ಕೋಲಾರದ ಮಾಲೂರಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಅಶ್ವತ್ಥನಾರಾಯಣ

ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಕ್ರಮ

Team Udayavani, May 14, 2021, 6:53 PM IST

Kovaccine Vaccine Preparation Unit in Kolar Mallur: Ashwatthanarayana

ಬೆಂಗಳೂರು :  ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪನೆಯಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ(ಮೇ.14) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜಧಾನಿಗೆ ಹತ್ತಿರದಲ್ಲೇ ಇರುವ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಘಟಕ ಬರುತ್ತಿದೆ. ಅಲ್ಲಿಗೆ ರೈಲು ಸೇರಿದಂತೆ ಉತ್ತಮ ಸಂಪರ್ಕ ವ್ಯವಸ್ಥೆ ಇದೆ. ಅಲ್ಲಿಯೂ ಲಸಿಕೆ ತಯಾರಾಗಲಿದೆ. ಈಗಾಗಲೇ ಸರಕಾರ ಎಲ್ಲ ಒಪ್ಪಿಗೆ ನೀಡಿದೆ. ಆಡಳಿತಾತ್ಮಕ ಕೆಲಸಗಳನ್ನು ಕಂಪನಿ ಪೂರ್ಣ ಮಾಡುತ್ತಿದ್ದು, ಸಿವಿಲ್ ಕಾಮಗಾರಿಗಳು ಶುರುವಾಗಿವೆ. ಅವು ತ್ವರಿತವಾಗಿ ಮುಗಿದು ಆದಷ್ಟು ಬೇಗ ಲಸಿಕೆ ತಯಾರಿಕೆ ಆರಂಭವಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶ: ಚಿತ್ರಕೂಟ್ ಜೈಲಿನೊಳಗೆ ಶೂಟೌಟ್, ಗ್ಯಾಂಗ್ ಸ್ಟರ್ ಕಾಲಾ ಸೇರಿ ಮೂವರ ಸಾವು

ಈಗಾಗಲೇ ಕೋವಿಶೀಲ್ಡ್ ತಯಾರಿಸುವ ಸೀರಂ ಮಾತ್ರವಲ್ಲದೆ, ಯಾವುದೇ ಲಸಿಕೆ ತಯಾರಿಕೆ ಕಂಪನಿ ರಾಜ್ಯಕ್ಕೆ ಬಂದು ಘಟಕ ಸ್ಥಾಪಿಸಲು ಮುಂದಾದರೆ ಅಗತ್ಯವಾದ ಎಲ್ಲ ಸಹಕಾರ ನೀಡಲಾಗುವುದು. ಅತ್ಯಂತ ಕ್ಷಿಪ್ರಗತಿಯಲ್ಲಿ ಎಲ್ಲ ಅನುಮತಿಗಳನ್ನು ನೀಡಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

100 ಹಾಸಿಗೆಗಳ ಆಸ್ಪತ್ರೆ :

ಕೋವಿಡ್ ಎರಡನೇ ಅಲೆ ಹಾಗೂ ಸಂಭನೀಯ ಮೂರನೇ ಅಲೆ ಎದುರಿಸಲು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ವೈದ್ಯಕೀಯ ಮೂಲಸೌಕರ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಕನಿಷ್ಠ 100 ಹಾಸಿಗೆಗಳ ಆಸ್ಪತ್ರೆ ಇರಲೇಬೇಕು. ಅದರಲ್ಲಿ ಆಕ್ಸಿಜನ್ ಹಾಗೂ ಐಸಿಯು ಬೆಡ್ ಗಳೂ ಇರಬೇಕು. ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

40 ಕೋಟಿ ಡೋಸ್ ಉತ್ಪಾದನೆ :

ನೀತಿ ಆಯೋಗ ಈಗಾಗಲೇ ತಿಳಿಸಿರುವಂತೆ ಅಗಸ್ಟ್ ತಿಂಗಳಲ್ಲಿ 40 ಕೋಟಿ ಡೋಸ್ ಲಸಿಕೆ ದೇಶದಲ್ಲಿ ಉತ್ಪಾದನೆ ಆಗಲಿದೆ. ಇದು ಆಶಾದಾಯಕ ಬೆಳವಣಿಗೆ. ಜೂನ್-ಜುಲೈ ತಿಂಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಯಾರಾಗಲಿದೆ. ಇದುವರೆಗೂ ದೇಶದಲ್ಲಿ 19 ಕೋಟಿ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಇನ್ನು, ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಈವರೆಗೆ ಎಲ್ಲ ಮೂಲಗಳಿಂದ ಬಂದಿರುವ ನೆರವಿನ ಪ್ರಮಾಣವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಕೇಂದ್ರವು ಲಸಿಕೆ ತಯಾರಿಕೆ ಕಂಪನಿಗಳಿಗೆ ಸಾಕಷ್ಟು ಉತ್ತೇಜನ ಕೊಡುತ್ತಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಗಳ ಮೇಲಿರುವ ಪೇಟೆಂಗ್ ವಿನಾಯಿತಿ ಬಗ್ಗೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ದೇಶಗಳ ನಾಯಕರ ಜತೆ ಈಗಾಗಲೇ ಯಶಸ್ವಿ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಇನ್ನಷ್ಟು ಲಸಿಕೆ ತಯಾರಿಕೆ ಘಟಕಗಳು ರಾಜ್ಯಕ್ಕೆ ಬರಲಿವೆ ಎಂದು ತಿಳಿಸಿದರು.

ಸಿ ಎಸ್ ಆರ್ ನೆರವು:

ಕಾರ್ಪೋರೇಟ್ ವಲಯದಿಂದ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಸಿಎಸ್ಆರ್ ನೆರವು ಬರುತ್ತಿದೆ. ಹಣದ ರೂಪದಲ್ಲಿ ಹಾಗೂ ಸಾಮಗ್ರಿ ರೂಪದಲ್ಲಿ ನೆರವು ಹರಿದುಬರುತ್ತಿದೆ. ಜತೆಗೆ, ಮುಖ್ಯಮಂತ್ರಿ ಪರಿಹಾರ ನಿಧಿಗೂ ಹಣ ಸಂದಾಯವಾಗುತ್ತಿದೆ. ಕೇಂದ್ರ ಸರಕಾರದಿಂದಲೂ ಸಾಕಷ್ಟು ನೆರವು ಸಿಗುತ್ತಿದೆ. ಈಗಾಗಲೇ ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ ಎಂದ ಅವರು, ಅಂತಾರಾಷ್ಟ್ರೀಯ ಮಟ್ಟದಿಂದಲೂ ರಾಜ್ಯಕ್ಕೆ ಸಾಕಷ್ಟು ನೆರವು ಬಂದಿದೆ. ಈ ವಿಭಾಗದಲ್ಲಿ ಹಿರಿಯ ಅಧಿಕಾರಿಗಳಾದ ಸೆಲ್ವಕುಮಾರ್ ಹಾಗೂ ಸಿಎಸ್ಆರ್ ಉಸ್ತುವಾರಿ ಅಧಿಕಾರಿ ಉಮಾ ಮಹಾದೇವನ್ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಅಫ್ಘಾನಿಸ್ತಾನ್: ಕಾಬೂಲ್ ಮಸೀದಿಯೊಳಗೆ ಬಾಂಬ್ ಸ್ಫೋಟ, ಇಮಾಮ್ ಸೇರಿ 12 ಮಂದಿ ಸಾವು

ಟಾಪ್ ನ್ಯೂಸ್

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.