ಮೋದಿ-ಎಚ್ ಡಿಕೆ ಭೇಟಿ; ಇನ್ನೂ ಮುಗಿಯದ ಖಾತೆ ಹಂಚಿಕೆ ಬಿಕ್ಕಟ್ಟು
Team Udayavani, May 28, 2018, 6:21 PM IST
ನವದೆಹಲಿ: ಪ್ರಮುಖ ಖಾತೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್, ಜೆಡಿಎಸ್ ನಡುವೆ ಸೋಮವಾರವೂ ದೆಹಲಿಯಲ್ಲಿ ಕಸರತ್ತು ಮುಂದುವರಿದಿದ್ದು, ಹಣಕಾಸು ಖಾತೆಗಾಗಿ ಕಾಂಗ್ರೆಸ್ ಬಿಗಿ ಪಟ್ಟು ಹಿಡಿದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬೇಷರತ್ತಾಗಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಎಂದು ಕಾಂಗ್ರೆಸ್ ಈ ಮೊದಲು ಹೇಳಿತ್ತಾದರೂ ಇದೀಗ ಹಣಕಾಸು, ಜಲಸಂಪನ್ಮೂಲ, ಬೃಹತ್ ಕೈಗಾರಿಕೆ, ಅಬಕಾರಿ, ಸಾರಿಗೆ, ಇಂಧನ ಖಾತೆ ಹಾಗೂ ಸಿಎಂ ಪಟ್ಟಕ್ಕೂ ಬೇಡಿಕೆ ಇಟ್ಟಿದೆ ಎಂದು ಹೇಳಲಾಗುತ್ತಿದೆ.
ಏತನ್ಮಧ್ಯೆ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ನಾನು ರಾಜ್ಯದ ಆರು ಕೋಟಿ ಜನರ ಮುಲಾಜಿನಲ್ಲಿ ಇಲ್ಲ, ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂದು ಮಾಧ್ಯಮಗಳ ಜತೆ ಮಾತನಾಡುತ್ತ ಪ್ರತಿಕ್ರಿಯೆ ನೀಡಿದ್ದಾರೆ.
30-30 ತಿಂಗಳ ಆಧಾರದಲ್ಲಿ ಅಧಿಕಾರ ಹಂಚಿಕೊಳ್ಳಲು ಚರ್ಚೆ ನಡೆದಿದೆ ಎಂದು ವರದಿ ಹೇಳಿದೆ. ನವದೆಹಲಿಯ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರು ಸಮ್ಮಿಶ್ರ ಸರ್ಕಾರದಲ್ಲಿನ ಒಡಂಬಡಿಕೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ರಾಜ್ ಘಾಟ್ ಗೆ ಸಿಎಂ ಭೇಟಿ:
ದೆಹಲಿಯಲ್ಲಿರುವ ಕುಮಾರಸ್ವಾಮಿ ಸೋಮವಾರ ರಾಜ್ ಘಾಟ್ ಗೆ ಭೇಟಿ ನೀಡಿ ಮಹಾತ್ಮಗಾಂಧಿ ಅವರ ಸಮಾಧಿಗೆ ಪುಪ್ಪಗುಚ್ಛ ಇಟ್ಟು ನಮನ ಸಲ್ಲಿಸಿದರು.
ಪ್ರಧಾನಿ ಭೇಟಿಯಾದ ಎಚ್ ಡಿಕೆ:
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹದಾಯಿ, ಸಾಲಮನ್ನಾ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಬೆಂಬಲ ಕೋರಿದ್ದೇನೆ. ಮಹದಾಯಿಗೆ ಸಂಬಂಧಿಸಿದಂತೆ ಮೂರು ರಾಜ್ಯಗಳ ಸಿಎಂಗಳ ಸಭೆ ಕರೆಯಲು ಪ್ರಧಾನಿ ಅವರಲ್ಲಿ ಮನವಿ ಮಾಡಿದ್ದೇನೆ. ಮೋದಿ ಅವರು ಕೂಡಾ ಸುದೀರ್ಘವಾಗಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರು, ಅವರು ಕೂಡಾ ಈ ಸಂದರ್ಭದಲ್ಲಿ ನನಗೆ ಹಲವಾರು ಸಲಹೆಗಳನ್ನು ನೀಡಿದ್ದು, ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.