ಓಬವ್ವ ಆತ್ಮರಕ್ಷಣೆ ಕಲೆ 6ನೇ ತರಗತಿಗೂ ವಿಸ್ತರಣೆ: ಕೋಟ ಶ್ರೀನಿವಾಸ ಪೂಜಾರಿ
Team Udayavani, Jun 3, 2022, 6:10 AM IST
ಬೆಂಗಳೂರು: ಓಬವ್ವ ಆತ್ಮರಕ್ಷಣೆ ಕಲೆಯನ್ನು ಆರನೇ ತರಗತಿಯವರೆಗೆ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಗುರುವಾರ ಇಲಾಖೆಯ ಪ್ರಗತಿ ಪರಿಶೀಲನೆ ನಂತರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನ 24000 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ ನೀಡಲಾಗುತ್ತಿತ್ತು. ಪ್ರಸಕ್ತ ಸಾಲಿನಲ್ಲಿ ಪ್ರಿ ಮೆಟ್ರಿಕ್ ವಿದ್ಯಾರ್ಥಿನಿಯರು ಸೇರಿ ಒಟ್ಟು ಅಂದಾಜು 50,000 ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದಾರೆ. ಇದಕ್ಕಾಗಿ ಹೆಚ್ಚುವರಿ 5 ಕೋಟಿ ಖರ್ಚು ಆಗಲಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ 300 ಶಾಲೆಗಳಲ್ಲಿ 100 ವಿದ್ಯಾರ್ಥಿನಿಯರಂತೆ ಒಟ್ಟು 30,000 ವಿದ್ಯಾರ್ಥಿನಿಯರು ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಪಡೆದಿರುತ್ತಾರೆ. ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 520 ವಸತಿ ಶಾಲೆಗಳ 82,000 ವಿದ್ಯಾರ್ಥಿನಿಯರು ತರಬೇತಿಗೆ ಒಳಪಡುತ್ತಾರೆ. ಒಟ್ಟಾರೆ 1,15,000 ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದು, ಅಂದಾಜು 17 ಕೋಟಿ ವೆಚ್ಚವಾಗಲಿದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಇಲಾಖೆಯ ಕಳೆದ ಸಾಲಿನಲ್ಲಿ, ಪ್ರಾಯೋಗಿಕವಾಗಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಯರಿಗೆ ಮಾತ್ರ ತರಭೇತಿ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 630 ಪೋಸ್ಟ್ ಮೆಟ್ರಿಕ್ ಹಾಗೂ 290 ಪ್ರಿಮೆಟ್ರಿಕ್ ವಿದ್ಯಾರ್ಥಿ ನಿಲಯದಲ್ಲಿ 85,000 ವಿದ್ಯಾರ್ಥಿನಿಯರು ತರಬೇತಿಗೆ ಒಳಪಡುತ್ತಾರೆ.
ದೀನದಯಾಳು ಉಪಾಧ್ಯಾಯ ವಸತಿ ಯೋಜನೆಗೆ ವಸತಿ ನಿಲಯ ತೆರೆಯುವುದರ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ. ಹಾಲಿ ವರ್ಷದಲ್ಲಿ ಧಾರವಾಡದಲ್ಲಿ 20 ಕೋಟಿ ರೂ ವೆಚ್ಚದಲ್ಲಿ 5 ಬಿಸಿಎಮ್ ಹಾಸ್ಟೆಲ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರದಿಂದ ಮಂಜತಿ ದೊರೆತಿದ್ದು, ಸದ್ಯದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.
ಅಲೆಮಾರಿ ಮತ್ತು ಅರಲೆವಾರಿ ಜನಾಂಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕಾಗಿ 9 ವಿದ್ಯಾರ್ಥಿ ನಿಲಯಗಳನ್ನು ಇಲಾಖೆಯಿಂದ ಮಂಜೂರು ಮಾಡಲಾಗಿದೆ. ಇದಕ್ಕೆ 30 ಕೋಟಿ ವೆಚ್ಚವಾಗಲಿದೆ. ಕನಕದಾಸರ ಹೆಸರಿನಲ್ಲಿ 50 ಹಾಸ್ಟೆಲ್‌ಗಳನ್ನು 3.5 ಕೋಟಿ ವೆಚ್ಚದಲ್ಲಿ ಈ ಬಾರಿ ಆಯ್ಕೆ ಮಾಡಿದ್ದು, 165 ಕೋಟಿ ವೆಚ್ಚವಾಗಲಿದೆ. ಮೆಟ್ರಿಕ್ ನಂತರದ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಜಮಖಾನ, ಬೆಡ್‌ಶೀಟ್, ಹೊದಿಕೆ, ದಿಂಬುಗಳನ್ನು ಸರಬರಾಜು ಮಾಡಲು 16 ಕೋಟಿ ಬಿಡುಗಡೆ ಮಾಡಲಾಗುವುದು, ಹಾಗೂ ಒಂದು ತಿಂಗಳಲ್ಲಿ ಸರಬರಾಜು ಮಾಡಲಾಗುವುದು ಎಂದು ಹೇಳಿದರು.
