ಶೀಘ್ರದಲ್ಲೇ ಓಡಲಿವೆ KSRTC ಲಾರಿಗಳು

2 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಲಾಜಿಸ್ಟಿಕ್ಸ್‌ಗೆ ಲಗ್ಗೆ ಸಂಭವ 20 ಲಾರಿ ಖರೀದಿಗೆ

Team Udayavani, Aug 16, 2023, 11:47 PM IST

KSRTC

ಬೆಂಗಳೂರು: ಪ್ರಯಾಣಿಕರನ್ನು ಕರೆದೊಯ್ಯುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಸರಕು ಸಾಗಣೆಗಾಗಿಯೇ ಪ್ರತ್ಯೇಕ ವಾಹನಗಳನ್ನು ರಸ್ತೆಗಿಳಿಸಲು ಮುಂದಾಗಿದೆ. ಈ ಮೂಲಕ ಲಾಜಿಸ್ಟಿಕ್ಸ್‌ ಸೇವೆಗೆ ಪೂರ್ಣಪ್ರಮಾಣದಲ್ಲಿ ಲಗ್ಗೆ ಇಡಲಿದೆ.

ಸದ್ಯ ಕೆಎಸ್‌ಆರ್‌ಟಿಸಿಯು ಪ್ರಯಾಣಿಕರನ್ನು ಸಾಗಿಸುವ ಬಸ್‌ಗಳಲ್ಲೇ ಪಾರ್ಸೆಲ್‌ ಸೇವೆಗಳನ್ನು ಒದಗಿಸುತ್ತಿದೆ. ಅದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸರಕು ಸಾಗಣೆ ಉದ್ದೇಶಕ್ಕಾಗಿಯೇ ಮೊದಲ ಹಂತದಲ್ಲಿ ಅಂದಾಜು ಹತ್ತು ಲಾರಿಗಳನ್ನು ರಸ್ತೆಗಿಳಿಸಲು ಮುಂದಾಗಿದೆ.
ಒಟ್ಟು 20 ಲಾರಿಗಳ ಖರೀದಿಗೆ ಟೆಂಡರ್‌ ಕರೆಯಲಾಗಿದ್ದು, ಅತ್ಯಂತ ಕಡಿಮೆ ಮೊತ್ತದಲ್ಲಿ ಲಾರಿಗಳನ್ನು ಪೂರೈಸುವ ತಯಾರಿಕಾ ಕಂಪೆನಿಗೆ ಟೆಂಡರ್‌ ನೀಡಲಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ ಎರಡು ತಿಂಗಳಲ್ಲಿ ಕೆಎಸ್‌ಆರ್‌ಟಿಸಿ ಸರಕು ಸಾಗಣೆ ಲಾರಿಗಳು ಕಾರ್ಯಾಚರಣೆ ಆರಂಭಿಸಲಿವೆ. ಇದು ಆರ್ಥಿಕ ಸಂಕಷ್ಟದಲ್ಲಿರುವ ನಿಗಮವನ್ನು ಲಾಭದ ಹಳಿಗೆ ತರುವ ಭಾಗವೇ ಆಗಿದೆ ಎಂದು ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಪ್ರಸ್ತುತ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪರಿಚಯಿಸಿರುವ ಪಾರ್ಸೆಲ್‌ ವ್ಯವಸ್ಥೆಯಲ್ಲಿ ಕನಿಷ್ಠ 100 ಕೆಜಿಯಿಂದ ಗರಿಷ್ಠ 500 ಕೆಜಿವರೆಗೆ ವಿವಿಧ ಪ್ರಕಾರದ ವಸ್ತಗಳನ್ನು ಸಾಗಿಸಲು ಅವಕಾಶ ಇದೆ. ಪ್ರಯಾಣಿಕರೊಂದಿಗೆ ಕೊಂಡೊಯ್ಯುವುದರಿಂದ ಸಹಜವಾಗಿ ಬಸ್‌ಗಳಲ್ಲಿ ವಸ್ತುಗಳು ಮತ್ತು ಗಾತ್ರಗಳಿಗೆ ನಿರ್ಬಂಧಗಳಿವೆ. ವಿವಿಧ ವಿಭಾಗಗಳಿಗೆ ಬಂದುಬೀಳುವ ಪಾರ್ಸೆಲ್‌ಗ‌ಳನ್ನು ನಾನಾ ಮಾರ್ಗಗಳಿಗೆ ತೆರಳುವ ಬಸ್‌ಗಳಲ್ಲಿಟ್ಟು ಕಳುಹಿಸಲಾಗುತ್ತದೆ. ಅವುಗಳನ್ನು ಡಿಪೋ ಅಥವಾ ನಿಲ್ದಾಣಗಳಲ್ಲಿ ತಲುಪಿಸುವ ವ್ಯವಸ್ಥೆ ಇದೆ. ಅಲ್ಲಿ ಸಂಬಂಧಪಟ್ಟವರು ಬಂದು ತೆಗೆದುಕೊಂಡು ಹೋಗುತ್ತಾರೆ. ಇದರಿಂದ ನಿತ್ಯ ನಿಗಮಕ್ಕೆ ಸರಾಸರಿ 4 ಲಕ್ಷ ರೂ. ಆದಾಯ ಬರುತ್ತಿದೆ.

