KPSC ವಿರೋಧಕ್ಕೆ ಸೊಪ್ಪು ಹಾಕಲಿಲ್ಲ: ನಾಡಿದ್ದೇ ಪರೀಕ್ಷೆ ನಡೆಸಲು ನಿರ್ಧಾರ
Team Udayavani, Aug 25, 2024, 12:59 AM IST
ಬೆಂಗಳೂರು: ಅಭ್ಯರ್ಥಿಗಳು ಹಾಗೂ ಸಾರ್ವಜನಿಕ ವಿರೋಧದ ನಡುವೆ ಮಂಗಳವಾರವೇ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ನಿರ್ಧರಿಸಿದ್ದು ಅಭ್ಯರ್ಥಿಗಳು ಹೋರಾಟದ ಹಾದಿ ಹಿಡಿದಿದ್ದಾರೆ.
ಪ್ರಮುಖವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಮಾಡಿರುವ ಅಭ್ಯರ್ಥಿಗಳು, ಮುಂದಿನ ರವಿವಾರ ಪರೀಕ್ಷೆ ನಿಗದಿಪಡಿಸಲು ಕೋರಿದರೂ ವ್ಯವಸ್ಥೆ ಮಾಡುತ್ತಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಕುಳಿತಿದ್ದಾರೆ.
ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ಮುಖಂಡರೂ ಪರೀಕ್ಷೆ ಮುಂದೂಡುವಂತೆ ಕೆಪಿಎಸ್‌ಸಿ ಹಾಗೂ ಸರಕಾರಕ್ಕೆ ಮನವಿ ಮಾಡಿದ್ದಾರೆ. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಸರಕಾರ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಕಡ್ಡಿ ತುಂಡಾದಂತೆ ಹೇಳಿದೆ. ನಿಗದಿಯಂತೆ ಆ. 27ರಂದು ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ಕೂಡ ಸ್ಪಷ್ಟಪಡಿಸಿದೆ.
ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.