ಸಚಿವ ಈಶ್ವರಪ್ಪ ನಿರ್ಗಮನದಲ್ಲೂ ಬೆಳಗಾವಿ ಸದ್ದು !

Team Udayavani, Apr 15, 2022, 7:50 AM IST

ಸಚಿವ ಈಶ್ವರಪ್ಪ ನಿರ್ಗಮನದಲ್ಲೂ ಬೆಳಗಾವಿ ಸದ್ದು !

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ರಾಜಕೀಯ ಕ್ಷೇತ್ರದಲ್ಲಿ ಮತ್ತೆ ಎಲ್ಲರೂ ತಿರುಗಿ ನೋಡುವಂತಹ ಸುದ್ದಿ ಮಾಡಿದೆ. ಜಿಲ್ಲೆಯ ಜಿದ್ದಾಜಿದ್ದಿನ ರಾಜಕಾರಣ ಬಿಜೆಪಿ ಸರಕಾರದ ಇಬ್ಬರು ಪ್ರಭಾವಿ ರಾಜಕಾರಣಿಗಳ  ತಲೆದಂಡವಾಗುವಂತೆ ಮಾಡಿರುವುದೇ ಇದಕ್ಕೆ ಸಾಕ್ಷಿ. ಈ ಎರಡೂ ತಲೆದಂಡದಲ್ಲಿ ಕಾಂಗ್ರೆಸ್‌ನ  ಒಗ್ಗಟ್ಟಿನ ಹೋರಾಟಕ್ಕಿಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒಂದು ರೀತಿಯ ಶಪಥ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ  ಗಂಭೀರ ಆರೋಪ ಹೊತ್ತ ರಮೇಶ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ಈಗ ಸಿಎಂ  ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ ಹಾಗೂ ಸಂತೋಷ್‌ ಪಾಟೀಲ್‌  ಆತ್ಮಹತ್ಯೆ ಪ್ರಕರಣದಲ್ಲಿ  ಸಚಿವ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ಪ್ರಕಟಿಸಿದ್ದಾರೆ. ಈ ಇಬ್ಬರೂ ಪ್ರಭಾವಿಗಳ ರಾಜೀನಾಮೆಗೆ ಬೆಳಗಾವಿಯ ರಾಜಕಾರಣವೇ ಕಾರಣ ಎಂಬುದು  ಸತ್ಯ.  ಎರಡೂ ಪ್ರಕರಣಗಳಲ್ಲಿ ರಾಜಕೀಯ ಪ್ರತಿಷ್ಠೆಯೇ ಪರಿಣಾಮ ಬೀರಿದೆ.

ಈಶ್ವರಪ್ಪ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಎಲ್ಲಿಯೂ ಬೆಳಗಾವಿ ಜಿಲ್ಲೆಯ ರಾಜಕಾರಣದ ಪ್ರಸ್ತಾವ ಮಾಡಿಲ್ಲ. ಆದರೆ ಗುರುವಾರ ಒಮ್ಮೆಲೇ ಅಖಾಡಕ್ಕೆ ಇಳಿದಿರುವ ರಮೇಶ ಜಾರಕಿಹೊಳಿ ಈ ಪ್ರಕರಣದ ಹಿಂದೆ  “ಮಹಾನ್‌ ನಾಯಕ’ರ ತಂಡದ ಕೈವಾಡವಿದೆ ಎನ್ನುವ ಮೂಲಕ ಶಿವಕುಮಾರ್‌ ಹಾಗೂ ಹೆಬ್ಟಾಳ್ಕರ್‌ ಕಡೆ ಬೊಟ್ಟು ಮಾಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯ ರಾಜಕಾರಣ ಎಂದಾಕ್ಷಣ ಎಲ್ಲರ ಗಮನ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ ಕಡೆ ತಿರುಗುತ್ತದೆ. ಇಬ್ಬರದೂ ಜಿದ್ದಾಜಿದ್ದಿನ ಸೆಣಸಾಟ. ಇದು ರಾಜ್ಯಮಟ್ಟದಲ್ಲಿ ಅಷ್ಟೇ ಅಲ್ಲ, ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗುತ್ತಿದೆ.

