ಕಾಸರಗೋಡು ಕನ್ನಡಿಗರ ಪರಂಪರಾಗತ ಭಾವನೆಗಳನ್ನುಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ: ಎಚ್ ಡಿಕೆ
Team Udayavani, Jun 27, 2021, 4:12 PM IST
ಬೆಂಗಳೂರು: ಕಾಸರಗೋಡಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಕರ್ನಾಟಕ ಮತ್ತು ಕೇರಳ ರಾಜ್ಯಗಳ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ. ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ.ಅಲ್ಲಿನ ಜನರೊಂದಿಗೆ ಕರ್ನಾಟಕ ಮತ್ತು ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ, ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ ಮತ್ತು ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮುಂದಿನ ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡುವ ಅಧಿಕಾರ ಶಾಸಕರಿಗಿಲ್ಲ: ಕಾಂಗ್ರೆಸ್ ಶಿಸ್ತುಸಮಿತಿ
ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ. ಗ್ರಾಮದ ಹೆಸರಿನ ಅರ್ಥವನ್ನು ಕಾಪಾಡಿಕೊಳ್ಳುವ ಉದ್ದೇಶ ಹೊಂದಿರುವ ಕೇರಳ ಸರ್ಕಾರ ಅವುಗಳ ಮೂಲ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.