ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್
ಉಡ್ತಾ ಬೆಂಗಳೂರು ಎನ್ನುವುದು ಸರಿಯಲ್ಲ
Team Udayavani, May 24, 2024, 8:07 PM IST
ಬೆಂಗಳೂರು: “ಉಡ್ತಾ ಬೆಂಗಳೂರು’ ಸಹಿತ ಬೇಕಾಬಿಟ್ಟಿ ಹೇಳಿಕೆಗಳ ಮೂಲಕ ಬೆಂಗಳೂರಿಗೆ ಕೆಟ್ಟ ಹೆಸರು ತರಬೇಡಿ ಎಂದು ಗೃಹ ಸಚಿವ ಡಾ| ಪರಮೇಶ್ವರ್ ಅವರು ಬಿಜೆಪಿ ವಿರುದ್ಧ ಆಕ್ರೋಶದಿಂದ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಹೊರಟಿದ್ದೇವೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿದ್ದರು. ಅಂಥವರನ್ನು ಗಡಿಪಾರು ಮಾಡುವ ಕೆಲಸ ಮಾಡುತ್ತಿದ್ದೇವೆ. ಹೀಗಿರುವಾಗ, ಉಡ್ತಾ ಬೆಂಗಳೂರು ಅನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಬಿಜೆಪಿಯವರ ಕಾಲದಲ್ಲಿ ಕೊಲೆಗಳು ಆಗಿಲ್ಲವೇ? ನಾವು ಕೊಲೆ ಆಗಲಿ ಎಂದು ಬಯಸುವುದಿಲ್ಲ. ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ. ಈ ಹಿಂದೆ ಅನೇಕ ಸಂದರ್ಭಗಳಲ್ಲಿ ಉತ್ತಮವಾಗಿ ನಿರ್ವಹಣೆ ಮಾಡಿದ್ದು, ಈಗಲೂ ಉತ್ತಮ ಆಡಳಿತ ನೀಡುತ್ತಿದ್ದೇವೆ. ನೇಹಾ ಮತ್ತು ಅಂಜಲಿ ಪ್ರಕರಣಗಳಲ್ಲಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಿದ್ದೇವೆ. ಚುನಾವಣ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ಪೂರೈಸಿದ್ದೇವೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.