ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ: ಸಚಿವ ಶಿವರಾಮ ಹೆಬ್ಬಾರ್ ಭರವಸೆ

ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಕಾರ್ಮಿಕ ಸಚಿವರ ಸ್ವಯಂ ಭೇಟಿ ; ಕಾರ್ಮಿಕರಿಗೆ ಅಭಯ

Team Udayavani, Apr 19, 2020, 10:06 PM IST

ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ: ಸಚಿವ ಶಿವರಾಮ ಹೆಬ್ಬಾರ್ ಭರವಸೆ

ಬೆಂಗಳೂರು: ಕೋವಿಡ್ 19 ಸಂಬಂಧಿತ ಈ ಲಾಕ್ ಡೌನ್ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್ ಅವರು ಇಂದು ಸ್ಪಷ್ಟವಾಗಿ ಹೇಳಿದ್ದಾರೆ.

ಕಾರ್ಮಿಕರ ಆರೋಗ್ಯ ದೃಷ್ಠಿಯಿಂದ ಎಲ್ಲಾ ಕಾರ್ಮಿಕರಿಗೂ ಮುಖಗವಸು ಹಾಗೂ ಸ್ಯಾನಿಟೈಜರ್ ಗಳನ್ನು ಒದಗಿಸುವುದರ ಜೊತೆಗೆ ಕಾರ್ಮಿಕ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಪ್ರತಿ ದಿನ ಎರಡು ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಮಿಕರ ಯೋಗ ಕ್ಷೇಮವನ್ನು ವಿಚಾರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸಚಿವರು ಇದೇ ಸಂಧರ್ಭದಲ್ಲಿ ಆದೇಶಿಸಿದರು.

ನಗರದ ವಿವಿಧೆಡೆ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳ ಬಳಿ ತೆರಳಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಕಷ್ಟ-ಸಂಕಷ್ಟಗಳನ್ನು ಖುದ್ದು ಆಲಿಸಿದ ಸಚಿವ ಶಿವರಾಂ ಹೆಬ್ಬಾರ್ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ತಮ್ಮ ಈ ಭೇಟಿಯ ಮೂಲ ಉದ್ದೇಶ ಕಾರ್ಮಿಕರ ಸ್ಥಿತಿ-ಗತಿಗಳನ್ನು ಅರಿತು ಸೂಕ್ತ ನೆರವು ಕಲ್ಪಿಸುವುದು, ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದು ಹಾಗೂ ಕಟ್ಟಡ ಕಾರ್ಮಿಕರಲ್ಲಿ ಸರ್ಕಾರ ತಮ್ಮ ಜೊತೆಗಿದೆ ಎಂಬ ವಿಶ್ವಾಸ ಮೂಡಿಸುವುದಾಗಿದೆ ಎಂದರು.

ಊಟಕ್ಕೆ ಕೊರತೆ ಇಲ್ಲ. ಆದರೆ, ಊರಿಗೆ ಹೋಗಬೇಕೆನಿಸುತ್ತದೆ !!
ನಗರದ ಶಾಸಕ ಭವನದಿಂದ ಭಾನುವಾರ ಸಂಜೆ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿರುವ ಕಟ್ಟಡ ಕಾರ್ಮಿಕರ ಸ್ಥಿತಿ-ಗತಿಗಳನ್ನು ಸ್ವತಃ ಅರಿಯಲು ಹೊರಟ ಸಚಿವರು ಮೊದಲು ಭೇಟಿ ನೀಡಿದ್ದು ಮಾಧವ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಟ್ಟಡಕ್ಕೆ.

ಜೆಎಂಸಿ ಪ್ರಾಜೆಕ್ಟ್ (ಇಂಡಿಯಾ) ಲಿಮಿಟೆಡ್ ಗುತ್ತಿಗೆದಾರರ ಬಳಿ ಕೆಲಸ ಮಾಡುತ್ತಿದ್ದ ಬಿಹಾರ್ ಮತ್ತು ಉತ್ತರ ಪ್ರದೇಶ ಮೂಲದ 140 ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಸಚಿವರು ಭೇಟಿ ಮಾಡಿ ತಮಗೇನಾದರೂ ಸಮಸ್ಯೆಗಳಿದ್ದರೆ ತಿಳಿಸಿ ಎಂದಾಗ ಮೊದಲಿಗೆ ಮಾತನಾಡಲು ಹಿಂಜರಿದ ಕಾರ್ಮಿಕರು ಸಧ್ಯಕ್ಕೆ ತಮಗೆ ಊಟಕ್ಕೆ ಕೊರತೆ ಇಲ್ಲ ನಿಜ. ಆದರೆ, ಊರಿಗೆ ಹೋಗಬೇಕೆನಿಸುತ್ತದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಲಾಕ್ ಡೌನ್ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಇಡೀ ಭಾರತಕ್ಕೇ ಇದೆ. ಕೋವಿಡ್-19 ಎಂಬ ಮಹಾಮಾರಿ ವಿಶ್ವವನ್ನೇ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಲಾ ಕ್‍ಡೌನ್ ಘೋಷಿಸಲಾಗಿದೆ. ತಮ್ಮ ಆರೋಗ್ಯದ ಹಿತದೃಷ್ಠಿಯಿಂದ ಲಾ ಕ್‍ಡೌನ್ ಘೋಷಿಸಲಾಗಿದೆ ಎಂಬುದನ್ನು ತಾವು ಅರ್ಥಮಾಡಿಕೊಳ್ಳಬೇಕು ಮತ್ತು ಇದರಿಂದಾಗಿ ಉಂಟಾಗುವ ಸಣ್ಣಪುಟ್ಟ ಸಮಸ್ಯೆಗಳನ್ನು ತಾವು ಸಹಿಸಿಕೊಳ್ಳಬೇಕು ಎಂದು ಸಚಿವರು ಕಾರ್ಮಿಕ ವರ್ಗದವರಲ್ಲಿ ಮನವಿ ಮಾಡಿಕೊಂಡರು.

