Rajya Sabha; ಕಣದಲ್ಲೇ ಉಳಿದ ಕುಪೇಂದ್ರ ರೆಡ್ಡಿ; ಈಗ ಮೂರು ಪಕ್ಷಗಳಿಗೂ ಅಡ್ಡ ಮತ ಭೀತಿ
Team Udayavani, Feb 21, 2024, 12:43 AM IST
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಫೆ. 27ರಂದು ನಡೆಯಲಿರುವ ಚುನಾವಣೆಗೆ ಅಂತಿಮವಾಗಿ ಐವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿರುವುದ ರಿಂದ ಈಗ ಈ ಚುನಾವಣೆ ಕುತೂಹಲ ಕಾರಿ ಘಟ್ಟ ತಲುಪಿದೆ.
ನಾಮಪತ್ರ ವಾಪಸ್ ಪಡೆಯಲು ಮಂಗಳವಾರ ಕಡೆಯ ದಿನವಾಗಿತ್ತು. ತಮ್ಮ ಗೆಲುವಿಗೆ 9 ಮತಗಳ ಕೊರತೆ ಎದುರಿ ಸುತ್ತಿರುವ ಎನ್‌ಡಿಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಕೊನೆಘಳಿಗೆಯಲ್ಲಿ ನಾಮಪತ್ರ ವಾಪಸ್ ಪಡೆಯಬಹುದೆಂಬ ನಿರೀಕ್ಷೆ ಹುಸಿಯಾಗಿರುವು ದರಿಂದ ಈಗ ಕಾಂಗ್ರೆಸ್‌ನ ಮೂವರು ಅಧಿಕೃತ ಅಭ್ಯರ್ಥಿಗಳಲ್ಲಿ ನಡುಕ ಉಂಟಾಗಿದೆ.
ಕುಪೇಂದ್ರ ರೆಡ್ಡಿಗೆ ಬಿಜೆಪಿಯ ಹೆಚ್ಚುವರಿ 20 ಮತಗಳು ಹಾಗೂ ಜೆಡಿಎಸ್‌ನ 16 ಮತಗಳು ಚಲಾವಣೆಯಾಗಬಹುದೆಂಬ ಲೆಕ್ಕಾಚಾರವಿದ್ದು, ಅವರ ಗೆಲುವಿಗೆ ಇನ್ನೂ 9 ಮತಗಳ ಅಗತ್ಯವಿದೆ. ಈ ಅಗತ್ಯ ಮತಗಳನ್ನು ಎಲ್ಲಿಂದ ಪಡೆಯುತ್ತಾರೆ ಎಂಬುದು ಈಗ ಕುತೂಹಲ. ಸಹಜವಾಗಿ ಅವರು ಕಾಂಗ್ರೆಸ್ ಮತಬುಟ್ಟಿಗೆ ಕೈ ಹಾಕುವ ಪ್ರಯತ್ನ ನಡೆಸಿದಂತೆ ಕಾಣುತ್ತಿದೆ. ಜೆಡಿಎಸ್‌ನ ಅತೃಪ್ತರನ್ನು ಸೆಳೆಯಲು ಕಾಂಗ್ರೆಸ್ ಕೂಡ ಪ್ರತಿತಂತ್ರ ರೂಪಿಸುತ್ತಿದೆ.
ಕಣದಲ್ಲಿ ಕಾಂಗ್ರೆಸ್‌ನಿಂದ ಅಜಯ್ ಮಾಕೆನ್, ಜಿ.ಸಿ. ಚಂದ್ರಶೇಖರ್, ಡಾ| ನಾಸೀರ್ ಹುಸೇನ್ ಕಣದಲ್ಲಿದ್ದಾರೆ. ಕಾಂಗ್ರೆಸ್‌ನ ಎಲ್ಲ 136 ಮತಗಳು ಈ ಮೂವರಿಗೆ ಚಲಾವಣೆಯಾದರೆ ಆತಂಕ ಇಲ್ಲದೆ ಗೆಲುವಿನ ದಡ ಸೇರಲಿದ್ದಾರೆ. ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧಿಸಿದ್ದಾರೆ. ಒಂದು ವೇಳೆ ಅಡ್ಡ ಮತದಾನ ವಾದರೆ ಲೆಕ್ಕಾಚಾರ ಬುಡಮೇಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.