ಕುಮಾರಸ್ವಾಮಿ ರಾಜೀನಾಮೆ ನೀಡುವುದು ಸೂಕ್ತ: ಹೊರಟ್ಟಿ
Team Udayavani, Jul 8, 2019, 3:05 AM IST
ಬೆಳಗಾವಿ: “ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯದಲ್ಲಿ ಒಬ್ಬರಿಗೊಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಶಾಸಕರ ನಡೆ ಗಮನಿಸುತ್ತ ಹೋದರೆ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿಲ್ಲ ಎನ್ನುವುದು ಗೋಚರವಾಗುತ್ತಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಲ್ಲ ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ಕುಮಾರ್ ಕೂಡಲೇ ಅಂಗೀಕರಿಸಬೇಕು. ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅತೃಪ್ತ ಶಾಸಕರ ಸಾಮೂಹಿಕ ರಾಜೀನಾಮೆ ಹಿಂದೆ ಒಬ್ಬರಲ್ಲ, ಅನೇಕ ಮಂದಿಯ ಕೈವಾಡವಿದೆ.
ಅತೃಪ್ತ ಮೈತ್ರಿ ಪಕ್ಷಗಳ ಶಾಸಕರ ಮನವೊಲಿಸುವುದು ಸೂಕ್ತವಲ್ಲ. ಈ ಬಾರಿ ರಾಜೀನಾಮೆ ಕೊಡುವಾಗ ಹೊಸದೊಂದು ಪದ್ಧತಿ ನೋಡಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸುವ ಪರಂಪರೆ ಇತ್ತು. ಕೆಲವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.