ಅಲ್ಲದೆ, ತಮಗೆ ಊಟಕ್ಕೆ ಸಮಸ್ಯೆಯಾದರೆ ನಮ್ಮನ್ನು ಸಂಪರ್ಕಿಸಿ ಎಂದು ಹೇಳಿ ಕಾರ್ಮಿಕ ಇಲಾಖೆಯ ಹಂಗರ್ ಹೆಲ್ಪ್ ಲೈನ್ 155214 ಶುಲ್ಕ- ರಹಿತ ದೂರವಾಣಿ ಸಂಖ್ಯೆ ಕುರಿತು ಮಾಹಿತಿ ನೀಡಿದರು. ಅಲ್ಲದೆ ಇವರೆಲ್ಲರಿಗೂ ದಿನಸಿ ಸಾಮಗ್ರಿಗಳ ಕಿಟ್ ಒದಗಿಸುವಂತೆ ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಮಿಕರಿಗೆ ಇಲ್ಲದ ಮಾಸ್ಕ್ ನಿಮಗೇಕೆ?
ನಂತರ, ಹೆಬ್ಬಾಳದ ಎಲ್ ಅಂಡ್ ಟಿಯ ರೇನ್ ಟ್ರೀ ಬುಲೇವಾರ್ಡ್ ಮೆರಾಕಿ ಟವರ್ಸ್‍ಗೆ ಭೇಟಿ ನೀಡಿದ ಸಚಿವರು ಭೇಟಿ ಅಲ್ಲಿನ ಸುಮಾರು 600 ಕಟ್ಟಡ ಕಾರ್ಮಿಕರೊಂದಿಗೆ ಮಾತನಾಡಲು ಮುಂದಾದರು. ಅಲ್ಲಿನ ಯಾವುದೇ ಕಾರ್ಮಿಕರು ಮುಖಗವಸು (ಮಾಸ್ಕ್) ಧರಿಸಿರಲಿಲ್ಲ ಎಂಬುದನ್ನು ಗಮನಿಸಿದ ಸಚಿವರು ಗುತ್ತಿಗೆದಾರ ಸಂಸ್ಥೆಯ ಪ್ರತಿನಿಧಿಯನ್ನು ಕರೆಸಿದರು.

ಆತ ಮುಖಗವಸು ತೊಟ್ಟುಕೊಂಡಿದ್ದುದನ್ನು ಕಂಡು ಕೆಂಡಾಮಂಡಲವಾದ ಸಚಿವರು ನೀವ್ಯಾಕೆ ಮಾಸ್ಕ್ ಹಾಕಿಕೊಂಡಿದ್ದೀರಿ? ಕಾರ್ಮಿಕರಿಗೆ ಇಲ್ಲದ ಮಾಸ್ಕ್ ನಿಮಗ್ಯಾಕೆ ಬೇಕು? ತಮ್ಮ ಆರೋಗ್ಯದಷ್ಟೇ ಕಾರ್ಮಿಕರ ಆರೋಗ್ಯದ ರಕ್ಷಣೆಯೂ ಮುಖ್ಯವಲ್ಲವೇ? ಎಂದು ಏರಿದ ಧ್ವನಿಯಲ್ಲಿ ಹೇಳಿದರು. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಸಂಸ್ಥೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಅಷ್ಟರಲ್ಲೊಬ್ಬ ಕಾರ್ಮಿಕ ನಮ್ಮ ಹಣದಿಂದಲೇ ನಾವು ಊಟ ಮಾಡುತ್ತಿದ್ದೇವೆ. ಸಂಸ್ಥೆಯಿಂದ ನಮಗೇನೂ ದೊರೆತಿಲ್ಲ ಎಂದು ಹೇಳಿದ್ದನ್ನು ಕೇಳಿದ ಸಚಿವರು ಈ ಎಲ್ಲಾ ಕಾರ್ಮಿಕರಿಗೆ ನಾಲ್ಕು ದಿನಗಳೊಳಗೆ ಅತ್ಯಗತ್ಯ ದಿನಸಿ ಪದಾರ್ಥಗಳ ಕಿಟ್ ಒದಗಿಸುವಂತೆ ಅದರ ಜೊತೆಯಲ್ಲಿಯೇ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಪೂರಕ ವಾತಾವರಣ ಸೃಷ್ಠಿಸುವ ಮಾಸ್ಕ್ ಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತದನಂತರ, ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ತೆರಳಿದ ಸಚಿವರು ನಿರ್ಮಾಣ ಹಂತದಲ್ಲಿರುವ ಅಲ್ಲಿನ ಟರ್ಮಿನಲ್-2 ನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಹಾರ್, ಜಾರ್ಖಂಡ್, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಲ ಮೂಲದ 3268 ಕಟ್ಟಡದ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಕಾರ್ಮಿಕ ಸಚಿವನಾಗಿರುವ ನಾನು ತಮ್ಮ ಪ್ರತಿನಿಧಿಯಾಗಿದ್ದೇನೆ, ಯಾರೂ ಹಸಿವಿನಿಂದ ಬಳಲಬಾರದು ಎಂಬುದು ನಮ್ಮ ಸರ್ಕಾರದ ಸದಾಶಯವಾಗಿದೆ. ತಮಗೆ ಊಟದ ಅವಶ್ಯಕತೆ ಇದ್ದರೆ ತಿಳಿಸಿ ಎಂದು ತಿಳಿಸಿದರು.

