವ ಭೀತಿ ಎದುರಾಗಿದೆ ಹಾಗಾಗಿ ಹತಾಶೆಯಿಂದ ಬಿಜೆಪಿಯವರು ಏನೇ ಅಭಿವೃದ್ಧಿ ಕೆಲಸ ಮಾಡಿದರೂ ಅದಕ್ಕೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ ಕಾಂಗ್ರೆಸ್ ಹತಾಶೆ ಭಾವನೆಗೆ ಒಳಗಾಗಿ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮರೆ ಮಾಚಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಸರ್ಕಾರದ ಹೆಸರು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರಿಗೆ ಕರ್ನಾಕದಲ್ಲಿಯೂ ಸೋಲುವ ಬೀತಿ ಎದುರಾಗಿದೆ. ರಾಜ್ಯ ಎಸ್ಸಿ ಎಸ್ಟಿ ಹಾಗೂ ಹಿಂದುಳಿದ ವರ್ಗದ ಜನರು ಬಿಜೆಪಿ ಬೆಂಬಲಿಸುತ್ತಿದ್ದಾರೆ.
ಪಿಎಸ್ ಐ ಪರೀಕ್ಷಾ ಅಕ್ರಮದ ಬಗ್ಗೆ ಮಾತನಾಡಿದ ಸಚಿವರು ಕಾಂಗ್ರೆಸ್ ಸತ್ಯಕ್ಕೆ ಅಪಚಾರ ಮಾಡುವ ಕೆಲಸ ಮಾಡುತ್ತಿವೆ. ಇದರಲ್ಲಿ ಸರ್ಕಾರದ ಪಾತ್ರ ಯಾವುದೇ ಇಲ್ಲ. ಈಗಾಗಲೇ ಈ ಪ್ರಕರಣದಲ್ಲಿ ಪಾಲುದಾರರಾದವರನ್ನು ಬಂಧಿಸಲಾಗಿದೆ ಅಲ್ಲದೆ ತನಿಖೆ ಕೂಡಾ ನಡೆಯುತ್ತಿದೆ ಸತ್ಯಂಶ ಹೊರಬರಲಿದೆ ಎಂದರು.
ಇದನ್ನೂ ಓದಿ :ಬಿಜೆಪಿಯಲ್ಲಿ ಮರಿ ಪುಡಾರಿಗಳದ್ದೇ ಹಾವಳಿ: ಮಂಜುನಾಥ್ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.