ಸ್ವಗ್ರಾಮ ಪ್ರವೇಶಕ್ಕೆ ಕುಮಟಳ್ಳಿಗೆ ನಿಷೇಧ!
Team Udayavani, Nov 30, 2019, 3:04 AM IST
ತೆಲಸಂಗ: ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅವರ ಸ್ವಗ್ರಾಮ ತೆಲಸಂಗದಲ್ಲಿ ಅವರ ಪ್ರವೇಶಕ್ಕೆ ನಿಷೇಧ ಫಲಕ ಹಾಕಲಾಗಿದೆ! ಶುಕ್ರವಾರ ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಗ್ರಾಮಕ್ಕೆ ಆಗಮಿಸುವ ಮುನ್ನ ಗ್ರಾಮದ ವಿವಿಧೆಡೆ ಇಂಥ ಫಲಕಗಳನ್ನು ಪ್ರದರ್ಶಿಸಲಾಗಿದೆ.
“ಅಥಣಿ ಶಿವಯೋಗಿಗಳ ಪುಣ್ಯಕ್ಷೇತ್ರದಲ್ಲಿ ಹಣಕ್ಕಾಗಿ ತಮ್ಮ ಶಾಸಕ ಸ್ಥಾನವನ್ನೇ ಮಾರಾಟ ಮಾಡಿಕೊಂಡ ಅನರ್ಹರಿಗೆ ನಮ್ಮ ಗ್ರಾಮದಲ್ಲಿ ಪ್ರವೇಶ ಇಲ್ಲ’ ಎಂದು ಒಂದು ಫಲಕದಲ್ಲಿ ಹೇಳಿಕೆ ಇದ್ದರೆ, ಇನ್ನೊಂದು ಫಲಕದಲ್ಲಿ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ ಹೆಗಡೆ ಭಾವಚಿತ್ರ ಹಾಕಿ, “ಪಕ್ಷಾಂತರ ಮಾಡಿದ ಅನರ್ಹ ಶಾಸಕರನ್ನು ತಮಿಳುನಾಡು, ಮಹಾರಾಷ್ಟ್ರ, ಗುಜರಾತಿನ ಜನ ಸೋಲಿಸಿದ್ದಾರೆ.
ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಅನರ್ಹ ಶಾಸಕ ಗೆದ್ದರೂ ಆ ಕ್ಷೇತ್ರದ ಮತದಾರ ತನ್ನನ್ನು ತಾನು ಹಣ-ಹೆಂಡಕ್ಕೆ ಅಡವಿಟ್ಟುಕೊಂಡಂತೆ’ ಎಂಬ ಬರಹವಿದೆ. ಫಲಕದ ವಿಷಯವನ್ನು ಪೊಲೀಸರು ಚುನಾವಣಾ ಆಯೋಗದ ಗಮನಕ್ಕೆ ತಂದ ನಂತರ ತೆರವುಗೊಳಿಸಲಾಗಿದೆ. ಫಲಕ ಹಾಕಿದವರ ವಿರುದ್ಧ ದೂರು ದಾಖಲಿಸುವಂತೆ ಚುನಾವಣಾ ಆಯೋಗ ಗ್ರಾ.ಪಂ. ಪಿಡಿಒಗೆ ಸೂಚಿಸಿದ್ದು, ಐಗಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.