ಕುಲಾಲರ ಮಾತೃ ಸಂಘ ; ಚುನಾವಣೆ ಅಸಿಂಧು: ಉ.ನಿಬಂಧಕರ ಆದೇಶ ರದ್ದು
Team Udayavani, Dec 7, 2024, 6:20 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2024-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಯನ್ನು ಅಸಿಂಧುಗೊಳಿಸಿ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಹಕಾರ ಸಂಘಗಳ ಉಪ ನಿಬಂಧಕರ ಆದೇಶ ಪ್ರಶ್ನಿಸಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಮಯೂರ್ ಉಲ್ಲಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚಿಗೆ ಈ ಆದೇಶ ಹೊರಡಿಸಿದೆ.
ಸಂಘದ 2024-26ನೇ ಸಾಲಿಗೆ ಕಾರ್ಯಕಾರಿ ಸಮಿತಿಯ ಆಯ್ಕೆಗೆ 2024ರ ನವಂಬರ್ 10ರಂದು ಚುನಾವಣೆ ನಡೆದಿತ್ತು. ಆದರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ಅಸಿಂಧುಗೊಳಿಸಿದ್ದ ಸಹಕಾರ ಸಂಘಗಳ ಉಪ ನಿಬಂಧಕರು 45 ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು. ಅಲ್ಲಿವರೆಗೆ ಹಾಲಿ ಕಾರ್ಯಕಾರಿ ಸಮಿತಿಯು ಮುಂದುವರಿಯಲಿ ಎಂದು ನವಂಬರ್ 20ರಂದು ಆದೇಶ ಹೊರಡಿಸಿದ್ದರು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.