ರಮೇಶ ಜಾರಕಿಹೊಳಿ ನೇರವಾಗಿ ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ. ತಮ್ಮ ಸಿ.ಡಿ. ಮಾಡಿದ  “ಮಹಾನ್‌ ನಾಯಕ’ರ ತಂಡವೇ ಈ ಪ್ರಕರಣದಲ್ಲೂ ಕೆಲಸ ಮಾಡಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ನ ಪ್ರಭಾವಿ ನಾಯಕ  ಹಾಗೂ ತಮ್ಮ ಬದ್ಧ ವೈರಿಯ ಮೇಲೆ ಆರೋಪ ಮಾಡಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರಕಾರ  ಪತನಕ್ಕೆ ಕಾರಣವಾದ ರಮೇಶ ಜಾರಕಿಹೊಳಿ ತಮ್ಮ ಮುಂದಾಳತ್ವದಲ್ಲಿ ಬಿಜೆಪಿ ಸರಕಾರ ರಚಿಸಲು ಪ್ರಮುಖ ಕಾರಣರಾದರು. ರಮೇಶ್‌ ನೇತೃತ್ವದ ಶಾಸಕರ ಬಲದಿಂದಯಡಿಯೂರಪ್ಪ ಮುಖ್ಯಮಂತ್ರಿಯಾದರು. ಅಷ್ಟೇ ಅಲ್ಲ ಮೊದಲೇ ಮಾತು ಕೊಟ್ಟಂತೆ ಜಾರಕಿಹೊಳಿ ಅವರಿಗೆ ನೀರಾವರಿ ಖಾತೆಯೂ ಸಿಕ್ಕಿತು. ನೀರಾವರಿ ಸಚಿವರಾಗಿದ್ದೇ ತಡ ಜಿಲ್ಲೆಯ ರಾಜಕಾರಣದಲ್ಲಿ ವಿಚಿತ್ರ ತಿರುವುಗಳು ಕಂಡುಬಂದವು. ಸೇಡಿನ ರಾಜಕಾರಣ ಹೆಚ್ಚು ಮಹತ್ವ ಪಡೆದುಕೊಂಡಿತು. ಜಿದ್ದಾಜಿದ್ದಿನ ರಾಜಕಾರಣ ಸರಕಾರದ ಜತೆಗೆ ರಮೇಶ ಜಾರಕಿಹೊಳಿ ಅವರಿಗೂ ಮುಳುವಾಯಿತು. ರಹಸ್ಯ ಕಾರ್ಯಾಚರಣೆಯ ತಂತ್ರ  ಜಾರಕಿಹೊಳಿ  ಸಚಿವ ಸ್ಥಾನವನ್ನೇ ಕಸಿದುಕೊಂಡಿತು.

ಗಂಭೀರವಾಗಿ ಪರಿಗಣಿಸಿರಲಿಲ್ಲ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರಕಾರ ಇದ್ದಾಗ ಒಂದು ಸಣ್ಣ ಪಿಎಲ್‌ಡಿ ಬ್ಯಾಂಕ್‌ ರಾಜಕಾರಣ ಸರಕಾರದ ಬುಡಕ್ಕೆ ಬೆಂಕಿ ಹಚ್ಚಿತ್ತು.  ಆಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌  ನೇರ ಹಸ್ತಕ್ಷೇಪದಿಂದ ಮುನಿಸಿಕೊಂಡಿದ್ದ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ ಮೈತ್ರಿ ಸರಕಾರ ಉರುಳಿಸುವ ಪ್ರತಿಜ್ಞೆ ಮಾಡಿದ್ದರು. ಆಗ ಯಾರೂ ಅದನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಆದರೆ ರಮೇಶ ಜಾರಕಿಹೊಳಿ ಸುಮ್ಮನಿರದೆ  ಕಾಂಗ್ರೆಸ್‌ ಶಾಸಕರನ್ನು ತಮ್ಮ ಕಡೆ ಸೆಳೆಯುವಲ್ಲಿ ಯಶಸ್ವಿಯಾದರು. ಒಂದು ತಿಂಗಳಿಗೂ ಹೆಚ್ಚು ಕಾಲ ರಾಜ್ಯದ ಹೊರಗಡೆ ಇದ್ದು ಮೈತ್ರಿ ಸರಕಾರ ಕೆಡವಿದರು. ಇದೆಲ್ಲಈಗ ಇತಿಹಾಸ. ಆದರೆ ಆಗ ಸರಕಾರ ಉರುಳಿಸಿದ ಕುಖ್ಯಾತಿ ಗಡಿ ಜಿಲ್ಲೆ ಬೆಳಗಾವಿಗೆ ಅಂಟಿಕೊಂಡಿತು.

-ಕೇಶವ ಅದಿ

ಟಾಪ್ ನ್ಯೂಸ್

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.