ಆ ಸಂದರ್ಭದಲ್ಲಿ ಮೌನ ಮುರಿದ ಕಟ್ಟಡ ಕಾರ್ಮಿಕರೊಬ್ಬರು, ತಮಗೆ ಇಲ್ಲಿ ಹೇಗೋ ಊಟ ದೊರೆಯುತ್ತಿದೆ. ಆದರೆ, ತಮಗೆ ಉದ್ಯೋಗವಿಲ್ಲದಿರುವ ಹಿನ್ನೆಲೆಯಲ್ಲಿ ವೇತನ ದೊರೆಯುವುದಿಲ್ಲ. ವೇತನ ದೊರೆಯದಿದ್ದಲ್ಲಿ, ತಮ್ಮ ಸ್ವಂತ ಊರಿನಲ್ಲಿರುವ ಮನೆ-ಮಂದಿಗೆ ಊಟ ಕೊಡುವವರಾರು? ಎಂದು ಮರುಪ್ರಶ್ನೆ ಹಾಕಿದರು.

ಇದು ಸಂಕಷ್ಟದ ಸಮಯ ಎಂಬುದು ಎಲ್ಲರಿಗೂ ಗೊತ್ತು. ಕಾರ್ಮಿಕರ ವೇತನದಲ್ಲಿ ಯಾವುದೇ ರೀತಿಯ ಮೊತ್ತವನ್ನೂ ಕಡಿತಮಾಡಬಾರದು ಎಂದು ಎಲ್ಲಾ ಕಾರ್ಖಾನೆಗಳಿಗೂ ಹಾಗೂ ಗುತ್ತಿಗೆದಾರ ಸಂಸ್ಥೆಗಳಿಗೂ ಈಗಾಗಲೇ ಕಟ್ಟುನಿಟ್ಟಿನ ಸೂಚಿಸಲಾಗಿದೆ. ರಾಜ್ಯ ಕಾರ್ಮಿಕ ಇಲಾಖೆ ತಮ್ಮ ಜೊತೆಗಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ನಿಗಾ ವಹಿಸುತ್ತದೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಎಲ್ ಆಂಡ್ ಟಿ ಗುತ್ತಿಗೆದಾರ ಸಂಸ್ಥೆಯ ಪ್ರತಿನಿಧಿ ಕಾರ್ಮಿಕರ ವೇತನವನ್ನು ಕಡಿತ ಮಾಡುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಪ್ರಕಟಿಸಿದಾಗ ಏಕಕಾಲದಲ್ಲಿ ಒಂದೆಂಡೆ ಹರ್ಷೋದ್ಗಾರ ಮೊಳಗಿದರೆ ಮತ್ತೊಂದೆಡೆ ಚಪ್ಪಾಳೆಯ ಶಬ್ದ ಮುಗಿಲು ಮುಟ್ಟಿತು.

ಕಾರ್ಮಿಕ ಇಲಾಖಾ ಆಯುಕ್ತ ಕೆ ಜಿ ಶಾಂತಾರಾಮ್ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಜ್ಯೋತ್ಸ್ನಾ ಅವರೂ ಸಚಿವರ ಜೊತೆಯಲ್ಲಿ ಕಟ್ಟಡ ಪ್ರದೇಶಗಳ ಭೇಟಿ ಕಾರ್ಯಕ್ರಮದಲ್ಲಿ ಸಾಥ್ ನೀಡಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.