ಒಕ್ಕೂಟ ವ್ಯವಸ್ಥೆ ನಾಶ ಮಾಡಲು ಬಿಜೆಪಿ ಹೊರಟಿದೆ: ಡಿ.ಕೆ. ಶಿವಕುಮಾರ್
Team Udayavani, Jun 24, 2020, 6:15 AM IST
ಬೆಂಗಳೂರು: ರಾಜ್ಯ ಸರಕಾರಗಳ ವ್ಯಾಪ್ತಿಯಲ್ಲಿರುವ ಕಾಯ್ದೆಗಳ ಬದಲಾವಣೆಗೆ ಕೇಂದ್ರ ಸರಕಾರ ಮಾರ್ಗಸೂಚಿ ರವಾನಿಸಿದ್ದು, ಇದು ಒಕ್ಕೂಟ ವ್ಯವಸ್ಥೆ ನಾಶ ಮಾಡುವ ಹುನ್ನಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಜು. 2ರಂದು ರಾಜ್ಯಾದ್ಯಂತ ನಡೆಯಲಿರುವ ಪ್ರತಿಜ್ಞಾ ದಿನ ಕಾರ್ಯಕ್ರಮ ಪೂರ್ವ ತಯಾರಿ ಕುರಿತ ಸಮಾಲೋಚನ ಸಭೆಯಲ್ಲಿ ಮಂಗಳವಾರ ಮಾತನಾಡಿದರು.
ಪಕ್ಷವನ್ನು ಬೂತ್ ಮಟ್ಟದಲ್ಲಿ ಕಟ್ಟುವ ಸಂಕಲ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಉಳುವವನೇ ಭೂಮಿಯ ಒಡೆಯ ಕಾನೂನು ತಂದು ಜನರಿಗೆ ಕೃಷಿ ಮಾಡಲು ಭೂಮಿ ನೀಡಿದೆ. ಅದರೆ ಈಗಿನ ಸರಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಸಣ್ಣ ರೈತರಿಗೆ ಮರಣ ಶಾಸನ ಬರೆಯುತ್ತಿದೆ. ಅದೇ ರೀತಿ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ. ಅವೈಜ್ಞಾನಿಕವಾಗಿ ಇಂಧನ ಬೆಲೆ ಏರಿಕೆಯಾಗುತ್ತಿದೆ ಇದರ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು.
ಕಾರ್ಯಕರ್ತರಿಗೆ ಧ್ವನಿಯಾಗಲು ಪ್ರತಿಜ್ಞಾ
ಪ್ರತಿಜ್ಞಾ ಕಾರ್ಯಕ್ರಮ ನನ್ನನ್ನಾಗಲಿ, ಕಾರ್ಯಾಧ್ಯಕ್ಷರನ್ನಾಗಲಿ ಅಥವಾ ಇತರ ನಾಯಕರನ್ನು ಬಿಂಬಿಸಿಕೊಳ್ಳಲು ಮಾಡುತ್ತಿಲ್ಲ. ಈ ಕಾರ್ಯಕ್ರಮವನ್ನು ನಮ್ಮನ್ನು ಈ ಮಟ್ಟಕ್ಕೆ ಬೆಳೆಸಿದ ಕಾರ್ಯಕರ್ತರ ಧ್ವನಿಯಾಗಲು ನಡೆಸಲಾಗುತ್ತದೆ. ಕಾರ್ಯಕರ್ತರು ಶಕ್ತಿಶಾಲಿಯಾದರೆ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿ ಬೆಳೆಯಲು ಸಾಧ್ಯ ಎಂಬುದು ನನ್ನ ನಂಬಿಕೆ ಎಂದರು. ಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನೂಕುನುಗ್ಗಲು ಉಂಟಾಗಿದ್ದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.