ತಿಂಗಳಾಂತ್ಯಕ್ಕೆ ವಿನಯ್ ಸಾಮರಸ್ಯ ಯೋಜನೆ:
ವಿನಯ ಸಾಮರಸ್ಯ ಯೋಜನೆಯನ್ನು ಈ ತಿಂಗಳಲ್ಲಿ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡುತ್ತಾರೆ. ಸಮಾಜ ಹಾಗೂ ಮಠಾಧೀಶರ ಸಹಕಾರ ಪಡೆದು ಪ್ರತಿ ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ಸಹಬಾಳ್ವೆಯ ಜೀವನಕ್ಕೆ ಪೂರಕವಾಗಿ ಜನ ಜಾಗೃತಿ ಮೂಡಿಸಲಾಗುವುದು. ಯಾವುದೇ ಕಾರಣಕ್ಕೂ ಕೂಡ ಪರಿಶಿಷ್ಟ ಜಾತಿಯವರಿಗೆ ಆಸ್ಪೃಶ್ಯತೆ ಆಚರಣೆಗೆ ಅವಕಾಶ ನೀಡದಿರುವುದು ಜಿÇÉಾಡಳಿತದ ಜವಾಬ್ದಾರಿ ಇದೆ. ಯಾದಗಿರಿ ಜಿಲ್ಲೆಯ ಸುರಪುರ ಮಲ್ಲಿಹಾಳ ಗ್ರಾಮದ ದೇವಸ್ಥಾನ ಬಾಗಿಲು ಮುಚ್ಚಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದು ದೇವಸ್ಥಾನದ ಬಾಗಿಲು ತೆರೆಯುವ ಕೆಲಸ ಮಾಡುತ್ತೇವೆ ಎಂದರು.
ಚುನಾವಣೆ ಬಂದಾಗ ಗುಡುಗು, ಸಿಡಿಲು ಸಾಮಾನ್ಯ: ಕೋಟ ಶ್ರೀನಿವಾಸ ಪೂಜಾರಿ ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಚುನಾವಣೆ ಬಂದಾಗ ಗುಡುಗು ಸಿಡಿಲು ಸಾಮಾನ್ಯ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯವಾಡಿದ್ದಾರೆ.
ಹೊಸದಾಗಿ ಅಧಿಕಾರಕ್ಕೆ ಬಂದಾಗ ಸರ್ಕಾರಗಳು ಕೆಲವು ವಿಷಯಗಳನ್ನು ಪಠ್ಯದಲ್ಲಿ ಸೇರಿಸುವುದು ಸಾಮಾನ್ಯ. ಕೆಲವು ಸಾಹಿತಿಗಳು ತಮ್ಮ ಪಠ್ಯವನ್ನು ವಾಪಸ್ ಪಡೆಯುವುದಾಗಿ ಮಾಧ್ಯಮಗಳಿಗೆ ಪತ್ರ ಬಿಡುಗಡೆ ಮಾಡುತ್ತಿದ್ದಾರೆ. ವಾಸ್ತವವಾಗಿ ಅವರ ಪಠ್ಯಗಳೇ ಪುಸ್ತಕದಲ್ಲಿ ಇಲ್ಲ. ನಾರಾಯಣಗುರು, ಭಗತ್ ಸಿಂಗ್ ಅವರ ಪಾಠವನ್ನು ತೆಗೆದು ಹಾಕಲಾಗಿದೆ ಎಂದು ಆರೋಪಿಸಿದರು. ಯಾವುದನ್ನೂ ತೆಗೆದಿಲ್ಲ. ಸಾಹಿತಿಗಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿ ರಾಜಿನಾಮೆ ನೀಡಿದ್ದಾರೆ. ಅದಕ್ಕೆ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.