R.Ashok: 5 ವರ್ಷ ಕೃಷ್ಣೇಬೈರೇಗೌಡರು ಕೃಷಿ ಸಚಿವರಾಗಿದ್ದಿದ್ದು ದೌರ್ಭಾಗ್ಯ
ರೈತರನ್ನು ಹೀಯಾಳಿಸಿದ ಸಚಿವ: ವಿಪಕ್ಷ ನಾಯಕ ಕಿಡಿ
Team Udayavani, Oct 16, 2024, 6:45 AM IST
ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಬೈರೇಗೌಡರು 5 ವರ್ಷಗಳ ಕಾಲ ಕೃಷಿ ಸಚಿವರಾಗಿದ್ದಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿಗೆ ತಿರುಗೇಟು ನೀಡಿರುವ ಅಶೋಕ್, ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು “ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಬೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.
ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ, ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್ಯಾರಾದರೂ ಪ್ರತಿನಿಧಿ ಸಚಿವರು ಬಂದಿರುತ್ತಾರೆ ಅಲ್ಲವೇ? ಇಂತಹ ವೇದಿಕೆಯಲ್ಲಿ ಅನೌಪಚಾರಿಕವಾಗಿ ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಿ ಒಂದು ಒಮ್ಮತ ಸೃಷ್ಟಿಸುವ ಪ್ರಯತ್ನ ಮಾಡಬಹುದಿತ್ತಲ್ಲವೇ? ನನ್ನ ಮಾತಿನ ಅರ್ಥ ಇದಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.