ಹಿರಿಯ ನಾಯಕ ಎಂ.ವಿ ರಾಜಶೇಖರನ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಂತಾಪ
Team Udayavani, Apr 13, 2020, 10:18 AM IST
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವಿ ರಾಜಶೇಖರನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಎಂ.ವಿ. ರಾಜಶೇಖರನ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ನಾಯಕರಲ್ಲಿ ಒಬ್ಬರು. ಪಕ್ಷಕ್ಕೆ ಅವರ ಕೊಡುಗೆ ಅಪಾರ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಹಾಗೂ ರಾಜ್ಯ ಸಭೆಯ ಸದಸ್ಯರಾಗಿದ್ದ ಅವರ ಪಕ್ಷನಿಷ್ಠೆ ಆದರ್ಶನೀಯ.
ಅವರು ಪಕ್ಷದ ಶಿಸ್ತಿನ ಸಿಪಾಯಿ. ಜೀವನದಲ್ಲೂ ಬಹಳ ಶಿಸ್ತು ಬದ್ಧರಾಗಿದ್ದರು. ಪ್ರತಿಯೊಬ್ಬರ ಜತೆಗೂ ಸ್ನೇಹದಿಂದ ಬೆರೆಯುತ್ತಿದ್ದರು. ಅಜಾತಶತ್ರುವಾಗಿ ಬದುಕಿದವರು ಎಂದು ಡಿ ಕೆ ಶಿವಕುಮಾರ್ ಸ್ಮರಿಸಿದ್ದಾರೆ.
ಅವರ ಬದುಕು ನಮಗೆ ಆದರ್ಶ. ಅವರು ಮಾರ್ಗದರ್ಶಕರಾಗಿ ನಮ್ಮನ್ನು ಮುನ್ನಡೆಸಿದ್ದರು. ಇಂದು ಅವರನ್ನು ಕಳೆದುಕೊಂಡಿದ್ದೇವೆ. ಇದು ನಮಗೆ ತುಂಬಲಾರದ ನಷ್ಟ. ಕೆಲ ದಿನಗಳ ಹಿಂದಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೆ. ಅವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸುದ್ದಿ ಕೇಳಿ ಮನಸಿಗೆ ಬಹಳ ಬೇಸರವಾಗಿದೆ. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬೆಂಬಲಿಗರಿಗೆ ಆ ಭಗವಂತ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.