ಕುಂಭಮೇಳಕ್ಕೆ ರಾಜ್ಯದ ಜನತೆಗೆ ಆಹ್ವಾನ
Team Udayavani, Dec 27, 2018, 12:00 PM IST
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ (ಹಿಂದಿನ ಅಲಹಾಬಾದ್)ನಲ್ಲಿ ಜ.15ರಿಂದ ಮಾ.31ರವರೆಗೆ ನಡೆಯುವ ಕುಂಭಮೇಳಕ್ಕೆ ಕರ್ನಾಟಕದ ಜನತೆಗೆ ಉತ್ತರ ಪ್ರದೇಶದ ಸಚಿವ ಸಿದ್ಧಾರ್ಥ್ನಾಥ್ ಸಿಂಗ್ ಆಹ್ವಾನ
ನೀಡಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐತಿಹಾಸಿಕ ಕುಂಭಮೇಳಕ್ಕಾಗಿ 3,200 ಹೆಕ್ಟೇರ್ ಪ್ರದೇಶವನ್ನು ಸ್ಮಾರ್ಟ್ ಸಿಟಿಯನ್ನಾಗಿ ಪರಿವರ್ತಿಸಲಾಗಿದೆ. 800 ವಿಶೇಷ ರೈಲುಗಳ ಸೌಲಭ್ಯ, 1 ಲಕ್ಷ 22 ಸಾವಿರ ತಾತ್ಕಾಲಿಕ ಶೌಚಾಲಯ, ವಸತಿ ವ್ಯವಸ್ಥೆ ಸೇರಿದಂತೆ ಕುಂಭಮೇಳಕ್ಕೆ ಆಗಮಿಸುವ ಪ್ರವಾಸಿಗರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗಿದೆ. ಅಗತ್ಯವಾದ ಮೂಲ ಸೌಕರ್ಯ ಹಾಗೂ 15 ಕೋಟಿ ಜನರಿಗೆ ವಸತಿ ಕಲ್ಪಿಸಲು 4,200 ಕೋಟಿ ರೂ. ವ್ಯಯಿಸಲಾಗಿದೆ ಎಂದು ತಿಳಿಸಿದರು.
ಕುಂಭಮೇಳದ ವಿವಿಧ ಕಾರ್ಯಕ್ರಮದ ಸ್ಥಳ, ಸಮಯ ಹಾಗೂ ವಿಳಾಸ ಹುಡುಕಲು ಉತ್ತರ ಪ್ರದೇಶ ಸರ್ಕಾರ ವೈಬ್‌ಸೈಟ್ (kuಞಚಿಜಞಛಿlಚಟಟlಜಿcಛಿ.ಜಟv.ಜಿn) ಅಭಿವೃದ್ಧಿ ಪಡಿಸಿದೆ. ಇದರಲ್ಲಿ ಆ್ಯಪ್ ಡೌನ್‌ಲೋಡ್
ಮಾಡಿಕೊಂಡರೆ ಕುಂಭ ಮೇಳದ ಬಗ್ಗೆ ಎಲ್ಲಾ ಮಾಹಿತಿಗಳು ಸಿಗಲಿವೆ. ಭದ್ರತೆ ಗಾಗಿ 1135 ಸಿಸಿಟಿವಿ ಅಳವಡಿಸಲಾಗಿದೆ ಎಂದರು.
ತಪ್ಪಾಗಿ ಅರ್ಥೈಸಲಾಗಿದೆ: ಹನುಮಂತ ದಲಿತ ಸಮುದಾಯಕ್ಕೆ ಸೇರಿದವನಲ್ಲ. ಸಂಕಟಮೋರ್ಚ್ ಎಂದು ಹನುಮಾನ್‌ಗೆ ಕರೆಯಲಾಗು ತ್ತದೆ. ಸಂಕಟ ಬಂದಾಗ ಹನುಮಂತನನ್ನು ನೆನೆಯಲಾಗುವುದು ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾತನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಹೇಳಿದರು.
ಕುಂಭಮೇಳದಲ್ಲಿ ಬೆಂಗಳೂರಿಗರ ಕೈಚಳಕ
ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್ ಅನ್ನು ಸ್ಮಾರ್ಟ್ ಸಿಟಿಯನ್ನಾಗಿ ಮಾಡಲು ದೇಶದ ಹಲವು ತಂತ್ರಜ್ಞಾನ ತಜ್ಞರು, ಇಂಜಿನಿಯರುಗಳು ಭಾಗವಹಿಸಲಿದ್ದಾರೆ. ಆದರೆ ಅದರಲ್ಲಿ ಹೆಚ್ಚಿನವರು ಬೆಂಗಳೂರಿಗೆ ಸೇರಿದವರಾಗಿದ್ದಾರೆ. ಬೆಂಗಳೂರಿನ ಗೋಡೆಗಳ ಮೇಲೆ ಚಿತ್ರ ಬಿಡಿಸಿರುವುದು ಉತ್ತರ ಪ್ರದೇಶ ಸರ್ಕಾರದ ಗಮನ ಸೆಳೆದಿದೆ. ಹೀಗಾಗಿ ಕುಂಭ ಮೇಳದ ಸ್ಮಾರ್ಟ್ ಸಿಟಿಯಲ್ಲಿನ ಗೋಡೆಗಳ ಮೇಲೆ ಚಿತ್ರ ಬಿಡಿಸಲು ಬೆಂಗಳೂರಿನ ಕಲಾವಿದರಿಗೆ ಅವಕಾಶ ನೀಡಲಾಗಿದೆ.
ಬೆಂಗಳೂರಿನ ಗೋಡೆಗಳ ಮೇಲೆ ಚಿತ್ರ ಬಿಡಿಸಿದ ಕಲಾವಿದರೆ ಕುಂಭ ಮೇಳದ ಸ್ಮಾರ್ಟ್ ಸಿಟಿಯ ಗೋಡೆಗಳ ಮೇಲೂ ಚಿತ್ರ ರಚಿಸಿದ್ದಾರೆ ಎಂದು ಸಿದ್ಧಾರ್ಥ್ನಾಥ್ ಸಿಂಗ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.