ಕೃಷ್ಣ ರಾಜಕೀಯ ನೇಪಥ್ಯಕ್ಕೆ
Team Udayavani, Jan 29, 2017, 3:45 AM IST
ಬೆಂಗಳೂರು: ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯ ಮಂತ್ರಿ ಎಸ್.ಎಂ. ಕೃಷ್ಣ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳುತ್ತಾರೆ ಎಂಬ ಮಾತು ಶನಿವಾರ ರಾಜಕೀಯ ವಲಯದಲ್ಲಿ ಕೇಳಿಬಂದಿದ್ದು ಭಾರೀ ಸಂಚಲನ ಮೂಡಿಸಿದೆ.
ತನಗೆ ರಾಜಕೀಯ ಬದುಕು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿ, ಆ ಮೂಲಕ ತಮ್ಮ 5 ದಶಕ
ಗಳಿಗೂ ಹೆಚ್ಚಿನ ಅವಧಿಯ ರಾಜಕಾರಣ ದಿಂದ ನಿವೃತ್ತಿ ಹೊಂದಲಿದ್ದಾರೆ. ಪಕ್ಷ ತಮ್ಮನ್ನು ನಿರ್ಲಕ್ಷಿಸಿರುವುದಕ್ಕೆ ಬೇಸರಗೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ರವಿವಾರ ಅವರು ಪತ್ರಿಕಾಗೋಷ್ಠಿ ಕರೆದಿದ್ದು, ರಾಜಕೀಯ ನಿವೃತ್ತಿ ಬಗ್ಗೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಈ ಮಧ್ಯೆ, ಕೃಷ್ಣ ಅವರ ನಿವೃತ್ತಿ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಾ| ಪರಧಿಮೇಶ್ವರ್, ಸಚಿವರಾದ ಡಿ.ಕೆ. ಶಿವಕುಮಾರ್, ದೇಶಪಾಂಡೆ, ಎಂ.ಬಿ.ಪಾಟೀಲ್ ಮತ್ತಿತರರು ಸದಾಶಿವನಗರದ ಅವರ ಮನೆಗೆ ಭೇಟಿ ನೀಡಿ, ಮನವೊಲಿಸುವ ಯತ್ನ ನಡೆಸಿದರು.
ರಾಜಕೀಯ ನಿವೃತ್ತಿ ಹಾಗೂ ಪಕ್ಷ ಬಿಡುವ ಕುರಿತು ಕೃಷ್ಣ ಅವರು ಈಗಾಗಲೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಫೆ. 6ರಂದು ದಿಲ್ಲಿಗೆ ತೆರಳಲಿರುವ ಅವರು, ಅಲ್ಲಿ ಸೋನಿಯಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾಧ್ಯವಾದರೆ ಅಂದೇ ಅವರು ಪ್ರಧಾನಿ ಮೋದಿಯವರನ್ನೂ ಭೇಟಿ ಮಾಡುವ ಕಾರ್ಯಕ್ರಮ ಇದ್ದು, ಈ ಬೆಳವಣಿಗೆ ತೀವ್ರ ಕುತೂಹಲ ಕೆರಳಿಸಿದೆ.
ಕಾಂಗ್ರೆಸ್‌ನಲ್ಲಿ ನಿರ್ಲಕ್ಷ : ಕಾಂಗ್ರೆಸ್‌ನಲ್ಲಿ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಕೃಷ್ಣ ಅವರನ್ನು ಎಐಸಿಸಿ ಮತ್ತು ಕೆಪಿಸಿಸಿ ಎರಡೂ ಇತ್ತೀಚಿನ ವರ್ಷಧಿಗಳಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದವು. ಕನಿಷ್ಟಪಕ್ಷ ರಾಜ್ಯಸಭೆಗೆ ಆಯ್ಕೆ ಮಾಡಲು ಒಲವು ತೋರದಿರುವುದು ಅವರ ಅಸಮಾಧಾನಕ್ಕೆ ಕಾರಣ ವಾಗಿತ್ತು. ಅಷ್ಟೇ ಅಲ್ಲ, ಅನುಭವಿ ರಾಜಕಾರಣಿಯಾಗಿ ತಾವು ಮಾಡುತ್ತಿದ್ದ ಶಿಫಾರಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಪರಿಗಣಿಸದೇ ಇರುವುದು ಅವರ ಮುನಿಸಿಗೆ ಕಾರಣವಾಗಿತ್ತು ಎನ್ನಲಾಗಿದೆ.
ಇನ್ನು ಸಾಕು ರಾಜಕಾರಣ
ಸುದೀರ್ಘ ರಾಜಕಾರಣದಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸಿ, ಈಗ 84ರ ಇಳಿ ವಯಸ್ಸಿನಲ್ಲಿ ರಾಜಕೀಯದಿಂದ ದೂರ ಉಳಿದು, ನೆಮ್ಮದಿಯ ಜೀವನ ನಡೆಸಲು ಎಸ್.ಎಂ.ಕೃಷ್ಣ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಅರವತ್ತರ ದಶಕದಿಂದಲೂ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡು ಬಂದಿರುವ ಕೃಷ್ಣ, ಶಾಸಕರಾಗಿ, ಸಂಸದರಾಗಿ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 1968ರಿಂದ ನಾಲ್ಕು ಬಾರಿ ಮಂಡ್ಯದಿಂದ ಸಂಸದರಾಗಿ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ರಾಜ್ಯ ರಾಜಕಾರಣಕ್ಕೆ ಮರಳಿದ್ದ ಅವರು, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡರು. 1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ಸನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾದರು. 1999ರಿಂದ 2004ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ನಾಟಕ ನಂಬರ್ ಒನ್ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಅವರು ವೈಯಕ್ತಿಕ ಸೋಲು ಕಾಣುವಂತಾಯಿತು.
ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದ್ದರಿಂದ ಕೇಂದ್ರದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ, ಕೃಷ್ಣ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಿತು. ನಂತರ ರಾಜ್ಯಸಭಾ ಸದಸ್ಯರನ್ನಾಗಿ
ಮಾಡಿ, ಯುಪಿಎ-2ರಲ್ಲಿ ಕೇಂದ್ರ ಸಂಪುಟ ಸೇರಿಸಿಕೊಂಡು ಮಹತ್ವದ ವಿದೇಶಾಂಗ ಖಾತೆ ನೀಡಿತ್ತು.
2012ರಲ್ಲಿ ವಿದೇಶಾಂಗ ಸಚಿವ ಸ್ಥಾನದಿಂದ ನಿರ್ಗಮಿಸಿದ ಬಳಿಕ ಸಕ್ರಿಯ ರಾಜಕಾರಣದಿಂದ ಬಹುತೇಕ ದೂರ ಉಳಿದಿದ್ದ ಕೃಷ್ಣ, 2013ರ ವಿಧಾನಸಭಾ ಚುನಾವಣೆ ಹಾಗೂ 2014ರ ಲೋಕಸಭಾ ಚುನಾವಣೆ ವೇಳೆ ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ, ರಾಜಕೀಯದಲ್ಲಿ ತಮ್ಮ ಅಸ್ತಿತ್ವ ತೋರಿಸುವ ಪ್ರಯತ್ನ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.