5-6 ಟನ್‌ ಸಾಗಣೆ ಸಾಮರ್ಥ್ಯ
ಇದರ ಮುಂದುವರಿದ ಭಾಗವಾಗಿ ಲಾರಿಗಳನ್ನು ರಸ್ತೆಗಿಳಿಸಲಾಗುತ್ತಿದೆ. ಇಲ್ಲಿ 5-6 ಟನ್‌ವರೆಗೆ ಒಮ್ಮೆಲೇ ಸಾಗಿಸಬಹುದು. ಎಲ್ಲೆಲ್ಲಿ ಬೇಡಿಕೆ ಇದೆ ಎಂಬುದರ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದಕ್ಕೆ ವಿಪುಲ ಅವಕಾಶಗಳಿದ್ದು, ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅಗತ್ಯಬಿದ್ದರೆ ನೆರೆರಾಜ್ಯಗಳಿಗೂ ಪರಿಚಯಿಸುವ ಚಿಂತನೆ ಇದೆ. ಕೆಎಸ್‌ಆರ್‌ಟಿಸಿ ಚಾಲಕರನ್ನೇ ಲಾರಿಗಳಿಗೂ ನಿಯೋಜಿಸಲಾಗುತ್ತದೆ. ಇದಕ್ಕಾಗಿ ಹೊಸದಾಗಿ ನೇಮಕಾತಿ ಮಾಡಿಕೊಳ್ಳುವ ಅಗತ್ಯ ಇರದು ಎಂದು ಹೆಸರು ಹೇಳಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೋಂ ಡೆಲಿವರಿಗೂ ಚಿಂತನೆ
ಸರಕು ಸಾಗಣೆ ಜತೆಗೆ ಗ್ರಾಹಕರ ಮನೆಬಾಗಿಲಿಗೇ ವಸ್ತುಗಳನ್ನು ತಲುಪಿಸುವ ನಿಟ್ಟಿನಲ್ಲೂ ಕೆಎಸ್‌ಆರ್‌ಟಿಸಿ ಚಿಂತಿಸಿದೆ. ನಿಗಮದ ನಿಲ್ದಾಣಗಳಿಗೆ ಬಂದಿಳಿಯುವ ವಸ್ತುಗಳನ್ನು ಸ್ಥಳೀಯ ಸಿಬಂದಿ ಮೂಲಕ ಪೋರ್ಟರ್‌ ಮಾದರಿಯಲ್ಲಿ ಆಯಾ ಮನೆಗಳಿಗೆ ತಲುಪಿಸಲು ಅವಕಾಶಗಳಿವೆ. ಅದಕ್ಕೆ ಪ್ರತ್ಯೇಕ ಶುಲ್ಕ ವಿಧಿಸಿ, ಸೇವೆಗಳನ್ನು ಕಲ್ಪಿಸಲು ಸಾಧ್ಯವಿದೆ. ಈ ಕುರಿತು ಇನ್ನೂ ಆಲೋಚನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಾಜಿಸ್ಟಿಕ್‌ಗಾಗಿಯೇ ಪ್ರತ್ಯೇಕ ಲಾರಿಗಳನ್ನು ರಸ್ತೆಗಿಳಿಸಲು ನಿಗಮ ಚಿಂತನೆ ನಡೆಸಿದೆ. ಆರಂಭದಲ್ಲಿ ಹತ್ತು ಲಾರಿಗಳನ್ನು ಪರಿಚಯಿಸುವ ಉದ್ದೇಶ ಇದೆ. ಈ ಪ್ರಕ್ರಿಯೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಮುಂಬರುವ ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ.
– ವಿ. ಅನ್ಶುಕುಮಾರ್‌, ಕೆಎಸ್‌ಆರ್‌ಟಿಸಿ ಎಂಡಿ

 ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

dam-1724038171

Karnataka: 50 ವರ್ಷ ಮೀರಿದ ಜಲಾಶಯ ದುರಸ್ತಿಗೆ 10 ಸಾವಿರ ಕೋ.ರೂ.

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.