ಕೆಎಸ್‌ಒಯು ಪರೀಕ್ಷಾ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
Team Udayavani, Jun 11, 2019, 3:00 AM IST
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬಿ.ಎ, ಬಿ.ಕಾಂ, ಬಿಎಲ್‌ಐಎಸ್ಸಿ, ಎಂ.ಎ, ಎಂ.ಕಾಂ, ಎಂಎಲ್‌ಐಎಸ್ಸಿ ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಅಧಿಸೂಚನೆ ಹೊರಡಿಸಿದ್ದು, ಪರೀಕ್ಷಾ ಶುಲ್ಕ ಪಾವತಿಸಲು ಜೂ.18ರವರೆಗೂ ಅವಕಾಶ ನೀಡಲಾಗಿದೆ.
2011-12, 2012-13ನೇ ಸಾಲಿನಲ್ಲಿ ಬಿ.ಎ, ಬಿ.ಕಾಂ, ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ಪಡೆದು ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಕೇಂದ್ರ ಕಚೇರಿಗೆ ಸಲ್ಲಿಸಲು ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ ಪಾವತಿಸಲು ಜೂ. 18ರ ವರೆಗೂ ಅವಕಾಶ ನೀಡಲಾಗಿದೆ. ದಂಡಶುಲ್ಕ 200 ರೂ. ಪಾವತಿಸಿ ಜೂನ್ 29ರವರೆಗೂ ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ. ಮಾಹಿತಿಗಾಗಿ ದೂ : 080 23448811 ಅಥವಾ ಮೊ: 9844506629 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.